Thursday, May 8, 2025
Homeಜಿಲ್ಲಾ ಸುದ್ದಿಗಳು | District Newsಹಾಸನ / Hassanಹಾಸನ : ಮೂಜರಾಯಿ ದೇವಾಲಯದ ಪೂಜೆ ವಿವಾದ, ಅರ್ಚಕ ಆತ್ಮಹತ್ಯೆ

ಹಾಸನ : ಮೂಜರಾಯಿ ದೇವಾಲಯದ ಪೂಜೆ ವಿವಾದ, ಅರ್ಚಕ ಆತ್ಮಹತ್ಯೆ

Hassan: temple priest commits suicide

ಹಾಸನ, ಮೇ 8- ಮೂಜರಾಯಿ ಇಲಾಖೆಗೆ ಸೇರಿದ ದೇವಾಲಯದಲ್ಲೇ ಅರ್ಚಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಬೇಲೂರು ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶ್ರೀ ಲಕ್ಷ್ಮೀರಂಗನಾಥದೇವಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಂಗಸ್ವಾಮಿ ಆತ್ಮಹತ್ಯೆ ಮಾಡಿಕೊಂಡ ಅರ್ಚಕರು. ರಂಗಸ್ವಾಮಿಯವರು ಸರಿಯಾಗಿ ಪೂಜೆ ಮಾಡುತ್ತಿಲ್ಲ, ಬೇರೆ ಅರ್ಚಕರನ್ನು ನೇಮಿಸುವಂತೆ ತಹಶಿಲ್ದಾರ್ ಅವರಿಗೆ ಗ್ರಾಮಸ್ಥರು ದೂರು ನೀಡಿದ್ದರು.

ಈ ವಿಚಾರವಾಗಿ ಗ್ರಾಮಸ್ಥರು ಹಾಗೂ ರಂಗಸ್ವಾಮಿ ನಡುವೆ ವಿವಾದ ಉಂಟಾಗಿತ್ತು. ಇದರಿಂದ ಮನನೊಂದ ಅರ್ಚಕರು ದೇವಾಲಯದಲ್ಲೇ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಹಳೇಬೀಡು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News