Wednesday, May 14, 2025
Homeರಾಷ್ಟ್ರೀಯ | Nationalಸೈನಿಕರಿಗೆ ಆಸ್ತಿ ತೆರಿಗೆ ವಿನಾಯಿತಿ ಘೋಷಿಸಿದ ಆಂಧ್ರ ಸರ್ಕಾರ

ಸೈನಿಕರಿಗೆ ಆಸ್ತಿ ತೆರಿಗೆ ವಿನಾಯಿತಿ ಘೋಷಿಸಿದ ಆಂಧ್ರ ಸರ್ಕಾರ

Andhra Pradesh exempts Defence Personnel from property tax

ಅಮರಾವತಿ, ಮೇ 13- ಆಂಧ್ರಪ್ರದೇಶದಲ್ಲಿ ಸೈನಿಕರ ಒಡೆತನದ ಮನೆಗಳಿಗೆ ಆಸ್ತಿ ತೆರಿಗೆ ವಿನಾಯಿತಿ ಘೋಷಣೆ ಮಾಡಲಾಗಿದೆ. ಗ್ರಾಮ ಪಂಚಾಯತಿ ಮಿತಿಯೊಳಗಿನ ಸೈನಿಕರ ಒಡೆತನದ ಮನೆಗಳಿಗೆ ಆಸ್ತಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಘೋಷಿಸಿದ್ದಾರೆ.

ಈ ಬಗ್ಗೆ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಪೋಸ್ಟ್‌ನಲ್ಲಿ, ಈ ಹಿಂದೆ ನಿವೃತ್ತ ಸೈನಿಕರು ಅಥವಾ ಗಡಿಗಳಲ್ಲಿ ನಿಯೋಜನೆಗೊಂಡವರಿಗೆ ಸೀಮಿತವಾಗಿತ್ತು. ಇನ್ನುಮುಂದೆ ಈ ವಿನಾಯಿತಿಯು ದೇಶದ ಯಾವುದೇ ಭಾಗದಲ್ಲಿ ನಿಯೋಜನೆಗೊಂಡ ಎಲ್ಲಾ ಸಕ್ರಿಯ ಸಿಬ್ಬಂದಿಗೂ ಅನ್ವಯವಾಗುತ್ತದೆ ಎಂದು ತಿಳಿಸಿದ್ದಾರೆ.

ಈ ನಿರ್ಧಾರವು ಸೇನೆ, ನೌಕಾಪಡೆ, ವಾಯುಪಡೆ, ಮತ್ತು ಅರೆಸೈನಿಕ ಪಡೆಗಳಿಗೆ ಗೌರವ ಮತ್ತು ಕೃತಜ್ಞತೆಯ ಸಂಕೇತವಾಗಿದೆ. ರಾಷ್ಟ್ರಕ್ಕಾಗಿ ಅವರ ಸೇವೆ ಅಮೂಲ್ಯವಾದುದ್ದು. ಸಿಬ್ಬಂದಿ ಅಥವಾ ಅವರ ಸಂಗಾತಿ ವಾಸಿಸುವ ಅಥವಾ ಜಂಟಿಯಾಗಿ ಹೊಂದಿರುವ ಆಸ್ತಿ ಮೇಲಿನ ತೆರಿಗೆ ವಿನಾಯಿತಿಗೆ ಅರ್ಹವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಸೈನಿಕ ಕಲ್ಯಾಣ ನಿರ್ದೇಶಕರ ಶಿಫಾರಸಿನ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದು ರಾಷ್ಟ್ರದ ರಕ್ಷಕರಿಗೆ ಆಂಧ್ರದ ಗೌರವ ಮತ್ತು ಕೃತಜ್ಞತೆಯನ್ನು ಎತ್ತಿತೋರಿಸುತ್ತದೆ ಎಂದು ಅವರು ಹೇಳಿಕೊಂಡಿದ್ದಾರೆ.

RELATED ARTICLES

Latest News