ನವದೆಹಲಿ, ಮೇ 10- ಮೂರು ದಿನಗಳ ಡೋನ್ ದಾಳಿ ಮತ್ತು ಕದನ ವಿರಾಮ ಉಲ್ಲಂಘನೆಯ ನಂತರ ಪಾಕಿಸ್ತಾನ ಶನಿವಾರ ಭಾರತದ ವಿರುದ್ದ ಅಪರೇಷನ್ ಬನ್ ಉಲ್ ಮರ್ಸೂಸ್ ಅನ್ನು ಪ್ರಾರಂಭಿಸಿದ ನಂತರ ಭಾರತೀಯ ನಗರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಪಾಕಿಸ್ತಾನವು ಫತಾಹ್ – 11 ದೀರ್ಘ-ಶ್ರೇಣಿಯ ಕ್ಷಿಪಣಿಯನ್ನು ಹಾರಿಸಿತ್ತು. ಆದರೆ ಅದನ್ನು ಹರಿಯಾಣದ ಸಿರ್ಸಾದಲ್ಲಿ ತಡೆಹಿಡಿಯಲಾಗಿದೆ.ಅದು ಭಾರತದ ಕಾರ್ಯತಂತ್ರದ ಪಶ್ಚಿಮ ವಲಯವನ್ನು ಗುರಿಯಾಗಿರಿಸಿಕೊಂಡಿತ್ತು ಎನ್ನಲಾಗಿದೆ.
ಸಿರ್ಸಾದ ಮೇಲೆ ಪಾಕಿಸ್ತಾನದ ಫತಾಹ್ -ಐಐ ಕ್ಷಿಪಣಿಯನ್ನು ಭಾರತೀಯ ಪಡೆಗಳು ತಡೆಹಿಡಿದು, ಜಮ್ಮು ವಾಯುನೆಲೆಯ ಮೇಲಿನ ದಾಳಿಯನ್ನು ವಿಫಲಗೊಳಿಸಿವೆ. ಸುಮಾರು 400 ಕಿ.ಮೀ. ದಾಳಿ ವ್ಯಾಪ್ತಿಯನ್ನು ಹೊಂದಿರುವ ದೀರ್ಘ ವ್ಯಾಪ್ತಿಯ ಮೇಲೆಯಿಂದ ಮೇಲ್ಮಗೆ ಚಿಮ್ಮುವ ಕ್ಷಿಪಣಿಯನ್ನು ಪಾಕಿಸ್ತಾನ ಹಾರಿಸಿತು. ಆದರೆ ಅದನ್ನು ಹರಿಯಾಣದಲ್ಲಿ ಆಕಾಶದಲ್ಲಿಯೇ ಭಾರತ ಹೊಡೆದುರುಳಿಸಿದೆ.
ಪಾಕಿಸ್ತಾನಿ ಅಧಿಕಾರಿಗಳ ಪ್ರಕಾರ, ಫತಾಹ್ -11 ಕ್ಷಿಪಣಿಯು ಏವಿಯಾನಿಕ್ಸ್ ಉಪಗ್ರಹ ಸಂಚರಣೆ ವ್ಯವಸ್ಥೆಗಳನ್ನು ಹೊಂದಿರುವ ಆಧುನಿಕ ಶಸ್ತ್ರಾಸ್ತ್ರ ವ್ಯವಸ್ಥೆ ಎನ್ನಲಾಗಿದೆ. 10 ಮೀಟರ್‌ಗಳಿಗಿಂತ ಕಡಿಮೆ ವೃತ್ತಾಕಾರದ ಸಂಭವನೀಯತೆ ಯೊಂದಿಗೆ ನಿಖರವಾದ ಗುರಿಯನ್ನು ಸಕ್ರಿಯಗೊಳಿಸುತ್ತದೆ ಎನ್ನಲಾಗಿದೆ.
ದೆಹಲಿಯನ್ನು ಗುರಿಯಾಗಿಸಿ ಪಾಕಿಸ್ತಾನ ಫತಾಹ್-ಐಐ ಉಡಾವಣೆ ಮಾಡಿತ್ತು. ಆದರೆ ಭಾರತ ಈ ಕ್ಷಿಪಣಿಯನ್ನು ಆಕಾಶದಲ್ಲೇ ಛಿದ್ರಗೊಳಿಸಿದೆ. ಪಾಕಿಸ್ತಾನದ ಫತಾಹ್-11 ಅಲ್ಪ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಯಾಗಿದ್ದು ಅಂದಾಜು 400 ಕಿಲೋಮೀಟರ್ ದೂರವನ್ನು ಕ್ರಮಿಸುವ ಜೊತೆಗೆ 365-ಕಿಲೋಗ್ರಾಂಗಳಷ್ಟು ಸಿಡಿತಲೆಯನ್ನು ಹೊತ್ತುಕೊಂಡು ಹೋಗುವ ಸಾಮರ್ಥ್ಯ ಹೊಂದಿದೆ.
ಏನಿದು ಬ್ಯಾಲಿಸ್ಟಿಕ್ ಕ್ಷಿಪಣಿ?
ಚಲಿಸುವ ಪಥದ ಆಧಾರದ ಮೇಲೆ ಕ್ಷಿಪಣಿಗಳನ್ನು ಬ್ಯಾಲಿಸ್ಟಿಕ್ ಮತ್ತು ಕ್ರೂಸ್ ಕ್ಷಿಪಣಿಗಳಾಗಿ ವಿಂಗಡಿಸಲಾಗುತ್ತದೆ. ಬ್ಯಾಲಿಸ್ಟಿಕ್ ಕ್ಷಿಪಣಿ ಭೂಮಿಯ ವಾತಾವರಣವನ್ನು ಬಿಟ್ಟು ಬಾಹ್ಯಾಕಾಶವನ್ನು ಪ್ರವೇಶಿಸಿ ನಂತರ ಭೂಮಿಗೆ ಅಪ್ಪಳಿಸುತ್ತದೆ. ಭಾರತದ ಅಗ್ನಿ, ಪೃಥ್ವಿ ಬ್ಯಾಲಿಸ್ಟಿಕ್ ಕ್ಷಿಪಣಿಗಳಾಗಿದೆ.
ಕ್ರೂಸ್ ಕ್ಷಿಪಣಿ ಶಬ್ದದ ವೇಗಕ್ಕಿಂತ ಹೆಚ್ಚು ವೇಗದಲ್ಲಿ ಹೋಗುತ್ತದೆ. ಆರಂಭದಲ್ಲಿ ಕ್ರೂಸ್ ಕ್ಷಿಪಣಿ ಕೆಳಹಂತದಲ್ಲಿ ಭೂಮಿಯ ಮೇಲೆಗೆ ಸಮಾನಂತರವಾಗಿ ಶಬ್ದದ ವೇಗಕ್ಕಿಂತ ಕಡಿಮೆ ವೇಗದಲ್ಲಿ ಚಲಿಸಿ ಗುರಿ ತಲುಪುತ್ತಿದ್ದಂತೆ ಇದರ ವೇಗ ಶಬ್ದದ ವೇಗಕ್ಕಿಂತ ಹೆಚ್ಚಾಗಿ ಕೊನೆಗೆ ಗುರಿಯನ್ನು ತಲುಪುತ್ತದೆ. ಈ ತಂತ್ರಜ್ಞಾನದಿಂದ ಶತ್ರುಗಳ ರೇಡಾರ್‌ಗಳಿಗೆ ಸಹ ಈ ಕ್ಷಿಪಣಿಯ ಪಥವನ್ನು ಅಷ್ಟು ಸುಲಭವಾಗಿ ಪತ್ತೆ ಹಚ್ಚಲು ಸಾಧ್ಯವಾಗುವುದಿಲ್ಲ. ಈ ಕ್ಷಿಪಣಿ ಸಮುದ್ರದ ಒಳಗೆ ಹೋಗಿ ಮತ್ತೆ ಮೇಲೆ ಬರುವ ಸಾಮಥ್ಯವನ್ನು ಹೊಂದಿದೆ. ಭಾರತದ ಬ್ರಹ್ಮಸ್ ಕ್ರೂಸ್ ಕ್ಷಿಪಣಿಯ ವರ್ಗಕ್ಕೆ ಸೇರುತ್ತದೆ.
ಪಂಜಾಬ್‌ನ ಫಿರೋಜ್‌ಪುರದಲ್ಲಿ ನಡೆದ ದಾಳಿಯಲ್ಲಿ ಒಂದು ಕುಟುಂಬದ ಕೆಲವು ಸದಸ್ಯರು ಗಾಯಗೊಂಡಿದ್ದಾರೆ. ಕತ್ತಲೆಯಾದ ನಂತರ ನಡೆಸಿದ ದಾಳಿಯಲ್ಲಿ ಗಾಯಗಳಾಗಿವೆ. ಪಾಕಿಸ್ತಾನದ ಗಡಿಯಲ್ಲಿರುವ ಎಲ್ಲಾ ರಾಜ್ಯಗಳು ಸದ್ಯ ಕತ್ತಲೆಯಲ್ಲಿವೆ.