ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ಫಲಿತಾಂಶವನ್ನು ನಾಳೆ ಪ್ರಕಟಿಸಲಿದೆ.
ಕಳೆದ ಮಾ. 21 ರಿಂದ ಏ. 4 ವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಅನ್ನು ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವು ಮುಕ್ತಾಯವಾಗಿದ್ದು, ನಾಳೆ ಫಲಿತಾಂಶ ಪ್ರಕಟಿಸುವುದಾಗಿ ಮಂಡಳಿ ತಿಳಿಸಿದೆ.
ಎಸ್.ಎಸ್.ಎಲ್.ಸಿ.ಪರೀಕ್ಷೆ-1ರ ಫಲಿತಾಂಶವನ್ನು ನಾಳೆ ಬೆಳಿಗ್ಗೆ 11-30 ಗಂಟೆಗೆ ಮಂಡಲಿಯಲ್ಲಿ ನಡೆಯುವ ಸುದ್ದಿಗೋಷ್ಠಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಮಧು ಬಂಗಾರಪ್ಪ ಅವರು ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.
ಫಲಿತಾಂಶವನ್ನು http://karresults.nic.in ಜಾಲತಾಣದಲ್ಲಿ ನಾಳೆ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಮಂಡಳಿ ಪ್ರಕಟಣೆ ತಿಳಿಸಿದೆ.