Thursday, May 1, 2025
Homeರಾಜ್ಯಜನಗಣತಿಯೊಂದಿಗೆ ಜಾತಿಗಣತಿ ಐತಿಹಾಸಿಕ ಮತ್ತು ದೂರದೃಷ್ಟಿಯ ನಿರ್ಧಾರ : ಕುಮಾರಸ್ವಾಮಿ

ಜನಗಣತಿಯೊಂದಿಗೆ ಜಾತಿಗಣತಿ ಐತಿಹಾಸಿಕ ಮತ್ತು ದೂರದೃಷ್ಟಿಯ ನಿರ್ಧಾರ : ಕುಮಾರಸ್ವಾಮಿ

Caste census along with census is a historic and visionary decision: Kumaraswamy

ನವದೆಹಲಿ, ಏ.1-ಜನಗಣತಿಯೊಂದಿಗೆ ಜಾತಿಗಣತಿಯನ್ನು ನಡೆಸಲು ಕೇಂದ್ರ ಸಚಿವ ಸಂಪುಟ ನಿರ್ಧರಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿರ್ಧಾರ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಬಣ್ಣಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಂಬರುವ ಜನಗಣತಿ ಜೊತೆಯಲ್ಲಿಯೇ ಜಾತಿಗಣತಿಯನ್ನೂ ನಡೆಸುವ ಮಹತ್ವದ ನಿರ್ಧಾರವನ್ನು ಮೋದಿಯವರ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ. ಅವರ ಕ್ರಿಯಾಶೀಲ ನಾಯಕತ್ವದಲ್ಲಿ ಇದು ಐತಿಹಾಸಿಕ ಮತ್ತು ದೂರದೃಷ್ಟಿಯ ನಿರ್ಧಾರವಾಗಿದೆ. ಜಾತಿ ಗಣತಿಯು 1931ರ ನಂತರ ಇದೇ ಮೊದಲ ಬಾರಿಗೆ ಮುಂಬರುವ ರಾಷ್ಟ್ರೀಯ ಜನಗಣತಿಯ ಭಾಗವಾಗಲಿದೆ ಎಂಬುದು ಗಮನಾರ್ಹ ಎಂದಿದ್ದಾರೆ.

ಈ ಮಹತ್ವದ ಹೆಜ್ಜೆಯು ಭಾರತವು ಅಧಿಕೃತ, ವೈಜ್ಞಾನಿಕ ಮತ್ತು ಪಾರದರ್ಶಕವಾದ ಜಾತಿ ದತ್ತಾಂಶ ಹೊಂದಲಿದೆ. ಕೇವಲ ರಾಜಕೀಯ ಪ್ರೇರಿತ ರಾಜ್ಯ ಮಟ್ಟದ ಸಮೀಕ್ಷೆಗಳು ವಿಶ್ವಾಸಾರ್ಹತೆ, ಏಕರೂಪತೆ ಹೊಂದಿರುವುದಿಲ್ಲ ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ.

ಈ ದಿಟ್ಟ ಕ್ರಮದೊಂದಿಗೆ ಮೋದಿ ಅವರು ಸಮಗ್ರ ಆಡಳಿತ ಮತ್ತು ದತ್ತಾಂಶ ಚಾಲಿತ ನೀತಿ ನಿರೂಪಣೆ ಬಗ್ಗೆ ಹೊಂದಿರುವ ತಮ್ಮ ಅಚಲ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಅಲ್ಲದೇ, ಈ ಗಣತಿಯು ಕಲ್ಯಾಣ ಕಾರ್ಯಕ್ರಮಗಳನ್ನು ಬಲಗೊಳಿಸುತ್ತದೆ. ಸಾಮಾಜಿಕ ನ್ಯಾಯವನ್ನು ಇನ್ನಷ್ಟು ಖಚಿತಪಡಿಸುತ್ತದೆ ಹಾಗೂ ಸರ್ವರಿಗೂ ಸಮಾನ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ರಾಷ್ಟ್ರದ ಹಿತದೃಷ್ಟಿಯಿಂದ ಈ ನಿರ್ಣಾಯಕ ಮತ್ತು ದೂರದೃಷ್ಟಿಯ ನಿರ್ಧಾರಕ್ಕಾಗಿ ಪ್ರಧಾನಮಂತ್ರಿಯವರಿಗೆ ನನ್ನ ಹೃತ್ತೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈ ನಿರ್ಧಾರವನ್ನು ನಾನು, ನಮ್ಮ ಪಕ್ಷವು ಸ್ವಾಗತಿಸುತ್ತದೆ ಎಂದು ಅವರು ಹೇಳಿದ್ದಾರೆ.

RELATED ARTICLES

Latest News