ಯಾದಗಿರಿ,ಮೇ.5 : ನೀರು ಕುಡಿಯಲು ಹೋಗಿದ್ದ ಮೂವರು ಬಾಲಕರು ಹೊಂಡದಲ್ಲಿ ಮುಳುಗಿ ದುರ್ಮರಣ ಹೊಂದಿರುವ ಘಟನೆ ತಾಲೂಕಿನ ಅಚೊಲಾ ತಾಂಡಾದಲ್ಲಿ ನಡೆದಿದೆ. ಕುರಿ ಕಾಯಲು ಹೋಗಿದ್ದ ಬಾಲಕರು ಬೇಸಿಗೆ ಹಿನ್ನಲೆ ನೀರಿನ ದಾಹ ತಣಿಸಿಕೊಳ್ಳಲು ಕೃಷಿ ಹೊಂಡದ ಬಳಿ ಹೋಗಿದ್ದರು ಈ ವೇಳೆ ಕಾಲು ಜಾರಿ ಬಿದ್ದು ನೀರು ಪಾಲು ಆಗಿರಬಹುದು ಎನ್ನಲಾಗಿದೆ.
ಅಚೊಲಾ ತಾಂಡಾದ ನಿವಾಸಿಗಳಾದ ಅಮರ್(12), ಜಯ(14), ಕೃಷ್ಣ 10) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಯಾದಗಿರಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಮಕ್ಕಳ ಸಾವಿನ ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
- ಕುತೂಹಲ ಕೆರಳಿಸಿದ ಕೇಂದ್ರ ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್-ಮೋದಿ ಭೇಟಿ
- ಕೆಂಪುಕೋಟೆ ಹಸ್ತಾಂತರಕ್ಕೆ ಮೊಘಲ್ ವಂಶಸ್ಥರು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ
- ಬೆಂಗಳೂರು : ಎರಡು ಪ್ರತ್ಯೇಕ ದ್ವಿಚಕ್ರ ವಾಹನ ಅಪಘಾತಗಳಲ್ಲಿ ಇಬ್ಬರ ಸಾವು
- ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯನ್ನು ಕೊಂದಿದ್ದ ಪತಿ ಬಂಧನ
- ಪರಿಶಿಷ್ಟ ಜಾತಿಗಳ ಸಮೀಕ್ಷೆಗೆ ಸಹಕರಿಸುವಂತೆ ಸಿಎಂ ಸಿದ್ದರಾಮಯ್ಯ ಮನವಿ