India Pakistan War: ನವದೆಹಲಿ- ಪಹಲ್ಗಾಂವ್ ನರಮೇಧದ ನಂತರ ಭಾರತ ಹಾಗೂ ಪಾಕಿಸ್ತಾನದ ನಡುವೆ ಉಂಟಾಗಿದ್ದ ಬಿಕ್ಕಟ್ಟು ಅಮೇರಿಕಾದ ಮಧ್ಯಪ್ರವೇಶದಿಂದಾಗಿತಾತ್ಕಾಲಿಕವಾಗಿ ಉಪಶಮನ ಕಂಡಿದೆ.ತಕ್ಷಣದಿಂದಲೇ ಅನ್ವಯವಾಗುವಂತೆ ಉಭಯ ರಾಷ್ಟ್ರಗಳು ಕದನ ವಿರಾಮ ಘೋಷಣೆ ಮಾಡಿವೆ.
ಇದರಿಂದಾಗಿ ಎರಡು ಅಣ್ವಸ್ತ್ರ ರಾಷ್ಟ್ರಗಳ ನಡುವೆ ಯಾವುದೇ ಕ್ಷಣದಲ್ಲಿ ಯುದ್ದ ಘೋಷಣೆಯಾಗಬಹುದು ಎಂದು ನಿರೀಕ್ಷೆ ಹುಸಿಯಾಗಿದ್ದು, ಕದನ ವಿರಾಮಕ್ಕೆ ಸಮ್ಮತಿಸಿವೆ.ಶುಕ್ರವಾರ ರಾತ್ರಿ ಅಮೇರಿಕಾದ ಅಧ್ಯಕ್ಷ ಡ್ರೊನಲ್ಡ್ ಟ್ರಂಪ್ ಅವರು ಭಾರತ ಹಾಗೂ ಪಾಕಿಸ್ತಾನದ ನಡುವೆ ನಡೆಸಿದ ಸುಧೀರ್ಘ ಸಂಧಾನ ಫಲಪ್ರದಕಾರಿಯಾಗಿದೆ. ಶನಿವಾರದಿಂದಲೇ ಅನ್ವಯವಾಗುವಂತೆ ಕದನ ವಿರಾಮಕ್ಕೆ ಎರಡೂ ರಾಷ್ಟ್ರಗಳನಾಯಕರು ಒಪ್ಪಿಗೆ ಸೂಚಿಸಿದ್ದಾರೆ.
ಈ ನಡುವೆ ಕದನ ವಿರಾಮವನ್ನು ಭಾರತ ಕೂಡಾ ಖಚಿತಪಡಿಸಿದೆ. ಈ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ಮಿಶ್ರಿ ಚುಟುಕು ಸುದ್ದಿಗೋಷ್ಠಿ ನಡೆಸಿ ಕದನ ವಿರಾಮಕ್ಕೆ ಭಾರತ ಒಪ್ಪಿಗೆ ನೀಡಿದೆ ಎಂದು
ಖಚಿತಪಡಿಸಿದರು.ಶನಿವಾರ ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಯಾಗಿದೆ ಎಂದು ಹೇಳಿದ್ದಾರೆ. ಪಾಕ್ ಈ ಬಗ್ಗೆ ಮೊದಲು ಪ್ರಸ್ತಾಪ ಮಾಡಿತ್ತು. ಇದನ್ನು ಭಾರತ ಒಪ್ಪಿಕೊಂಡಿದ್ದು, ಸಂಜೆ ಐದರಿಂದಲೇ ಕದನ ವಿರಾಮ ಜಾರಿಗೆ ಬಂದಿದೆ ಎಂದು ತಿಳಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನ “ಪೂರ್ಣ ಮತ್ತು ತಕ್ಷಣದ” ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದರು.ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿಮತ್ತೆಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು. ನಿಮ್ಮ ಗಮನಕ್ಕೆ ಧನ್ಯವಾದಗಳು ಎಂದು ಟ್ರಂಪ್ ಅವರು ತಮ್ಮ ಅಧಿಕೃತ ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.ಇತ್ತ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ ಅವರು ಸಹ ಟ್ರಂಪ್ ಟ್ವೀಟ್‌ನ್ನ ರೀ ಟ್ವೀಟ್ ಮಾಡಿದ್ದಾರೆ.
ಕಳೆದ 48 ಗಂಟೆಗಳಲ್ಲಿ ಅಮೆರಿಕದ ಉಪಾಧ್ಯಕ್ಷ ವ್ಯಾನ್ಸ್ ಮತ್ತು ನಾನು ಭಾರತದ ಪ್ರಧಾನಿ ನರೇಂದ್ರ ಮೋದಿ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್, ಭಾರತದ ವಿದೇಶಾಂಗ ಸಚಿವ ಸುಬ್ರಹ್ಮಣ್ಯಂ ಜೈಶಂಕರ್, ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್, ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್ ಮತ್ತು ಅಸಿಮ್ ಮಲಿಕ್ ಸೇರಿದಂತೆ ಹಿರಿಯ ಭಾರತೀಯ ಮತ್ತು ಪಾಕಿಸ್ತಾನಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಮತ್ತು ತಟಸ್ಥ ಸ್ಥಳದಲ್ಲಿ ವ್ಯಾಪಕವಾದ ವಿಷಯಗಳ ಕುರಿತು ಮಾತುಕತೆಗಳನ್ನು ಪ್ರಾರಂಭಿಸಲು ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಶಾಂತಿಯ ಮಾರ್ಗವನ್ನು ಆಯ್ಕೆ ಮಾಡುವಲ್ಲಿ ಪ್ರಧಾನಿ ಮೋದಿ ಮತ್ತು ಷರೀಫ್ ಅವರ ಬುದ್ಧಿವಂತಿಕೆ, ವಿವೇಕ ಮತ್ತು ರಾಜತಾಂತ್ರಿಕತೆಯನ್ನು ನಾವು ಶ್ಲಾಘಿಸುತ್ತೇವೆ” ಎಂದು ಹೇಳಿದ್ದಾರೆ.
ಪಾಕಿಸ್ತಾನ ಮತ್ತು ಭಾರತ ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಪಾಕಿಸ್ತಾನವು ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆಯಾಗದಂತೆ ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗಾಗಿ ಯಾವಾಗಲೂ ಶ್ರಮಿಸುತ್ತಿದೆ ಎಂಬ ಟ್ರಂಪ್ ಹೇಳಿಕೆಯನ್ನು ಪಾಕಿಸ್ತಾನದ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಕೂಡ ಅನುಮೋದಿಸಿದ್ದಾರೆ.
ಪಾಕ್ ಗೆ ಎಚ್ಚರಿಕೆ ಕೊಟ್ಟಿದ್ದ ಭಾರತ
ಇದಕ್ಕೂ ಮುನ್ನ ಪದೇ ಪದೇ ಕಾಲು ಕೆದರಿ ಖ್ಯಾತೆ ತೆಗೆಯುತ್ತಿದ್ದ ಪಾಕಿಸ್ತಾನಕ್ಕೆ ಭಾರತ ನೇರ ನೇರ ಎಚ್ಚರಿಕೆಯ ಸಂದೇಶವನ್ನು ರವಾನಿಸಿತ್ತು. ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ಕೃತ್ಯವನ್ನು ದೇಶದ ವಿರುದ್ಧದ ಯುದ್ಧ ಕೃತ್ಯವೆಂದು ಪರಿಗಣಿಸಲಾಗುವುದು ಮತ್ತು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸಲಾಗುವುದು ಎಂದು ಭಾರತ ಹೇಳಿದೆ. ಪಾಕಿಸ್ತಾನ ಎರಡು ದಿನಗಳ ಕಾಲ ಡ್ರೋನ್ ಮತ್ತು ಕ್ಷಿಪಣಿ ದಾಳಿಗೆ ಪ್ರಯತ್ನಿಸಿದ ನಂತರ ಭಾರತ ಸರ್ಕಾರ ಈ ಹೇಳಿಕೆ ನೀಡಿದ್ದು, ಪಾಕಿಸ್ತಾನದ ಡ್ರೋನ್ ದಾಳಿಯನ್ನು ಪ್ರಚೋದನಕಾರಿ ಕೃತ್ಯ ಎಂದು ವಿದೇಶಾಂಗ ಇಲಾಖೆ ಟೀಕಿಸಿದೆ.
ಈ , ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವು ಭಯೋತ್ಪಾದಕ ಕೃತ್ಯಗಳಿಗೆ ಅಂತ್ಯವಾಡಲು ಬಯಸಿದೆ. ಉಗ್ರ ಸಂಘಟನೆಗಳಿಗೆ ಬೆಂಬಲ ನೀಡಿ, ಭಾರತವನ್ನು ಕಾಡುತ್ತಿರುವ ನೆರೆಯ ರಾಷ್ಟ್ರಕ್ಕೆ ಭಾರತ ಬಲವಾದ ಸಂದೇಶ ರವಾನಿಸಿದೆ.
ಪಾಕಿಸ್ತಾನದೊಂದಿಗೆ ಸೇನಾ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆ ಭಾರತದ ಭದ್ರತಾ ಪರಿಸ್ಥಿತಿ ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಿಬ್ಬಂದಿಯೊಂದಿಗೆ ಶನಿವಾರ ಉನ್ನತ ಮಟ್ಟದ ಸಭೆ ನಡೆಸಿದ್ದು, ಈ ವೇಳೆ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಭದ್ರತಾ ಸನ್ನಿವೇಶವನ್ನು ಪರಿಶೀಲಿಸಲು ಮತ್ತು ಭವಿಷ್ಯದ ಕ್ರಮಕ್ಕಾಗಿ ಕಾರ್ಯತಂತ್ರಗಳನ್ನು ರೂಪಿಸಲು ರಕ್ಷಣಾ ಸಚಿವ ರಾಜನಾಥ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್, ಮೂರೂ ಪಡೆಗಳು ಮುಖ್ಯಸ್ಥರ, ಸೇನಾ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್ ಅವರೊಂದಿಗೆ ಮೋದಿ ಚರ್ಚೆ ನಡೆಸಿದ್ದಾರೆ. ಭಾರತದ ನೆಲೆಗಳ ಮೇಲೆ ದಾಳಿ ನಡೆಸುತ್ತಿರುವ ಪಾಕಿಸ್ತಾನಕ್ಕೆ, ಭದ್ರತಾ ಪಡೆಗಳು ಪ್ರಮಾಣಾನುಗುಣವಾಗಿ ಮತ್ತು ಸಮರ್ಪಕವಾಗಿ ತಿರುಗೇಟು ನೀಡುತ್ತಿವೆ. ಉಭಯ ರಾಷ್ಟ್ರಗಳ ನಡುವೆ ತ್ವೇಷಮಯ ವಾತಾವರಣ ಇದೆ. ಭಾರತದ ಮುಂಚೂಣಿ ನೆಲೆಗಳತ್ತ ಪಾಕಿಸ್ತಾನ ತನ್ನ ಸೇನೆಯನ್ನು ಕಳುಹಿಸುತ್ತಿದೆ ಎಂದು ಭಾರತ ಗುರುವಾರ ಹೇಳಿದೆ. ಉಭಯ ರಾಷ್ಟ್ರಗಳು ಸೇನಾ ಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿವೆ.
ಈ ನಿರ್ಧಾರದೊಂದಿಗೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಭಯೋತ್ಪಾದಕ ಘಟನೆಗಳ ವಿರುದ್ಧ ಕೆಂಪು ಗೆರೆ (ರೆಡ್ ಲೈನ್)ಗಳನ್ನು ಎಳೆಯಲು ಪ್ರಯತ್ನಿಸುತ್ತಿದೆ ಮತ್ತು ಅಪರಾಧಿಗಳು ಮತ್ತು ಪಿತೂರಿಗಾರರಿಗೆ ದೃಢವಾಗಿ ಪ್ರತಿಕ್ರಿಯಿಸುವ ಉದ್ದೇಶವನ್ನು ಸ್ಪಷ್ಟಪಡಿಸುತ್ತದೆ, ಇದು ಭಾರತೀಯರನ್ನು ಗುರಿಯಾಗಿಸಿಕೊಂಡು ವಿವಿಧ ಭಯೋತ್ಪಾದಕ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಪಾಕಿಸ್ತಾನಕ್ಕೆ ಸಂದೇಶವೆಂದು ಪರಿಗಣಿಸಲಾಗಿದೆ.
‘ಗಡಿ ಪ್ರದೇಶಗಳಿಗೆ ಪಾಕಿಸ್ತಾನ ತನ್ನ ಸೇನೆಯನ್ನು ಕಳುಹಿಸುತ್ತಿದೆ’ ಎಂದು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹಾಗೂ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರೊಂದಿಗೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸೋಫಿಯಾ ಖುರೇಷಿ ತಿಳಿಸಿದ್ದರು. ಇತ್ತೀಚಿನ ವರ್ಷಗಳಲ್ಲಿ ಭಾರತವು ಹಲವಾರು ಭಯೋತ್ಪಾದಕ ದಾಳಿಗಳನ್ನು ಎದುರಿಸಿದೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಭಯೋತ್ಪಾದನೆಯನ್ನು ಗಂಭೀರವಾಗಿ ಪರಿಗಣಿಸಲು ಮತ್ತು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.
ಯುದ್ಧ ಕಾಯ್ದೆಯು ಒಂದು ರಾಜ್ಯದ ಸಾರ್ವಭೌಮತ್ವ ಅಥವಾ ಪ್ರಾದೇಶಿಕ ಸಮಗ್ರತೆಗೆ ಅಥವಾ ಅದರ ಜನರ ಸುರಕ್ಷತೆಗೆ ಧಕ್ಕೆ ತರುವ ಸಶಸ್ತ್ರ ದಾಳಿ ಅಥವಾ ಬಲಪ್ರಯೋಗವನ್ನು ಒಳಗೊಂಡಿದೆ.ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಸ್ಲಾಮಿಕ್ ಭಯೋತ್ಪಾದಕರು 26 ಮಂದಿ ಪ್ರವಾಸಿಗರನ್ನು ಹತ್ಯೆ ಮಾಡಿದ ಘಟನೆಯ ನಂತರ ಭಾರತ ಸರ್ಕಾರದ ನೀತಿಯಲ್ಲಿ ಇದು ಪ್ರಮುಖ ಬದಲಾವಣೆಯಾಗಿದೆ.
ಈಘಟನೆಗೆ ಪ್ರತಿಕ್ರಿಯೆಯಾಗಿ, ಭಾರತೀಯ ಪಡೆಗಳು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಒಂಬತ್ತು ಸ್ಥಳಗಳ ಮೇಲೆ ಬಾಂಬ್ ದಾಳಿ ನಡೆಸಿತ್ತು. ಇದರಲ್ಲಿ ನೂರಾರು ಭಯೋತ್ಪಾದಕರು ಸಾವನ್ನಪ್ಪಿದ್ದರು. ಭಾರತೀಯ ಸೇನೆಯ ಈ ಕ್ರಮದಿಂದ ಪಾಕಿಸ್ತಾನ ಬೆಚ್ಚಿಬಿದ್ದಿದೆ. ಹೀಗಾಗಿ ಪದೇ ಪದೇ ಭಾರತೀಯ ಸೇನಾ ನೆಲೆಗಳು ಮತ್ತು ಇತರ ಸ್ಥಳಗಳ ಮೇಲೆ ಕ್ಷಿಪಣಿಗಳ ದಾಳಿ ಮಾಡಲು ಪ್ರಯತ್ನಿಸುತ್ತಿದೆ. ಆದರೆ, ಭಾರತದ ಬಲಿಷ್ಠ ರಕ್ಷಣಾ ಕವಚವು ಆ ದಾಳಿಗಳನ್ನು ವಿಫಲಗೊಳಿಸುತ್ತಿದೆ.
ಇದಕ್ಕೂ ಮುನ್ನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿಮ ಭಾರತ ಇನ್ನು ಮುಂದೆ ಭಯೋತ್ಪಾದನೆಯನ್ನು ಸಹಿಸುವುದಿಲ್ಲ ಎಂದು ಹೇಳಿದ್ದರು. ಯಾವುದೇ ದೇಶ ಅಥವಾ ಸಂಘಟನೆ ನಮ್ಮ ನಾಗರಿಕರ ಮೇಲೆ ಭಯೋತ್ಪಾದಕ ದಾಳಿ ನಡೆಸಿದರೆ, ನಾವು ಅದನ್ನು ಯುದ್ಧವೆಂದು ಪರಿಗಣಿಸಿ ಮಿಲಿಟರಿ ಕ್ರಮದ ಮೂಲಕ ಪ್ರತಿಕ್ರಿಯಿಸುತ್ತೇವೆ. ಅಂತಹ ಯಾವುದೇ ಪಿತೂರಿಯನ್ನು ವಿಫಲಗೊಳಿಸಲು ಭಾರತದ ಸೇನೆ ಮತ್ತು ಗುಪ್ತಚರ ಸಂಸ್ಥೆಗಳು ಸಿದ್ಧವಾಗಿವೆ ಎಂದು ಅವರು ಸ್ಪಷ್ಟಪಡಿಸಿದರು.
ಈ ನಿರ್ಧಾರವು ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ಬಗ್ಗೆ ಮಾತನಾಡುವ ಭಾರತದ ಹೊಸ ನೀತಿಯನ್ನು ಪ್ರತಿಬಿಂಬಿಸುತ್ತದೆ. ಆಪರೇಷನ್ ಸಿಂಧೂರ್‌ನಲ್ಲಿ, ಮುದಸ್ಸರ್ ಖಾದಿಯಾನ್ ಖಾಸ್, ಹಫೀಜ್ ಮುಹಮ್ಮದ್ ಜಮೀಲ್ ಮತ್ತು ಮೊಹಮ್ಮದ್ ಯೂಸುಫ್ ಅಜರ್ ಸೇರಿದಂತೆ ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೈಬಾದ ಅನೇಕ ಉನ್ನತ ಭಯೋತ್ಪಾದಕರನ್ನು ಭಾರತ ಕೊಂದಿತು. ಈ ದಾಳಿಗಳು ಭಾರತವು ಭಯೋತ್ಪಾದಕ ಚಟುವಟಿಕೆಗಳಿಗೆ ಪ್ರತಿಯಾಗಿ ಹಿಂದೆ ಸರಿಯುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಪಾಕಿಸ್ತಾನಕ್ಕೆ ನೀಡಿತು.
ಭಾರತ ಸರ್ಕಾರದ ಈ ನೀತಿ ಬದಲಾವಣೆಯನ್ನು ರಕ್ಷಣಾ ತಜ್ಞರು ಕೂಡ ಶ್ಲಾಘಿಸುತ್ತಿದ್ದಾರೆ. ಈ ನಿರ್ಧಾರ ಭಾರತದ ಶಕ್ತಿ ಮತ್ತು ಇಚ್ಛಾಶಕ್ತಿಯನ್ನು ತೋರಿಸುತ್ತದೆ ಎಂದು ಅವರು ಹೇಳುತ್ತಾರೆ. ಈಗ ಯಾವುದೇ ದೇಶ ಅಥವಾ ಭಯೋತ್ಪಾದಕ ಸಂಘಟನೆ ಭಾರತದ ಮೇಲೆ ದಾಳಿ ಮಾಡುವ ಮೊದಲು ನೂರು ಬಾರಿ ಯೋಚಿಸುತ್ತದೆ. ನಮ್ಮ ಸೇನೆಯು 16 ಲಕ್ಷ ಸೈನಿಕರು, ಆಧುನಿಕ ಶಸ್ತ್ರಾಸ್ತ್ರಗಳು ಮತ್ತು ಉಪಗ್ರಹ ಕಣ್ಗಾವಲಿನಂತಹ ಸಂಪನ್ಮೂಲಗಳನ್ನು ಹೊಂದಿದ್ದು, ಯಾವುದೇ ಬೆದರಿಕೆಯನ್ನು ಎದುರಿಸಲು ನಮಗೆ ಅನುವು ಮಾಡಿಕೊಡುತ್ತದೆ.
ಪಾಕಿಸ್ತಾನಲ್ಲಿ ಮಿಲಿಟರಿ ಸೈನಿಕರ ಸಂಖ್ಯೆ ಕಡಿಮೆಯಿದ್ದು ಉಗ್ರರ ಬಳಸಿಕೊಂಡು ಪ್ರತಿದಾಳಿ ನಡೆಸುತ್ತದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ ಬೆನ್ನಲ್ಲೇ ಈ ಮಹತ್ವದ ನಿರ್ಧಾರ ದೇಹದ.
ಪಾಕಿಸ್ತಾನವು ಗಡಿಭಾಗದಲ್ಲಿ ಆಸ್ಪತ್ರೆ, ಶಾಲೆ, ಜನವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡುತ್ತಿದೆ. ಇದನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ ಅವರು ಸಶಸ್ತ್ರ ಪಡೆಗಳ ಮುಖ್ಯಸ್ಥರ ಜೊತೆ ಸರಣಿ ಮಾತುಕತೆ ನಡೆಸಿದ್ದಾರೆ.
ಪಾಕಿಸ್ತಾನವು ಮುಂದೆ ನಡೆಸುವ ಯಾವುದೇ ದಾಳಿಯನ್ನು ದೇಶದ ವಿರುದ್ಧ ಸಾರಿದ ‘ಯುದ್ಧ’ ಎಂದು ಪರಿಗಣಿಸಲಾಗುತ್ತದೆ. ಅದಕ್ಕೆ ತಕ್ಕ ಪ್ರತಿಕ್ರಿಯೆ ನೀಡಲು ಭಾರತೀಯ ಸೇನೆ ನಿರ್ಧರಿಸಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.ಪಾಕಿಸ್ತಾನ ಎರಡು ದಿನಗಳ ಕಾಲ ಡ್ರೋನ್ ಮತ್ತು ಕ್ಷಿಪಣಿ ದಾಳಿಗೆ ಪ್ರಯತ್ನಿಸಿದ ನಂತರ ಭಾರತ ಸರ್ಕಾರ ಈ ಹೇಳಿಕೆ ನೀಡಿದೆ. ಪಾಕಿಸ್ತಾನದ ಡ್ರೋನ್ ದಾಳಿಯನ್ನು ಪ್ರಚೋದನಕಾರಿ ಕೃತ್ಯ ಎಂದು ವಿದೇಶಾಂಗ ಇಲಾಖೆ ಟೀಕಿಸಿದೆ.
ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಪಾಕಿಸ್ತಾನದ ಕ್ರಮಗಳು ಪ್ರಚೋದನೆ ಮತ್ತು ಉಲ್ಬಣವನ್ನು ರೂಪಿಸಿವೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತವು ಈ ಪ್ರಚೋದನೆಗಳನ್ನು ಸಮರ್ಥಿಸಿಕೊಂಡಿದೆ ಎಂದು ಅವರು ಹೇಳಿದ್ದರು.
ಪಾಕಿಸ್ತಾನ ಉದ್ದೇಶಪೂರ್ವಕವಾಗಿ ವಾಯುನೆಲೆಗಳನ್ನು ಗುರಿಯಾಗಿಸಿಕೊಂಡ ನಂತರ, ಭಾರತೀಯ ಸಶಸ್ತ್ರ ಪಡೆಗಳು ಪ್ರತೀಕಾರದ ಕ್ರಮ ಕೈಗೊಂಡವು. ಪಾಕಿಸ್ತಾನದಲ್ಲಿನ ತಾಂತ್ರಿಕ ಸ್ಥಾಪನೆಗಳು, ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಗಳು, ರಾಡಾರ್ ತಾಣಗಳನ್ನು ಗುರಿಯಾಗಿಸಿಕೊಂಡವು ಎಂದು ಸೇನಾ ಅಧಿಕಾರಿ ಹೇಳಿದರು. ರಫಿಕಿ, ಮುರಿಯದ್, ಚಕ್ಲಾಲಾ, ರಹೀಮ್ ಯಾರ್ ಖಾನ್, ಸುಕ್ಕೂರ್ ಮತ್ತು ಚುನಿಯನ್‌ನಲ್ಲಿರುವ ಪಾಕಿಸ್ತಾನಿ ಸೇನಾ ನೆಲೆಗಳನ್ನು ವಾಯು ಉಡಾವಣೆ, ಮದ್ದುಗುಂಡುಗಳು ಮತ್ತು ಫೈಟರ್ ಜೆಟ್‌ಗಳ ಮೂಲಕ ಗುರಿಯಾಗಿಸಲಾಗಿತ್ತು.
ಟ್ರಂಪ್ X ನಲ್ಲಿ ಹೇಳಿದ್ದೇನು..?
ಈ ಕುರಿತು ಡೊನಾಲ್ಡ್ ಟ್ರಂಪ್ X ಮಾಡಿದ್ದು “ಅಮೆರಿಕದ ಮಧ್ಯಸ್ಥಿಕೆಯಲ್ಲಿ ರಾತ್ರಿಯಿಡೀ ನಡೆದ ಸುದೀರ್ಘ ಮಾತುಕತೆಯ ನಂತರ, ಭಾರತ ಮತ್ತು ಪಾಕಿಸ್ತಾನಗಳು ಸಂಪೂರ್ಣ ಮತ್ತು ತಕ್ಷಣದ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿಮತ್ತೆಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು. ಈ ವಿಷಯದ ಬಗ್ಗೆ ನಿಮ್ಮ ಗಮನಕ್ಕೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.
ಸಂಜೆ 5 ಗಂಟೆಯಿಂದಲೇ ಕದನ ವಿರಾಮ
ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಯಾಗಿರೋದನ್ನು ಖಚಿತಪಡಿಸಿದ ಭಾರತ. ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಯಾಗಿದೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಹೇಳಿದ್ದಾರೆ. ಮೇ 12ರಂದು ಮಾತುಕತೆಗೆ ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.ಇತ್ತ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ ಅವರು ಸಹ ಟ್ರಂಪ್ ಟ್ವೀಟ್‌ನ್ನ ರೀ ಟ್ವೀಟ್ ಮಾಡಿದ್ದಾರೆ.
ಕಳೆದ ಮೂರು ದಿನಗಳಿಂದ ಪಾಕಿಸ್ತಾನ ಭಾರತದ ಮೇಲೆ ಕಾಲು ಕೆರೆದು ದಾಳಿ ನಡೆಸುತ್ತಲೇ ಇತ್ತು ನಿನ್ನೆ ಪಾಕಿಸ್ತಾನ ಭಾರತದ 36 ಕಡೆಗಳಲ್ಲಿ 300ರಿಂದ 400 ಡ್ರೋನ್ಗಳ ಮೂಲಕ ದಾಳಿ ನಡೆಸಲು ಯತ್ನಿಸಿತ್ತು. ಆ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿತ್ತು.
ಮೂರೇ ದಿನಕ್ಕೆ ಮಂಡಿಯೂರಿದ ಪಾಕ್ :
ಕಳೆದ ಮೂರು ದಿನಗಳಿಂದ ಪಾಕಿಸ್ತಾನ ಭಾರತದ ಮೇಲೆ ಕಾಲು ಕೆರೆದು ದಾಳಿ ನಡೆಸುತ್ತಲೇ ಇತ್ತು ನಿನ್ನೆ ಪಾಕಿಸ್ತಾನ ಭಾರತದ 36 ಕಡೆಗಳಲ್ಲಿ 300ರಿಂದ 400 ಡ್ರೋನ್ಗಳ ಮೂಲಕ ದಾಳಿ ನಡೆಸಲು ಯತ್ನಿಸಿತ್ತು. ಆ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿತ್ತು. ಇಂದೂ ಕೂಡ ಪಾಕಿಸ್ತಾನದ ಹಲವು ಏರ್ ಬೇಸ್ ಗಳನ್ನೂ ಭಾರತ ನಾಶಮಾಡಿತ್ತು . ಭಾರತದ ದಾಳಿಗೆ ಬೆಚ್ಚಿಬಿದ್ದಿರುವ ಪಾಕ್ ಮೂರೇ ದಿನಕ್ಕೆ ಮಂಡಿಯೂರಿ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ. ಈ ಕದನ ವಿರಾಮದ ಕುರಿತು ಮತ್ತಷ್ಟು ವಿಚಾರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
ಪಾಕಿಸ್ತಾನ ಹಾಗೂ ಭಾರತದ ನಡುವೆ ಘರ್ಷಣೆ ತೀವ್ರವಾಗಿತ್ತು. ಇದರಿಂದ ಪಾಕಿಸ್ತಾನ ಸಾಕಷ್ಟು ನಷ್ಟ ಅನುಭವಿಸಿ ಸಮಸ್ಯೆಗೆ ಒಳಗಾಗಿ ಭಾರತವನ್ನು ಸಂಪರ್ಕ ಮಾಡಿತ್ತು ಎನ್ನಲಾಗಿದ್ದು. ಈ ಎರಡು ರಾಷ್ಟ್ರಗಳ ನಡುವೆ ಅಮೆರಿಕ ಮಧ್ಯಪ್ರವೇಶಿಸಿ ಮಾತುಕತೆ ನಡೆಸಿತ್ತು. ಶಾಂತಿಯನ್ನು ಕಾಪಾಡುವುದಕ್ಕಾಗಿ ಭಾರತ ಒಪ್ಪಿಗೆ ಸೂಚಿಸಿದೆ. ಇದರಿಂದ ಎರಡು ರಾಷ್ಟ್ರಗಳು ಸದ್ಯಕ್ಕೆ ಕದನ ವಿರಾಮವನ್ನು ಘೋಷಣೆ ಮಾಡಿವೆ.