Tuesday, July 1, 2025
Homeರಾಷ್ಟ್ರೀಯ | Nationalಭಾರತ-ಅಫ್ಘಾನ್ ಸಂಬಂಧ ಕೆಡಿಸಲು ಪಾಕ್‌ಗೆ ಸಾಧ್ಯವಿಲ್ಲ ; ಎಸ್.ಜೈಶಂಕರ್

ಭಾರತ-ಅಫ್ಘಾನ್ ಸಂಬಂಧ ಕೆಡಿಸಲು ಪಾಕ್‌ಗೆ ಸಾಧ್ಯವಿಲ್ಲ ; ಎಸ್.ಜೈಶಂಕರ್

Won't Let Pakistan Derail Ties': Jaishankar's First Call With Taliban Minister

ನವದೆಹಲಿ, ಮೇ 16: ಭಾರತ ಹಾಗೂ ಅಫ್ಘಾನಿಸ್ತಾನದ ನಡುವಿನ ಸಂಬಂಧವನ್ನು ಹಾಳು ಮಾಡಲು ಪಾಕಿಸ್ತಾನಕ್ಕೆ ಬಿಡುವುದಿಲ್ಲ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
ಜೈಶಂಕರ್ ಮತ್ತು ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ನಡುವಿನ ಮಾತುಕತೆ ಸಂದರ್ಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ತಾಲಿಬಾನ್ ಆಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಜೈಶಂಕರ್ ಮತ್ತು ಮುತ್ತಕಿ ನೇರವಾಗಿ ಮಾತನಾಡುತ್ತಿರುವುದು ಇದೇ ಮೊದಲು. ಈ ಮಾತುಕತೆಗಳು ಎರಡೂ ರಾಷ್ಟ್ರಗಳಿಗೆ ಮತ್ತು ಪ್ರಾದೇಶಿಕ ಸ್ಥಿರತೆಗೆ ಕಾರ್ಯತಂತ್ರದ ಮಹತ್ವವನ್ನು ಹೊಂದಿವೆ.

ತಾಲಿಬಾನ್ ಆಳ್ವಿಕೆಯಲ್ಲಿರುವ ಅಫ್ಘಾನಿಸ್ತಾನವು ಐಸಿಸ್-ಕೆ. ತೆಪ್ರಿಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಮತ್ತು ಅಲ್-ಖೈದಾದಂತಹ ಉಗ್ರಗಾಮಿ ಗುಂಪುಗಳಿಗೆ ಕೇಂದ್ರವಾಗಿ ಉಳಿದಿದೆ. ಜೊತೆಗೆ, ಅಫ್ಘಾನಿಸ್ತಾನವು ಚೀನಾಕ್ಕೆ ಹತ್ತಿರವಾಗುತ್ತಿದೆ. ಚೀನಾ ಕಂಪನಿಗಳಿಗೆ ಗಣಿಗಾರಿಕೆ ಗುತ್ತಿಗೆಗಳನ್ನು ಪಾಕಿಸ್ತಾನ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಲಷ್ಕರ್-ಎ-ತೊಯ್ದಾ (ಎಲ್ ಇಟಿ) ಮತ್ತು ಜೈಶ್-ಎ-ಮೊಹಮ್ಮದ್ (ಜಿಇಎಂ) ನಂತಹ ಗುಂಪುಗಳು ಸೇರಿದಂತೆ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಗೆ ಅಫ್ಘಾನ್ ಪ್ರದೇಶವನ್ನು ಬಳಸದಂತೆ ತಡೆಯಲು ತಾಲಿಬಾನ್ ಬದ್ಧವಾಗಿದೆ ಎಂದು ಮೂಲಗಳು ತಿಳಿಸಿವೆ.

ಪಾಕಿಸ್ತಾನವು ತಮ್ಮ ದೇಶಗಳ ನಡುವೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸಲು ಬಿಡುವುದಿಲ್ಲ ಎಂದು ಇಬ್ಬರೂ ನಾಯಕರು ಪರಸ್ಪರ ಭರವಸೆ ನೀಡಿದರು. ತಾಲಿಬಾನ್ ಅಫ್ಘಾನಿಸ್ತಾನ ಸುರಕ್ಷಿತ ಮತ್ತು ಸುಭದ್ರವಾಗಿದೆ. ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಅಫ್ಘಾನ್ ರಕ್ಷಣಾ ಸಚಿವಾಲಯದ ವಕ್ತಾರರನ್ನು ಉಲ್ಲೇಖಿಸಿ ಖಾಮಾ ಪ್ರೆಸ್ ವರದಿ ಮಾಡಿದೆ.

ಪಹಲ್ಲಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳು. ಅಫ್ಘಾನಿಸ್ತಾನದ ಜನರೊಂದಿಗೆ ನಮ್ಮ ಸಾಂಪ್ರದಾಯಿಕ ಸ್ನೇಹ ಮತ್ತು ಅವರ ಅಭಿವೃದ್ಧಿ ಅಗತ್ಯಗಳಿಗೆ ನಿರಂತರ ಬೆಂಬಲದ ಕುರಿತು ಮಾತುಕತೆ ನಡೆಸಲಾಯಿತು. ಉಭಯ ದೇಶಗಳ ಸಹಕಾರವನ್ನು ಮುಂದಕ್ಕೆ ಕೊಂಡೊಯ್ಯುವ ಮಾರ್ಗಗಳು ಮತ್ತು ವಿಧಾನಗಳ ಕುರಿತು ಚರ್ಚಿಸಲಾಯಿತು ಎಂದು ಮುತ್ತಕಿ ಬರೆದುಕೊಂಡಿದ್ದಾರೆ.

RELATED ARTICLES

Latest News