ನವದೆಹಲಿ,ಮೇ 6- ಭಯೋತ್ಪಾದನೆಯ ವಿರುದ್ಧದ ಭಾರತದ ಹೋರಾಟಕ್ಕೆ ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟೇಟಿನ್ಸ್ ಸ್ಪೀಕರ್ ಮೈಕ್ ಜಾನ್ಸನ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಭಯೋತ್ಪಾದನೆ ವಿರುದ್ಧ ಹೋರಾಡುವ ಭಾರತದ ಪ್ರಯತ್ನಕ್ಕೆ ಸಹಾಯ ಮಾಡಲು ಯುಎಸ್ ಅಗತ್ಯ ಶಕ್ತಿ ಮತ್ತು ಸಂಪನ್ಮೂಲಗಳನ್ನು ಒದಗಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಪಹಲ್ಲಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತವು ಪಾಕಿಸ್ತಾನದ ವಿರುದ್ಧ ಕ್ರಮಗಳನ್ನು ಬಿಗಿಗೊಳಿಸುತ್ತಿರುವ ಸಂದರ್ಭದಲ್ಲಿ ಅವರ ಹೇಳಿಕೆ ಬಂದಿದೆ. ಭಾರತ ಭಯೋತ್ಪಾದನೆ ವಿರುದ್ಧ ನಿಲ್ಲಬೇಕು.
ಆ ಪ್ರಯತ್ನಗಳನ್ನು ಬೆಂಬಲಿಸಲು ನಾವು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ. ಟ್ರಂಪ್ ಆಡಳಿತವು ಭಯೋತ್ಪಾದನೆಯ ವಿರುದ್ಧ ಹೋರಾಡಲು ಭಾರತಕ್ಕೆ ಇಂಧನ ಮತ್ತು ಸಂಪನ್ಮೂಲಗಳೊಂದಿಗೆ ಸಹಾಯ ಮಾಡುತ್ತದೆ ಎಂದು ಜಾನ್ಸನ್ ಪ್ರತಿಪಾದಿಸಿದ್ದಾರೆ.