ಶಾಜಾಪುರ, ಮೇ 10– ಬೆಳಗಿನ ಜಾವ ಖಾಸಗಿ ಖಾಸಗಿ ಬಸ್ ವೊಂದು ಡಂಪರ್ ಟ್ರಕ್‌ಗೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿ, 18 ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಮಕ್ಸಿಬೈಪಾಸ್ ರಸ್ತೆಯಲ್ಲಿ ಬೆಳಗಿನ ಜಾವ 2.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಧ್ಯ ಪ್ರದೇಶದ ಇಂದೋರ್‌ನಿಂದ ಗುನಾ ಕಡೆಗೆ ಹೋಗುತ್ತಿದ್ದ ಬಸ್ ಮುಂದೆ ಹೋಗುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ನಂತರ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ಮಕ್ಸಿ ಪೊಲೀಸ್ ಠಾಣೆಯ ಅಧಿಕಾರಿ ಭೀಮ್ ಸಿಂಗ್ ಪಟೇಲ್ ತಿಳಿಸಿದ್ದಾರೆ.
ಸ್ಥಳಕ್ಕೆ ದಾವಿಸಿದ ಪೊಲೀಸರು, ಕ್ರೇನ್ ಬಳಸಿ ಬಸ್ ಅನ್ನು ಕಂದಕದಿಂದ ಹೊರತೆಗೆದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತರಲ್ಲಿ ಬಸ್ ಚಾಲಕ ಗುಲಾಬ್ ಸೇನ್, ಟ್ರಕ್ ಸಹಾಯಕ ಭವಾರ್ ಸಿಂಗ್ ಮತ್ತು ಪ್ರಯಾಣಿಕ ಅಮನ್ ಚೌರಾಸಿಯಾ ಸೇರಿದ್ದಾರೆ ಎಂದು ಪಟೇಲ್ ಹೇಳಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.