Saturday, May 10, 2025
Homeಬೆಂಗಳೂರುಬೆಂಗಳೂರು : ಮನೆಯ ಹಿಂಭಾಗದ ಗ್ರಿಲ್‌ ಮುರಿದು 50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲೂಟಿ

ಬೆಂಗಳೂರು : ಮನೆಯ ಹಿಂಭಾಗದ ಗ್ರಿಲ್‌ ಮುರಿದು 50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲೂಟಿ

gold ornaments worth Rs. 50 lakh looted in Bengaluru

ಬೆಂಗಳೂರು, ಮೇ 10– ಮನೆಯೊಂದರ ಹಿಂಭಾಗದ ಗ್ರಿಲ್‌ ಮುರಿದು ಒಳನುಗ್ಗಿದ ಕಳ್ಳರು ಬೀರುವನ್ನು ಮೀಟಿ 50 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ವಜ್ರಾಭರಣಗಳನ್ನು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಯಲಹಂಕ ನ್ಯೂಟೌನ್‌ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಎಸ್‌‍ಎಸ್‌‍ಎ್‌‍ ಬಡಾವಣೆಯ ನಿವಾಸಿ ದುರುಜಸ್ವಾಲ್‌ ಎಂಬ ಮಹಿಳೆ ಮೇ 5 ರಂದು ಮನೆಗೆ ಬೀಗ ಹಾಕಿಕೊಂಡು ಮೈಸೂರು, ಕೇರಳ ಇನ್ನಿತರ ಸ್ಥಳಗಳಿಗೆ ಪ್ರವಾಸಕ್ಕೆ ಹೋಗಿ ರಾತ್ರಿ ಮನೆಗೆ ವಾಪಸ್‌‍ ಹಿಂದಿರುಗಿದ್ದಾರೆ.

ಮನೆಯ ಮುಂಬಾಗಿಲಿಗೆ ಹಾಕಿದ್ದ ಬೀಗ ತೆಗೆದು ಒಳಗೆ ಹೋದಾಗ ಹಿಂಭಾಗದ ಗ್ರಿಲ್‌ ಮುರಿದಿರುವುದು ಕಂಡು ಬಂದಿದೆ. ತಕ್ಷಣ ಗಾಬರಿಗೊಂಡು ರೂಮಿನೊಳಗೆ ಹೋಗಿ ನೋಡಿದಾಗ ಬೀರು ಬಾಗಿಲು ತೆರೆದಿದ್ದು ಅದರಲ್ಲಿದ್ದ 350 ಗ್ರಾಂ ಚಿನ್ನದ ಆಭರಣ ಹಾಗೂ ವಜ್ರಾಭರಣಗಳು ಕಳ್ಳತನವಾಗಿರುವುದು ಗೊತ್ತಾಗಿದೆ.

ತಕ್ಷಣ ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಘಟನಾ ಸ್ಥಳದ ಸುತ್ತಮುತ್ತಲಿನ ರಸ್ತೆಗಳಲ್ಲಿರುವ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿ ಕಳ್ಳರ ಪತ್ತೆಗೆ ಬಲೆಬೀಸಿದ್ದಾರೆ.

RELATED ARTICLES

Latest News