Saturday, May 10, 2025
Homeರಾಜ್ಯಮೇ.26 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2

ಮೇ.26 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2

SSLC Exam-2 from May 26

ಬೆಂಗಳೂರು, ಮೇ 10– ಪ್ರಸಕ್ತ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-01 ರಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಹಾಗೂ ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಅನ್ನು ಮೇ 26 ರಿಂದ ಜೂನ್ 02 ರವರೆಗೆ ರಾಜ್ಯಾದ್ಯಂತ ನಡೆಸಲಾಗುತ್ತದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಕ್ಕೆ ನೋಂದಾಯಿಸಲು ಇಂದೇ ಕೊನೆಯ ದಿನವಾಗಿದ್ದು, ಪರೀಕ್ಷೆ-1ರಲ್ಲಿ ನೋಂದಾಯಿಸಿಕೊಂಡು ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಹಾಗೂ ಪ್ರಪ್ರಥಮ ಬಾರಿಗೆ ಪರೀಕ್ಷೆಗೆ ನೋಂದಾಯಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ-2ರಲ್ಲಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ವಿದ್ಯಾರ್ಥಿಗಳು ಪರೀಕ್ಷೆ-1ರಲ್ಲಿ ನೋಂದಾಯಿಸಿಕೊಂಡು ಪರೀಕ್ಷೆಗೆ ಗೈರಾಗಿದ್ದವರು, ಪೂರ್ಣಗೊಳಿಸದೆ ಇರುವ ಮತ್ತು ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶವನ್ನು ಉತ್ತಮಗೊಳಿಸಿಕೊಳ್ಳು ವವರಿಗೆ ಇದು ಸೂಕ್ತ ಸಮಯವಾಗಿದೆ.

ವಿದ್ಯಾರ್ಥಿಗಳು ತಮ್ಮ ಶಾಲಾ ಮುಖ್ಯೋಪಾಧ್ಯಾಯರು ಅಥವಾ ಮಂಡಳಿಯ https://kseab.karnataka.gov.in ಜಾಲತಾಣದ ಮೂಲಕ ಲಾಗಿನ್ ಮಾಡಿಕೊಂಡು ಪರೀಕ್ಷೆ-2 ಕ್ಕೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಪರೀಕ್ಷೆ-2 ರ ನೋಂದಣಿ ಇತ್ಯಾದಿ ವಿಷಯಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080-23310075 ಮತ್ತು 080-23310076 ಇದಕ್ಕೆ ಕರೆಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

RELATED ARTICLES

Latest News