ಜಮ್ಮು, ಮೇ.10-ರಾಜ್ಯದ ರಾಚೌರಿ ಜಿಲ್ಲೆಯಲ್ಲಿ ಇಂದು ಮುಂಜಾನೆ ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜೌರಿ ಪಟ್ಟಣದ ಹೆಚ್ಚುವರಿ ಉಪ ಆಯುಕ್ತರಾಗಿದ್ದ ರಾಜ್ ಕುಮಾರ್ ಥಾಪಾ ಅವರ ನಿವಾಸಕ್ಕೆ ಫಿರಂಗಿ ಶೆಲ್ ಬಡಿದಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಮನೆಗೆ ಬೋಕಿ ಆವರಿಸಿ ಗಾಯಗೊಂಡಿದ್ದ ಮೂವರನ್ನು ಸರ್ಕಾರಿ ವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಥಾಪಾ ಅವರು ಸಾವನ್ನಪ್ಪಿದರು, ಆದರೆ ಅವರ ಸಿಬ್ಬಂದಿ ಸದಸ್ಯರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಥಾಪಾ ಅವರ ಅಧಿಕಾರಿ ಸಾವಿಗೆ ಸಂತಾಪ ಸೂಚಿಸಿದ್ದಾರೆ.ರಾಜರಿಯಿಂದ ಆಘಾತಕಾರಿ ಸುದ್ದಿ ನಾವು ರಾಜ್ಯದ ಆಡಳಿತ ಸೇವೆಗಳ ಸಮರ್ಪಿತ ಅಧಿಕಾರಿಯನ್ನು ಕಳೆದುಕೊಂಡಿದ್ದೇವೆ. ನಿನ್ನೆಯಷ್ಟೇ ಅವರು ಜಿಲ್ಲೆಯಾದ್ಯಂತ ಉಪ ಮುಖ್ಯಮಂತ್ರಿಯೊಂದಿಗೆ ಇದ್ದರು ಮತ್ತು ನಾನು ಅಧ್ಯಕ್ಷತೆ ವಹಿಸಿದ್ದ ಆನ್ಲೈನ್ ಸಭೆಯಲ್ಲಿ ಭಾಗವಹಿಸಿದ್ದರು.
ರಾಜೇರಿ ಪಟ್ಟಣದ ಜನವಸತಿ ಪ್ರದೇಶಗುರಿಯಾಗಿಸಿಕೊಂಡು ಪಾಕ್ ದಾಳಿ ನಡೆಸಿದೆ. ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಾಪ್ಪಾ ಸಾವನ್ನಪ್ಪಿದ್ದಾರೆ. ಈ ಭೀಕರ ಜೀವಹಾನಿಗೆ ನನ್ನ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಲು ನನ್ನಲ್ಲಿ ಪದಗಳಿಲ್ಲ, ಅವರ ಆತ್ಮಕ್ಕೆ ಶಾಂತಿಸಿಗಲಿ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.