Friday, May 9, 2025
Homeರಾಜ್ಯಹಾವೇರಿ ಜಿಲ್ಲೆಯ ಬ್ಯಾಡಗಿ ಬಳಿ ಭೀಕರ ಅಪಘಾತ : 6 ಮಂದಿ ಸಾವು

ಹಾವೇರಿ ಜಿಲ್ಲೆಯ ಬ್ಯಾಡಗಿ ಬಳಿ ಭೀಕರ ಅಪಘಾತ : 6 ಮಂದಿ ಸಾವು

Horrific accident near Byadgi in Haveri district: 6 dead

ಬೆಂಗಳೂರು,ಮೇ 8- ಹಾವೇರಿ ಜಿಲ್ಲೆಯ ಬ್ಯಾಡಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು, ಈ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ 11.30ರ ಸುಮಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ 48ರ ಹಾವೇರಿ ಜಿಲ್ಲೆಯ ಮೋಟೆಬೆನ್ನೂರು ಬಳಿ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಅತಿವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ.

ಕಾರಿನಲ್ಲಿ ಇಬ್ಬರು ಪುರುಷರು, ಇಬ್ಬರು ಮಕ್ಕಳು ಹಾಗೂ ನಾಲ್ವರು ಮಹಿಳೆಯರು ಪ್ರಯಾಣಿಸುತ್ತಿದ್ದರು. ಈ ಪೈಕಿ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಬ್ಯಾಡಗಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಕಾರಿನೊಳಗೆ ಸಿಕ್ಕಿಕೊಂಡಿದ್ದ ಆರು ಮಂದಿಯ ಮೃತದೇಹಗಳನ್ನು ಹೊರ ತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತರ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ.ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು ಕಂಡು ಬಂದಿತು.

RELATED ARTICLES

Latest News