ಬೆಂಗಳೂರು,ಫೆ.4- ಆಟೋವೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್ ಮೃತಪಟ್ಟಿರುವ ಘಟನೆ ವಿಲ್ಸನ್‌ಗಾರ್ಡನ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಬಿಟಿಎಂ ಲೇಔಟ್ ನಿವಾಸಿ ಕುಮಾರ್ (41) ಮೃತಪಟ್ಟವರು.ಇವರು ಕೆಎಸ್‌ಆರ್‌ಟಿಸಿ 4ನೇ ಡಿಪೋ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.
ಇಂದು ಬೆಳಗ್ಗೆ 6 ಗಂಟೆ ಸುಮಾರಿನಲ್ಲಿ ಕುಮಾರ್ ಅವರು ಬೈಕ್‌ನಲ್ಲಿ ಬಿಟಿಎಸ್ ರಸ್ತೆಯ ಮೆಡಿಕಲ್ ಸೆಂಟ್ರಲ್ ಎದುರು ಹೋಗುತ್ತಿದ್ದಾಗ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಮುನ್ನುಗ್ಗಿದ ಆಟೋವೊಂದು ಇವರ ಬೈಕ್ ಸೇರಿದಂತೆ ಎರಡು ಆಟೋಗಳಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಕುಮಾರ್ ಅವರು ಗಂಭೀರ ಗಾಯಗೊಂಡರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ವೈದ್ಯರು ಪರೀಕ್ಷಿಸಿ ಮಾರ್ಗಮಧ್ಯೆ ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ.
ಮತ್ತೊಂದು ಬೈಕ್‌ನ ಸವಾರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುದ್ದಿ ತಿಳಿದು ವಿಲ್ಸನ್‌ಗಾರ್ಡನ್ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
