ಬೆಂಗಳೂರು, ಮೇ10-ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಕಲೆಕ್ಷನ್ ಶುರುವಾಗಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಕರ್ನಾಟಕವನ್ನು ಎಟಿಎಂನಂತೆ ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಹೈಕಮಾಂಡ್ ಬಿಹಾರ ಚುನಾವಣೆಗಾಗಿ ರಾಜ್ಯದಲ್ಲಿ ಫಂಡ್ ಕಲೆಕ್ಷನ್ ಮಾಡುತ್ತಿದೆ ಎಂದು ಆಪಾದಿಸಿದೆ.
ಹೈಕಮಾಂಡ್ ಮುಂದೆ ವರ್ಚಸ್ಸು ಹೆಚ್ಚಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು. ನಾ ಮುಂದು ತಾ ಮುಂದು ಎಂದು ಪೈಪೋಟಿಗೆ ಇಳಿದು ರಾಜ್ಯದಲ್ಲಿ ಗುತ್ತಿಗೆದಾರರಿಗೆ ಕಿರುಕುಳ, ಬೆದರಿಕೆ ಹಾಕಿ ಶೇ.60ರ ಲೆಕ್ಕದಲ್ಲಿ ವಸೂಲಿಗೆ ಇಳಿದಿದ್ದಾರೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.
ಕಮಿಷನ್ ಕಾಂಗ್ರೆಸ್ ಮಂತ್ರಿಗಳಿಗೆ ಇಲಾಖಾವಾರು ಗುರಿ ನಿಗದಿ ಮಾಡಿ, ಗುತ್ತಿಗೆದಾರರ ಬಿಲ್ ಪಾಸ್ ಮಾಡಲು ಪರ್ಸೆಂಟೇಜ್ ವ್ಯವಹಾರದ ಮೂಲಕ ಲೂಟಿಯಲ್ಲಿ ನಿರತವಾಗಿದೆ. ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಉದ್ವಿಗ್ನ ಸ್ಥಿತಿಯುಂಟಾಗಿದ್ದು, ಯುದ್ಧದ ಸಮಯದಲ್ಲಿ ಗುತ್ತಿಗೆದಾರರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.