ನಿತ್ಯ ನೀತಿ : ನೀನು ಎಷ್ಟೇ ಒಳ್ಳೆಯವನಾಗಿರು, ನಿನ್ನ ಬಗ್ಗೆ ಕೆಟ್ಟದಾಗಿ ಮಾತನಾಡುವ ವ್ಯಕ್ತಿಗಳು ಇದ್ದೇ ಇರುತ್ತಾರೆ.
ಪಂಚಾಂಗ : ಮಂಗಳವಾರ, 20-05-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ವೈಶಾಖ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಧನಿಷ್ಠಾ / ಯೋಗ: ಐಂದ್ರ / ಕರಣ: ಬಾಲವ
ಸೂರ್ಯೋದಯ – ಬೆ.05.53
ಸೂರ್ಯಾಸ್ತ – 06.39
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ಮಿತ್ರರಿಂದ ಮನಸ್ಸಿಗೆ ನೋವಾಗು ವಂತಹ ಮಾತುಗಳನ್ನು ಕೇಳಬೇಕಾಗಬಹುದು.
ವೃಷಭ: ದೂರದ ಬಂಧುಗಳ ಆಗಮನದಿಂದ ಮನೆಯಲ್ಲಿ ಸಂತೋಷದ ವಾತಾವರಣ.
ಮಿಥುನ: ಅನವಶ್ಯಕ ಚಿಂತನೆಯಿಂದ ಮಾನಸಿಕ ಯಾತನೆ ಅನುಭವಿಸಬೇಕಾಗಬಹುದು.
ಕಟಕ: ವಿವಾಹದ ಆಚೆಗಿನ ಸಂಬಂಧದ ಕಡೆಗೆ ಆಕರ್ಷಿತರಾಗಿ, ನೆಮ್ಮದಿ ಹಾಳಾಗುವ ಸಾಧ್ಯತೆ ಇದೆ.
ಸಿಂಹ: ಧಾರ್ಮಿಕ ಕಾರ್ಯ ಗಳಿಗೆ ಹೆಚ್ಚು ಒತ್ತು. ತಾಯಿ ಯಿಂದ ಸಹಾಯ ಸಿಗಲಿದೆ.
ಕನ್ಯಾ: ಹಳೆ ಮಿತ್ರರನ್ನು ಭೇಟಿ ಮಾಡುವಿರಿ. ಅತಿಯಾದ ಆತ್ಮವಿಶ್ವಾಸ ಬೇಡ.
ತುಲಾ: ನಿಮ್ಮ ನಡವಳಿಕೆ ಯಲ್ಲಿನ ಬದಲಾವಣೆ ಇತರರಿಗೆ ಚರ್ಚೆಯ ವಿಷಯವಾಗಲಿದೆ.
ವೃಶ್ಚಿಕ: ದುರಭ್ಯಾಸದಿಂದ ದೂರ ಉಳಿಯುವ ನಿಮ್ಮ ನಿರ್ಧಾರ ಪ್ರಯೋಜನಕಾರಿಯಾಗಲಿದೆ.
ಧನುಸ್ಸು: ಧಾರ್ಮಿಕ ಕಾರ್ಯಗಳಲ್ಲಿ ತೊಡಗಬೇಕೆಂಬ ಆಲೋಚನೆಗಳು ಬರಲಿವೆ.
ಮಕರ: ಅತಿಥಿಗಳ ಆಗಮನದಿಂದಾಗಿ ವೆಚ್ಚಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ. ಸ್ನೇಹಿತರ ಬೆಂಬಲ ಸಿಗಲಿದೆ.
ಕುಂಭ: ಅನವಶ್ಯಕ ವಿಷಯಗಳಿಗೆ ನಿಮ್ಮ ಹಣ, ಸಮಯ ವ್ಯರ್ಥ ಮಾಡಿಕೊಳ್ಳಬೇಕಾದೀತು.
ಮೀನ: ಹಿತಶತ್ರುಗಳ ಒಳಸಂಚು ನಿಮ್ಮ ಗಮನಕ್ಕೆ ಬರಲಿದ್ದು, ಧೈರ್ಯದಿಂದ ಎದುರಿಸಿ.