ಬುಡ್ಗಾಮ್, ಮೇ 6– ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ನಡೆದ ನಾಕಾ-ತಪಾಸಣಾ ಕಾರ್ಯಾಚರಣೆಯ ಸಂದರ್ಭದಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕ ಸಹಚರರನ್ನು ಬಂಧಿಸಿದ್ದು, ಭಾರಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಹಾಗೂ ಗ್ರೆನೇಡ್‌ಗಳನ್ನು ವಶಪಡಿಸಿಕೊಂಡಿವೆ.
ಬುಡ್ಗಾಮ್‌ನ ಮಾಗಮ್‌ನ ಬುಚಿಪೋರಾ ಕವೂಸಾ ಅರೇಸ್‌ನಲ್ಲಿ ನಾಕಾ ತಪಾಸಣೆ ಕಾರ್ಯಾಚರಣೆಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಬಂಧಿತರಿಂದ ಒಂದು ಪಿಸ್ತೂಲ್, ಒಂದು ಗ್ರೆನೇಡ್ ಮತ್ತು 15 ಸಜೀವ ಗುಂಡುಗಳು ಸೇರಿದಂತೆ ಹೆಚ್ಚಿನ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪೊಲೀಸರು ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.ಏ. 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ, ಕೇಂದ್ರಾಡಳಿತ ಪ್ರದೇಶದ ಭದ್ರತಾ ಪಡೆಗಳು ಭದ್ರತೆಯನ್ನು ಹೆಚ್ಚಿಸಿವೆ ಮತ್ತು ಪ್ರದೇಶದಾದ್ಯಂತ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.