Sunday, May 11, 2025
Homeಅಂತಾರಾಷ್ಟ್ರೀಯ | Internationalಪಾಕಿಸ್ತಾದಲ್ಲಿರುವ ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಸುರಕ್ಷಿತ ಸ್ಥಳಕ್ಕೆ ಪರಾರಿ

ಪಾಕಿಸ್ತಾದಲ್ಲಿರುವ ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಸುರಕ್ಷಿತ ಸ್ಥಳಕ್ಕೆ ಪರಾರಿ

Wary of Operation Sindoor, has Dawood Ibrahim fled Pakistan?

ಕರಾಚಿ,ಮೇ 10- ಪಹಾಲ್ಗಾಮ್‌ ನರಮೇಧಕ್ಕೆ ಪ್ರತೀಕಾರವಾಗಿ ಪಾಕಿಸ್ತಾನದ ವಿರುದ್ಧ ಭಾರತ ಹಿಂದೆಂದೂ ಕಾಣದ ರೀತಿಯಲ್ಲಿ ಪೆಟ್ಟಿನ ಮೇಲೆ ಪೆಟ್ಟು ಕೊಡುತ್ತಿರುವ ಬೆನ್ನಲ್ಲೇ, ಮ್ಟೆ್‌ ವಾಂಟೆಂಡ್‌ ಪಾತಾಕಿ ದಾವೂದ್‌ ಇಬ್ರಾಹಿಂ ತನ್ನ ಸ್ವಸ್ಥಾನದಿಂದ ಸುರಕ್ಷಿತ ಸ್ಥಳಕ್ಕೆ ಕಾಲ್ಕಿತ್ತಿದ್ದಾನೆ.

ಭಾರತದ ಭಯದಿಂದ ಈ ಮೂವರು ಭೂಗತ ಪಾತಕಿಗಳು ಪಾಕಿಸ್ತಾನದಿಂದ ಬೇರೆ ದೇಶಕ್ಕೆ ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದೆ. ಭಾರತದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ನಡೆದಿದ್ದ ಸರಣಿ ಬಾಂಬ್‌ ಸ್ಫೋಟದ ಪ್ರಮುಖ ರೂವಾರಿ ಎಂದೇ ಹೇಳಲಾಗಿರುವ ಭಾರತದ ಮ್ಟೆ್‌ ವಾಂಟೆಂಡ್‌ ಉಗ್ರ ದಾವೂದ್‌ ಇಬ್ರಾಹಿಂ ಸದ್ಯ ಕರಾಚಿ ಹಾಗೂ ದುಬೈನಲ್ಲಿ ವಾಸವಾಗಿದ್ದಾನೆ ಎನ್ನಲಾಗಿದೆ.

ಭಾರತದ ರಕ್ಷಣಾ ಪಡೆಗಳ ಕಣ್ತಪ್ಪಿಸಿ ಅಥವಾ ಹಾಗಾಗ್ಗೆ ತನ್ನ ಆವಾಸಸ್ಥಾನದ ನೆಲೆಯನ್ನು ಬದಲಾಯಿಸುವ ಈ ಮಹಾಪಾತಕಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌‍ಐ ಈತನಿಗೆ ರಕ್ಷಣೆಯನ್ನು ಒದಗಿಸುತ್ತದೆ.

ಇದೀಗ ಜಮು ಮತ್ತು ಕಾಶೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಭೀಕರ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್‌ ಸಿಂಧೂರ್‌ದಿಂದ ಕಂಗೆಟ್ಟು ಹತಾಶವಾಗಿ ಪ್ರತಿದಾಳಿ ನಡೆಸುತ್ತಿರುವ ಪಾಕಿಸ್ತಾನ ಎರಡು ದಿನಗಳಿಂದ ಭಾರತದ ಮೇಲೆ ಡ್ರೋನ್‌ ದಾಳಿ ಮುಂದುವರಿಸಿದೆ. ಆದರೆ ಪಾಕ್‌ನ ಎಲ್ಲ ದಾಳಿಗಳನ್ನು ಭಾರತ ವಿಫಲಗೊಳಿಸಿದೆ.

ಸದ್ಯ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಭೀತಿ ಉಂಟಾಗಿದ್ದು, ಭಾರತದ ಮ್ಟೆ್‌ ವಾಂಟೆಡ್‌ ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಪಾಕಿಸ್ತಾನದಿಂದ ಪಲಾಯನ ಮಾಡಿದ್ದಾನೆ. ಅನೇಕ ವರ್ಷಗಳಿಂದ ಪಾಕಿಸ್ತಾನದ ಕರಾಚಿ ನಗರದಲ್ಲಿ ದಾವೂದ್‌ ಇಬ್ರಾಹಿಂ, ಅವನ ವಿಶೇಷ ಸಹಾಯಕರಾದ ಚೋಟಾ ಶಕೀಲ್‌ ಮತ್ತು ಮುನ್ನಾ ಜಿಂಗ್ರಾರನ್ನು ಪಾಕ್‌ ಅಡಗಿಸಿಟ್ಟಿದೆ.

ಆದರೆ ಕರಾಚಿ ಮೇಲೆಯೇ ಭಾರತ ಕ್ಷಿಪಣಿ ಹಾಗೂ ಡ್ರೋನ್‌ ದಾಳಿ ಮಾಡಿದ ಕಾರಣ, ಮೂಲಗಳು ಹೇಳುವಂತೆ ಮೂವರೂ ಪ್ರಸ್ತುತ ಪಾಕಿಸ್ತಾನವನ್ನು ತೊರೆದು ಬೇರೆ ದೇಶಕ್ಕೆ ಪಲಾಯನ ಮಾಡಿದ್ದಾರೆ. ಆದಾಗ್ಯೂ ಏಜೆನ್ಸಿ ಮೂಲಗಳು ಈ ಮಾಹಿತಿಯ ಮೇಲೆ ನಿಗಾ ಇಡುತ್ತಿವೆ ಮತ್ತು ದಾವೂದ್‌ ಮತ್ತು ಅವನ ಬೆಂಬಲಿಗರು ಪಾಕಿಸ್ತಾನದಲ್ಲೇ ಬೇರೆಡೆ ಇರಬಹುದು ಎಂದು ಊಹಿಸುತ್ತಿದ್ದಾರೆ ಮತ್ತು ದಾರಿ ತಪ್ಪಿಸಲು ಇಂತಹ ಮಾಹಿತಿಗಳನ್ನು ಹರಡಲಾಗುತ್ತಿದೆ ಎಂದು ಹೇಳಿವೆ.

ಶೆಹಬಾಜ್‌ ಬಂಕರ್‌ಗೆ ಶಿಫ್ಟ್
ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಷರೀಫ್‌ ಅವರ ಅಧಿಕೃತ ನಿವಾಸದಿಂದ 20 ಕಿ.ಮೀ. ದೂರದಲ್ಲಿ ಸ್ಫೋಟ ಸಂಭವಿಸಿದೆ. ಅಲ್ಲದೆ, ಭಾರತವು ಇಸ್ಲಾಮಾಬಾದ್‌ ಮೇಲೆ ವಾಯುದಾಳಿ ನಡೆಸಿದೆ. ಹೀಗಾಗಿ ಷರೀಫ್‌ ಅವರನ್ನು ಸುರಕ್ಷಿತವಾಗಿ ಬಂಕರ್‌ಗೆ ಸ್ಥಳಾಂತರಿಸಲಾಗಿದೆ ಎಂದು ವರದಿಗಳು ಹೇಳಿವೆ.

ಇಸ್ಲಾಮಾಬಾದ್‌ನ ಹೈ-ಸೆಕ್ಯೂರಿಟಿ ವಲಯಗಳ ಬಳಿ ಸ್ಫೋಟಗಳು ವರದಿಯಾದ ನಂತರ ಪ್ರಧಾನಿ ಷರೀಫ್‌, ಸೇನಾ ಮುಖ್ಯಸ್ಥ ಅಸೀಂ ಮುನೀರ್‌, ಸಚಿವರು ಹಾಗೂ ಪ್ರಮುಖ ಸೇನಾಧಿಕಾರಿಗಳು ಸೇರಿದಂತೆ ಪ್ರಮುಖ ಸರ್ಕಾರಿ ವ್ಯಕ್ತಿಗಳ ಸುತ್ತ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ.

ಪ್ರಧಾನಿಯವರ ಪ್ರಸ್ತುತ ಸ್ಥಳದ ಬಗ್ಗೆ ಪಾಕಿಸ್ತಾನ ಸರ್ಕಾರದಿಂದ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲವಾದರೂ, ಸಂಭವನೀಯ ಪ್ರತೀಕಾರದ ಕ್ರಮಗಳು ಅಥವಾ ಸ್ಥಿತಿ ಬಿಗಡಾಯಿಸುವ ಭೀತಿಯಿಂದ ಮುನ್ನೆಚ್ಚರಿಕೆ ಶಿಷ್ಟಾಚಾರದ ಕ್ರಮಗಳನ್ನು ಸಕ್ರಿಯಗೊಳಿಸಲಾಗಿದೆ ಎಂದು ಮೂಲಗಳು ಸೂಚಿಸುತ್ತವೆ.

ಕಳೆದ ಹಲವಾರು ವರ್ಷಗಳಿಂದ, ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಪಾಕಿಸ್ತಾನದಲ್ಲಿ ಇದ್ದಾನೆ ಎಂಬ ಮಾತು ಕೇಳಿಬರುತ್ತಿದೆ. ಪಾಕಿಸ್ತಾನ ಅವನನ್ನು ರಕ್ಷಿಸಿ ಕರಾಚಿಯಲ್ಲಿ ಸುರಕ್ಷಿತವಾಗಿರಿಸಿದೆ ಎಂದು ಹೇಳಲಾಗುತ್ತದೆ. ಕಳೆದ ಕೆಲವು ದಿನಗಳಿಂದ ಭಾರತೀಯ ಸೇನೆಯು ಪಾಕಿಸ್ತಾನದ ಒಳಭಾಗದೊಳಗೆ ಡ್ರೋನ್‌ ದಾಳಿಗಳನ್ನು ನಡೆಸಿದೆ.

ಭಾರತೀಯ ಸೇನೆಯು ಲಾಹೋರ್‌ನಲ್ಲಿ ವಾಯು ರಕ್ಷಣಾ ವ್ಯವಸ್ಥೆಯನ್ನು ಸಹ ನಾಶಪಡಿಸಿತು. ಇಸ್ಲಮಾಬಾದ್‌ ಮತ್ತು ಕರಾಚಿಯಲ್ಲೂ ಭಾರತ ದಾಳಿ ನಡೆಸಿದೆ. ಹೀಗಾಗಿ, ಭಯಗೊಂಡಿರುವ ದಾವೂದ್‌ ಇಬ್ರಾಹಿಂ ಕರಾಚಿ ಬಿಟ್ಟು ಬೇರೆ ಜಾಗಕ್ಕೆ ಪಲಾಯನ ಮಾಡಿದ್ದಾನೆ ಎನ್ನಲಾಗಿದೆ.

RELATED ARTICLES

Latest News