Tuesday, July 1, 2025
Homeರಾಷ್ಟ್ರೀಯ | Nationalಕರ್ನಲ್‌ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಸಚಿವ ವಿಜಯ್‌ ಶಾಗೆ ಸುಪ್ರೀಂ ತರಾಟೆ

ಕರ್ನಲ್‌ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಸಚಿವ ವಿಜಯ್‌ ಶಾಗೆ ಸುಪ್ರೀಂ ತರಾಟೆ

MP minister moves SC over case for remarks against Col Qureshi, gets pulled up

ನವದೆಹಲಿ,ಮೇ 15– ಪಾಕಿಸ್ತಾನ ವಿರುದ್ದ ಯಶಸ್ವೀ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿ ಹಲವು ಉಗ್ರರು ಹಾಗೂ ಉಗ್ರಗಾಮಿ ನೆಲೆಗಳನ್ನು ಧ್ವಂಸಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತೀಯ ವಾಯು ಪಡೆಯ ಕರ್ನಲ್‌ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯ ಪ್ರದೇಶದದ ಸಚಿವ ವಿಜಯ್‌ ಶಾ ಅವರನ್ನು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

ಹೇಳಿಕೆ ಸಂಬಂಧ ವಿಚಾರಣೆ ನಡೆಸಿದ್ದ ಜಬ್ಬಲ್ಪುರ ಹೈಕೋರ್ಟ್‌ ಸಚಿವ ವಿಜಯ್‌ ಶಾ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಆದೇಶಿಸಿತ್ತು. ಈ ಆದೇಶದ ಬೆನ್ನಲ್ಲೇ ವಿಜಯ್‌ ಶಾ, ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್‌ ಕಳವಳ ವ್ಯಕ್ತಪಡಿಸಿದ್ದು, ಈ ರೀತಿ ಹೇಳಿಕೆಗಳನ್ನು ನೀಡುವಾಗ ಎಚ್ಚರವಿರಲಿ ಎಂದಿದೆ ಎಂದು ತಾರಾಟೆ ಗೆತೆಗೆದುಕೊಂಡಿದೆ.

ತಮ ಅರ್ಜಿಯ ತ್ವರಿತ ವಿಚಾರಣೆಗೆ ವಿಜಯ್‌ ಶಾ ಒತ್ತಾಯಿಸಿದ್ದರು. ಅವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆಗಳನ್ನು ಪ್ರಾರಂಭಿಸಲು ಹೈಕೋರ್ಟ್‌ ನೀಡಿದ ನಿರ್ದೇಶನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿತು. ಒಂದು ದಿನದಲ್ಲಿ ನಿಮಗೆ ಏನೂ ಆಗುವುದಿಲ್ಲ. ನೀವು ಯಾರೆಂದು ನಿಮಗೆ ತಿಳಿದಿರಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದು, ಬಂಧನದಿಂದ ಮಧ್ಯಂತರ ರಕ್ಷಣೆಗಾಗಿ ಸಲ್ಲಿಸಲಾದ ಅರ್ಜಿಯನ್ನು ತಿರಸ್ಕರಿಸಿದೆ. ಶುಕ್ರವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಒಪ್ಪಿಕೊಂಡಿದೆ.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್‌. ಗವಾಯಿ ಅವರು, ವಿಜಯ್‌ ಶಾ ನೀಡಿದ ಹೇಳಿಕೆಗಳನ್ನು ಟೀಕಿಸಿದ ಕೋರ್ಟ್‌, ದೇಶವು ಉದ್ವಿಗ್ನ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ ಸಚಿವರು ಜವಾಬ್ದಾರಿಯುತರಾಗಿರಬೇಕು ಎನ್ನುವುದು ನಮೆಲ್ಲರ ನಿರೀಕ್ಷೆ. ಸಚಿವರ ಹೇಳಿಕೆಗಳನ್ನು ಸ್ವೀಕಾರಾರ್ಹವಲ್ಲ, ಅದು ಸಂವೇದನಾರಹಿತ ಹೇಳಿಕೆ ಎಂದು ಟೀಕಿಸಿದ್ದಾರೆ.

ಸಾಂವಿಧಾನಿಕ ಹ್ದುೆಗಳನ್ನು ಅಲಂಕರಿಸುವ ವ್ಯಕ್ತಿಗಳು ಭಾಷಣದಲ್ಲಿ ಸಂಯಮವನ್ನು ಹೊಂದಿರಬೇಕು ಎಂದು ಹೇಳಿದ್ದಾರೆ. ನೀವು ಯಾವ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದೀರಿ? ನೀವು ಸ್ವಲ್ಪ ಸಂವೇದನಾಶೀಲತೆಯನ್ನು ತೋರಿಸಬೇಕು. ಹೋಗಿ ಹೈಕೋರ್ಟ್‌ನಲ್ಲಿ ಕ್ಷಮೆ ಯಾಚಿಸಿ. ಸಚಿವರು ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು ಎಂದು ಹೇಳಿದ್ದಾರೆ.

ಬಳಿಕ ಜಬ್ಬಲ್ಪುರ ಹೈಕೋರ್ಟ್‌ ಇದನ್ನು ಅಶ್ಲೀಲ ಭಾಷೆ ಎಂದು ಪರಿಗಣಿಸಿತ್ತು. ಈ ವಿಷಯವನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿ, ವಿಜಯ್‌ ಶಾ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ರಾಜ್ಯ ಪೊಲೀಸ್‌‍ ಮುಖ್ಯಸ್ಥರಿಗೆ ಸೂಚಿಸಿತ್ತು. ಹೈಕೋರ್ಟ್‌ ಆದೇಶದ ನಂತರ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್‌‍) ಸೆಕ್ಷನ್‌ 152, 196(1)(ಬಿ), ಮತ್ತು 197(1)(ಸಿ) ಅಡಿಯಲ್ಲಿ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಹೈಕೋರ್ಟ್‌ನ ವಿಭಾಗೀಯ ಪೀಠವು ಅವರ ವಿರುದ್ಧ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ಪೊಲೀಸ್‌‍ ಮಹಾನಿರ್ದೇಶಕರಿಗೆ (ಡಿಜಿಪಿ) ತಕ್ಷಣ ಎಫ್‌ಐಆರ್‌ ದಾಖಲಿಸುವಂತೆ ಸೂಚಿಸಿದೆ.

ವಿಜಯ್‌ ಶಾ ಹೇಳಿದ್ದೇನು? :
ಇಂದೋರ್‌ ಜಿಲ್ಲೆಯ ಮಾಹುವಿನ ರಾಯ್ಕುಂಡ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯ್‌ ಶಾ ಅವರು ಪಾಕಿಸ್ತಾನ ವಿರುದ್ಧ ನಡೆದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ಯಶಸ್ಸನ್ನು ಹೇಳಿ ಮೋದಿ ಸರ್ಕಾರವನ್ನು ಶ್ಲಾಘಿಸಿದ್ದರು.ಭಾಷಣದಲ್ಲಿ, ಭಯೋತ್ಪಾದಕರು ನಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದ್ದರು. ಆ ಉಗ್ರರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ನಾವು ಕಳುಹಿಸಿದ್ದೇವೆ ಎಂದು ಹೇಳಿದ್ದರು.

ಭಾಷಣದಲ್ಲಿ ವಿಜಯ್‌ ಶಾ ಮುಸ್ಲಿಂ ಸಮುದಾಯಕ್ಕೆ ಸೇರಿದ ಉಗ್ರರನ್ನು ಸದೆ ಬಡಿಯಲು ಮುಸ್ಲಿಂ ಸಮುದಾಯಕ್ಕೆ ಸೇರಿದ ಕರ್ನಲ್‌ ಸೋಫಿಯಾ ಖುರೇಷಿ ಅವರ ಹೆಸರನ್ನು ಸ್ಪಷ್ಟವಾಗಿ ಹೇಳದೇ ಇದ್ದರೂ ಅವರನ್ನು ಉಲ್ಲೇಖಿಸಿಯೇ ಭಾಷಣ ಮಾಡಿದ್ದು ವ್ಯಾಪಕ ಟೀಕೆಗೆ ಗುರಿಯಾಗಿತ್ತು.

ಕ್ಷಮೆ ಯಾಚಿಸಿದ್ದ ವಿಜಯ್‌ ಶಾ :
ಇನ್ನು ತಮ ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಲೇ ವಿಜಯ್‌ ಶಾ ಮಾಧ್ಯಮಗಳಲ್ಲಿ ಕ್ಷಮೆ ಯಾಚಿಸುವುದಾಗಿ ಹೇಳಿದ್ದರು. ನನ್ನ ಸಂಪೂರ್ಣ ಕುಟುಂಬ ಸೇನಾ ಹಿನ್ನಲೆಯಿಂದ ಬಂದಿದೆ. ನನ್ನ ಕುಟುಂಬದ ಅನೇಕ ಸದಸ್ಯರು ಹುತಾತರಾಗಿದ್ದಾರೆ. ಇನ್ನೂ ಸಾಕಷ್ಟು ಮಂದಿ ಮಿಲಿಟರಿಯಲ್ಲಿದ್ದರು. ಸಹೋದರಿ ಸೋಫಿಯಾ ಖುರೇಷಿ ಬಗ್ಗೆ ನಾನು ಕನಸಿನಲ್ಲೂ ಆ ರೀತಿ ಭಾವಿಸಲು ಸಾಧ್ಯವಿಲ್ಲ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ.

ಸಿಸ್ಟರ್‌ ಸೋಫಿಯಾ ಜಾತಿ ಮತ್ತು ಧರ್ಮವನ್ನು ಮೀರಿ ಭಾರತಕ್ಕೆ ಕೀರ್ತಿ ತಂದಿದ್ದಾರೆ. ಅವರು ನಮ ಸ್ವಂತ ಸಹೋದರಿಗಿಂತ ಹೆಚ್ಚು ಗೌರವಾನ್ವಿತರು. ಅವರು ರಾಷ್ಟ್ರಕ್ಕೆ ಮಾಡಿದ ಸೇವೆಗೆ ನಾನು ಅವರಿಗೆ ನಮಸ್ಕರಿಸುತ್ತೇನೆ. ನಮ ಕನಸಿನಲ್ಲಿಯೂ ಅವರನ್ನು ಅವಮಾನಿಸುವ ಬಗ್ಗೆ ನಾವು ಯೋಚಿಸಲು ಸಹ ಸಾಧ್ಯವಿಲ್ಲ. ಆದರೂ, ನನ್ನ ಮಾತುಗಳು ಸಮಾಜ ಮತ್ತು ಧರ್ಮಕ್ಕೆ ನೋವುಂಟು ಮಾಡಿದ್ದರೆ, ನಾನು ಒಂದಲ್ಲ ಹತ್ತು ಬಾರಿ ಕ್ಷಮೆ ಯಾಚಿಸಲು ಸಿದ್ಧನಿದ್ದೇನೆ ಎಂದು ಅವರು ಹೇಳಿದ್ದಾರೆ.

RELATED ARTICLES

Latest News