ನವದೆಹಲಿ,ಮೇ 10- ಪಾಕಿಸ್ತಾನವು ಶ್ರೀನಗರ, ಅವಂತಿಪುರದಲ್ಲಿ ಆಸ್ಪತ್ರೆ, ಶಾಲೆಯನ್ನು ಗುರಿಯಾಗಿಸಿ ದಾಳಿ ನಡೆಸಿದ್ದು, ಅದನ್ನು ಹಿಮೆಟ್ಟಿಸಿದ್ದೇವೆ. ನಮ ವಾಯು ಮಾರ್ಗಗಳನ್ನು ದುರುಪಯೋಗಪಡಿಸಿ ಕೊಂಡಿದೆ. ಈಗಲೂ ಉದ್ವಿಗ್ನತೆಯನ್ನು ಬಯ ಸುವುದಿಲ್ಲ, ಹಾಗೊಂದು ವೇಳೆ ದಾಳಿ ಮಾಡಲು ಯತ್ನಿಸಿದರೆ, ಸುಮನಿರುವುದೂ ಇಲ್ಲ ಎಂದು ಭಾರತೀಯ ಸೇನೆ ಪಾಕ್‌ಗೆ ನೇರ ಎಚ್ಚರಿಕೆ ಕೊಟ್ಟಿದೆ.
ಕಳೆದ ರಾತ್ರಿ ಭಾರತೀಯ ವಾಯು ಪಡೆ ಸೇನಾ ಪಡೆ ಪಾಕಿಸ್ತಾನದ ಆರು ವಾಯು ನೆಲೆಗಳ ಮೇಲೆ ದಾಳಿ ನಡೆಸಿ ಭಾರೀ ಹಾನಿಯನ್ನುಂಟು ಮಾಡಿದ ಇದರ ಬಗ್ಗೆ ಪತ್ರಿಕಾ ಗೋಷ್ಠಿಯಲ್ಲಿ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್, ಕರ್ನಲ್ ಸೋಫಿಯಾ ಖುರೀಷಿ, ಹಾಗೂ ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ವಿಕ್ರಮ್‌ಮಿಸ್ರಿ ಮಾಹಿತಿಯನ್ನು ನೀಡಿದ್ದಾರೆ.
ಮೊದಲು ಮಾತನಾಡಿದ ಕರ್ನಲ್ ಸೋಫಿಯಾ ಖುರೇಷಿ ಪಾಕಿಸ್ತಾನ ಭಾರತದ ವಾಯುನೆಲೆ ಹಾಗೂ ಶಾಲೆ ಹಾಗೂ ಆಸ್ಪತ್ರೆಗಳನ್ನು ಗುರಿಯಾಗಿಸಿಕೊಂಡು ದಾಳಿಗೆ ಯತ್ನಿಸಿತ್ತು. ಆ ಎಲ್ಲಾ ದಾಳಿಗಳನ್ನು ಭಾರತ ಯಶಸ್ವಿಯಾಗಿ ಹಿಮೆಟ್ಟಿಸಿದೆ. ಅಷ್ಟೇ ಅಲ್ಲದೆ ಪಾಕಿಸ್ತಾನದ ಆರು ಸೇನಾ ನೆಲೆಗಳನ್ನು ಭಾರತ ಧ್ವಂಸಗೊಳಿಸಿದೆ ಎಂದು ಮಾಹಿತಿ ನೀಡಿದ್ದಾರೆ.
ದಾಳಿ ನಡೆಸಲು ತನ್ನ ಸೈನ್ಯವನ್ನು ಮುಂದಕ್ಕೆ ಸಾಗಿಸುತ್ತಿದೆ, ಇದು ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸುವ ಆಕ್ರಮಣಕಾರಿ ಉದ್ದೇಶವನ್ನು ಸೂಚಿಸುತ್ತದೆ. ಭಾರತೀಯ ಸಶಸ್ತ್ರ ಪಡೆಗಳು ಹೆಚ್ಚಿನ ಕಾರ್ಯಾಚರಣೆಯ ಸನ್ನದ್ಧತೆಯಲ್ಲಿವೆ. ಎಲ್ಲಾ ಪ್ರತಿಕೂಲ ಕ್ರಮಗಳನ್ನು ಪರಿಣಾಮಕಾರಿಯಾಗಿ ಎದುರಿಸಲಾಗಿದೆ ಮತ್ತು ದಿಟ್ಟ ಉತ್ತರ ಸಹ ನೀಡಲಾಗಿದೆ. ಪಾಕಿಸ್ತಾನ ಮತ್ತೂ ದಾಳಿಗೆ ಯತ್ನಿಸಿದರೆ, ನಮ ಸೇನೆ ತಕ್ಕ ಉತ್ತರ ನೀಡಲಿದೆ ಎಂದು ಎಚ್ಚರಿಸಿದರು.
ಇನ್ನೂ ಭಾರತ ನಡೆಸಿದ ವಾಯುದಾಳಿಯಲ್ಲಿ ಸಿಯಾಲ್‌ಕೋಟ್, ಪಸ್ರೂರ್ ರಾಡಾರ್ ಸೈಟ್, ರಹೀಮ್ ಯಾರ್ ಖಾನ್, ಮುರಿದ್, ರಫೀಕ್, ಚುನಿಯನ್, ಚಕ್ಲಾಲಾ, ಸುಕ್ಕೂರ್ ಮೊದಲಾದ ಪಾಕಿಸ್ತಾನ ವಾಯುನೆಲೆಗಳನ್ನು ಧ್ವಂಸಗೊಳಿಸಿದೆ. ಜೊತೆಗೆ ಭಾರತದ ಮೇಲೆ ಪದೇ ಪದೇ ದಾಳಿಗೆ ಯತ್ನಿಸುತ್ತಿದ್ದ ಡ್ರೋನ್ ಲಾಂಚ್‌ಪ್ಯಾಡನ್ನೇ ನಾಶ ಮಾಡಿದೆ ಎಂದು ಫೋಟೋ ಮತ್ತು ವಿಡಿಯೋ ಸಮೇತ ವಿವರಿಸಿದರು.
ರಫೀಕ್ಯೂ ಏರ್ ಬೇಸ್, ನೂರ್ ಖಾನ್ ಏರ್‌ಬೇಸ್, ರಹೀಮ್‌ಯಾರ್ ಖಾನ್ ಏರ್‌ಬೇಸ್, ಮುರೀದ್ ವಾಯುನೆಲೆ ಮೇಲೆ ಭಾರತ ದಾಳಿ ನಡೆಸಿದೆ. ಭಾರತೀಯ ಸೇನೆಯನ್ನು ಗುರಿಯಾಗಿಸಿ, ಉಧಮ್‌ಪುರ, ಆದಮ್‌ಪುರ, ಪಠಾಣ್‌ಕೋಟ್ ಮತ್ತು ಭಟಿಂಡಾದಲ್ಲಿನ ವಾಯುನೆಲೆಗಳ ಮೇಲೆ ದಾಳಿ ನಡೆದಿದೆ ಎಂದು ಹೇಳಿದೆ. ಆದರೆ ಅದು ಸುಳ್ಳು ಮಾಹಿತಿ. ನಮ ಸೇನಾ ನೆಲೆಗಳು ಸುರಕ್ಷಿತವಾಗಿದೆ ಎಂದು ಅವರು ತಿಳಿಸಿದರು.
ಸುಳ್ಳು ಸುದ್ದಿಗೆ ಕಿವಿಗೊಡಬೇಡಿ :
ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಮಾತನಾಡಿ, ಕಾಶೀರಲ್ಲಿ ಶೆಲ್‌ಗಳ ಮೂಲಕ ಪಾಕಿಸ್ತಾನ ದಾಳಿ ಮಾಡಿದೆ. ಬಾರಾಮುಲ್ಲಾ, ಪೂಂಚ್ ಸೇರಿದಂತೆ ಹಲವು ಕಡೆ ಅಪ್ರಚೋದಿತ ಗುಂಡಿನ ದಾಳಿಗಳು ನಡೆದಿದೆ. ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಹೇಳಿದ್ದಾರೆ. ಭಾರತದ ವಾಯುನೆಲೆಯ ಇಂದಿನ ಫೋಟೋ ಬಿಡುಗಡೆ ಮಾಡಿ ನಾವು ಸುರಕ್ಷಿತ ಎಂಬ ಮಾಹಿತಿಯನ್ನು ನೀಡಿದ್ದಾರೆ. ಅಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಬರುವ ವಿಷಯಗಳಿಗೆ ಕಿವಿ ಕೊಡಬೇಡಿ ಎಂದು ಮನವಿ ಮಾಡಿದರು.
ಪಾಕಿಸ್ತಾನದ ದಾಳಿ ಯತ್ನಗಳಿಗೆ ಭಾರತೀಯ ಸೇನೆ ಸೂಕ್ತ ತಿರುಗೇಟು ನೀಡುತ್ತಿದೆ ಮತ್ತು ನೀಡಲಿದೆ. ಪಾಕಿಸ್ತಾನದ ಸೇನಾ ಸೆಂಟರ್ ಮೇಲೆಯೂ ದಾಳಿ ಮಾಡಲಾಗಿದೆ.ಭಾರತದ 26 ಸ್ಥಳಗಳ ಮೇಲೆ ಪಾಕಿಸ್ತಾನ ಕ್ಷಿಪಣಿ ದಾಳಿಗೆ ಪ್ರಯತ್ನಿಸಿತ್ತು. ಆಸ್ಪತ್ರೆ, ಶಾಲೆಗಳ ಮೇಲೆ ದಾಳಿ ನಡೆಸಲು ಯತ್ನಿಸಿತ್ತು. ಅದನ್ನು ತಡೆದು, ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ ಎಂದು ಸೋಫಿಯಾ ಖುರೇಷಿ ತಿಳಿಸಿದರು. ಉದಂಪುರ, ಭುಜ್, ಭಟಿಂಡಾ, ಪಠಾಣ್‌ಕೋಟ್ ಸೇರಿದಂತೆ 5 ಸ್ಥಳಗಳಲ್ಲಿ ಉಪಕರಣಗಳಿಗೆ ಸ್ವಲ್ಪ ಹಾನಿಯಾಗಿದೆ ಎಂದು ಅವರು ಹೇಳಿದರು.
ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಲ್ಲಿ ರಾಜೌರಿಯಲ್ಲಿ ಆದ ಶೆಲ್ ದಾಳಿಯಲ್ಲಿ ಆಡಳಿತಾಧಿಕಾರಿ ಸೇರಿದಂತೆ ಹಲವರು ಮೃತಪಟ್ಟಿದ್ದಾರೆ. ಪಾಕಿಸ್ತಾನ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸುತ್ತಿದೆ. ಪಾಕಿಸ್ತಾನಿ ಸೇನೆಯು ಪಶ್ಚಿಮ ಗಡಿಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿದೆ; ಅದು ಭಾರತದ ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡಲು ಡ್ರೋನ್‌ಗಳು, ದೀರ್ಘ-ಶ್ರೇಣಿಯ ಶಸಾ್ತ್ರಸ್ತ್ರಗಳು, ಯುದ್ಧ ಸಾಮಗ್ರಿಗಳು ಮತ್ತು ಫೈಟರ್ ಜೆಟ್‌ಗಳನ್ನು ಬಳಸಿದೆ. ಭಾರತ ಅನೇಕ ಅಪಾಯಗಳನ್ನು ತಟಸ್ಥಗೊಳಿಸಿತು.ಪಾಕಿಸ್ತಾನವು 26ಕ್ಕೂ ಹೆಚ್ಚು ಸ್ಥಳಗಳಲ್ಲಿ ವಾಯುದಳದ ಮೂಲಕ ನುಸುಳಲು ಪ್ರಯತ್ನಿಸಿದೆ ಎಂದು ಹೇಳಿದರು.
ಉಧಂಪುರ, ಭುಜ್, ಪಠಾಣ್‌ಕೋಟ್, ಭಟಿಂಡಾದಲ್ಲಿನ ವಾಯುಪಡೆಯ ನೆಲೆಗಳಲ್ಲಿ ನಮ ಸೇನಾ ಉಪಕರಣಗಳನ್ನು ಹಾನಿಗೊಳಿಸಿ ಸಿಬ್ಬಂದಿಗೆ ತೊಂದರೆ ನೀಡಿದ್ದಾರೆ. ಪಂಜಾಬ್‌ನ ವಾಯುನೆಲೆಯನ್ನು ಗುರಿಯಾಗಿಸಲು ಬೆಳಗಿನ ಜಾವ 1.40 ಕ್ಕೆ ಹೈಸ್ಪೀಡ್ ಕ್ಷಿಪಣಿಗಳನ್ನು ಬಳಸಿದರು. ಜಮು-ಕಾಶೀರದ ಆರೋಗ್ಯ ಸೌಲಭ್ಯಗಳು ಮತ್ತು ಶಾಲೆಗಳ ಮೇಲೂ ದಾಳಿ ಮಾಡಿದ್ದಾರೆ. 26 ಸ್ಥಳಗಳಲ್ಲಿ ಒಳನುಸುಳಲು ಪ್ರಯತ್ನಿಸಲು ಪಾಕಿಸ್ತಾನ ಸುಮಾರು 300 ರಿಂದ 400 ಡ್ರೋನ್‌ಗಳನ್ನು ಬಳಸಿದೆ. ಡ್ರೋನ್‌ಗಳ ಅವಶೇಷಗಳ ವಿಧಿವಿಜ್ಞಾನ ತನಿಖೆ ನಡೆಸಲಾಗುತ್ತಿದೆ ಎಂದು ವಿವರಿಸಿದರು.
ಭಾರತದ ಎಲ್ಲ ವಾಯುನೆಲೆಗಳು ಸುರಕ್ಷಿತ
ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ವಿಕ್ರಂ ಮಿಸ್ರಿ ಮಾತನಾಡಿ ಭಾರತದ ವಾಯುನೆಲೆಗಳನ್ನು ಧ್ವಂಸ ಮಾಡಲಾಗಿದೆ ಎಂಬ ಪಾಕಿಸ್ತಾನದ ಸುದ್ದಿಗಳು ಸುಳ್ಳು ಎಂದರು. ಪಾಕಿಸ್ತಾನವು ನಾಗರಿಕರನ್ನು, ಆಸ್ಪತ್ರೆಗಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿದೆ ಎಂಬುದನ್ನು ಒಪ್ಪಿಕೊಂಡ ಅವರು, ಪಾಕಿಸ್ತಾನದ ಎಲ್ಲ ದಾಳಿಗಳನ್ನು ತಡೆಯಲಾಗಿದೆ ಎಂದು ಮಾಹಿತಿ ನೀಡಿದರು.
ಪಾಕಿಸ್ತಾನ ವಿರುದ್ಧದ ಸೇನಾ ಕಾರ್ಯಾಚರಣೆಗೆ ಭಾರತ ಸರ್ಕಾರದ ವಿರುದ್ಧ ಸ್ವದೇಶದಲ್ಲೇ ಆಕ್ಷೇಪಗಳು ವ್ಯಕ್ತವಾಗಿವೆ ಎಂಬ ಶತ್ರು ರಾಷ್ಟ್ರದ ಆರೋಪಗಳಿಗೆ ಮಿಸ್ರಿ ತಿರುಗೇಟು ನೀಡಿದರು. ನಮದು ಪಾಕಿಸ್ತಾನದ ರೀತಿಯ ದೇಶವಲ್ಲ. ಜಗತ್ತಿನಲ್ಲೇ ಬಲುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಅಭಿಪ್ರಾಯ ಸ್ವಾತಂತ್ರ್ಯಕ್ಕೆ ನಾವು ಬೆಲೆ ಕೊಡುತ್ತೇವೆ. ಆದಾಗ್ಯೂ, ಭಯೋತ್ಪಾದಕರ ಪೋಷಕ ಪಾಕಿಸ್ತಾನದ ವಿರುದ್ಧದ ಕಾರ್ಯಾಚರಣೆಗೆ ನಮ ದೇಶದಲ್ಲಿ ವಿರೋಧ ವ್ಯಕ್ತವಾಗಿಲ್ಲ ಎಂದು ಸ್ಪಷ್ಟಪಡಿಸಿದರು.