Sunday, May 18, 2025
Homeರಾಷ್ಟ್ರೀಯ | National92ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭಾಶಯ ಕೋರಿದ ಪ್ರಧಾನಿ ಮೋದಿ

92ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭಾಶಯ ಕೋರಿದ ಪ್ರಧಾನಿ ಮೋದಿ

ಬೆಂಗಳೂರು, ಮೇ.18- ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರವರು 92 ನೇ ವರ್ಷಕ್ಕೆ ಕಾಲಿಟ್ಟಿದ್ದು, ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ನಾಯಕರು ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮೋದಿ, ನಮ್ಮ ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡ ಜಿ ಅವರಿಗೆ ಜನ್ಮದಿನದ ಶುಭಾಶಯಗಳು… ಅವರು ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಆಶೀರ್ವದಿಸಲಿ ಎಂದು ಬರೆದಿದ್ದಾರೆ.

ಗೌಡರು ತಮ್ಮ ರಾಜನೀತಿ ಮನೋಭಾವ ಮತ್ತು ಸಾರ್ವಜನಿಕ ಸೇವೆಯೆಡೆಗಿನ ಉತ್ಸಾಹಕ್ಕಾಗಿ ವ್ಯಾಪಕವಾಗಿ ಗೌರವಿಸುತ್ತಾರೆ. ಹಲವಾರು ವಿಷಯಗಳ ಬಗ್ಗೆ ಅವರ ಬುದ್ದಿವಂತಿಕೆ ಮತ್ತು ಒಳನೋಟಗಳು ದೊಡ್ಡ ಶಕ್ತಿಯ ಮೂಲವಾಗಿದೆ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂದೇಶದಲ್ಲಿ, ದೇಶದ ಹಿರಿಯ ರಾಜಕಾರಣಿ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ದಯ ಪಾಲಿಸಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಶುಭಕೋರಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಪುತ್ರ ಬಿಜೆಪಿ ಕರ್ನಾಟಕ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಕೂಡ ಗೌಡರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಪ್ರಧಾನಿಗಳಾದ ದೇವೇಗೌಡ ಜೀ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು ತಮ್ಮ ಸುಧೀರ್ಘ ರಾಜಕೀಯ ಅನುಭವ ಹಾಗೂ ಹೋರಾಟಗಳು ನಾಡಿನ ಹಾಗೂ ದೇಶದ ಇತಿಹಾಸದಲ್ಲಿ ಮಹತ್ವದ ಹೆಜ್ಜೆ ಗುರುತುಗಳು, ವಯಸ್ಸು ಲೆಕ್ಕಿಸದ ರಾಜಕೀಯ ಕ್ರಿಯಾಶೀಲತೆ ಭವಿಷ್ಯದ ರಾಜಕಾರಣಿಗಳಿಗೆ ಸ್ಫೂರ್ತಿಯ ಸೆಲೆಯಾಗಿದೆ.

ಗ್ರಾಮೀಣ ಜನರ ಬಗೆಗಿನ ನೈಜ ಕಾಳಜಿಯ ಕೊಡುಗೆಗಳು ಮಣ್ಣಿನ ಮಕ್ಕಳ ಪಾಲಿಗೆ ಚೈತನ್ಯ ತುಂಬಿದ ಸಮೃದ್ಧತೆಯ ಸಂಕೇತಗಳು. ಭಗವಂತನು ತಮಗೆ ಉತ್ತಮ ಆಯುರಾರೋಗ್ಯ ಕರುಣಿಸಿ, ನಾಡು ಹಾಗೂ ದೇಶದ ಬೆಳವಣಿಗೆಗೆ ಅತ್ಯಮೂಲ್ಯ ಮಾರ್ಗದರ್ಶನ ನೀಡುತ್ತಿರುವಂತಾಗಲಿ ಎಂದು ಪ್ರಾರ್ಥಿಸುವೆ ಎಂದು ಕೋರಿದ್ದಾರೆ.

ಹೆಚ್ ಡಿ ದೇವೇಗೌಡರು ಮೇ 18, 1933ರಲ್ಲಿ ಹಾಸನ ಜಿಲ್ಲೆಯ ಹರದನಹಳ್ಳಿಯಲ್ಲಿ ಹುಟ್ಟಿದ ಗೌಡರು ಡಿಸೆಂಬರ್ 11, 1994 ರಿಂದ ಮೇ 31, 1996 ರವರೆಗೆ ಜೆಡಿಎಸ್‌ ವರಿಷ್ಠರು ಕರ್ನಾಟಕದ ಮುಖ್ಯಮಂತ್ರಿಯೂ ಆಗಿದ್ದರು. ನಂತರ ಜೂನ್ 1, 1996 ರಿಂದ ಏಪ್ರಿಲ್ 21, 1997 ರವರೆಗೆ 10 ತಿಂಗಳ ಕಾಲ ಭಾರತದ 11 ನೇ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

RELATED ARTICLES

Latest News