Tuesday, May 20, 2025
Homeಬೆಂಗಳೂರುಮಳೆ ಅನಾಹುತ ಪ್ರದೇಶಗಳಿಗೆ ಸಿಬ್ಬಂದಿ ದೌಡು

ಮಳೆ ಅನಾಹುತ ಪ್ರದೇಶಗಳಿಗೆ ಸಿಬ್ಬಂದಿ ದೌಡು

Govt Officials rush to rain-affected areas

ಬೆಂಗಳೂರು, ಮೇ 19– ಮಹದೇವಪುರ ವಲಯದಲ್ಲಿ ಸುಮಾರು 10 ಕಡೆ ಜಲಾವೃತವಾಗಿದ್ದು, ಪ್ರಮುಖವಾಗಿ ಸಾಯಿ ಲೇಔಟ್‌ ಪ್ರದೇಶವು ಸಂಪೂರ್ಣ ಜಲಾವೃತವಾಗಿದ್ದು ಅಲ್ಲಿಗೆ 6 ಟ್ರ್ಯಾಕ್ಟರ್‌, 2 ಜೆಸಿಬಿ, 35 ಸಿಬ್ಬಂದಿಗಳು, 3 ಅಗ್ನಿ ಶಾಮಕ ವಾಹನ, ಎಸ್‌‍.ಡಿ.ಆರ್‌.ಎಫ್‌ ತಂಡದಿದ 2 ಬೋಟ್‌ ವ್ಯವಸ್ಥೆ ಮಾಡಲಾಗಿದೆ.

ಮಾರತ್ತಹಳ್ಳಿಯ ದೀಪ ನರ್ಸಿಂಗ್‌ ಹೋಮ್‌‍, ಚಿನ್ನಪ್ಪನಹಳ್ಳಿ 5ನೇ ಕ್ರಾಸ್‌‍, ಪಣತ್ತೂರ್‌ ರೈಲ್ವೆ ಕೆಳಸೇತುವೆ, ಗ್ರೀನ್‌ ಹುಡ್‌‍, ಇಬ್ಬಲೂರು ಜಂಕ್ಷನ್‌‍, ಬಾಲಾಜಿ ಲೇವಟ್‌ – ಕೊತ್ತನೂರು, ಎ. ನಾರಾಯಣಪುರದ ಕೃಷ್ಣ ನಗರ, ಸುನೀಲ್‌ ಲೇಔಟ್‌‍, ಹರಳೂರು, ಬಿಎಸ್‌‍ಪಿ ಲೇಔಟ್‌ ನ ಕಸವನಹಳ್ಳಿ ಕಡೆಗಳಲ್ಲಿ ರಸ್ತೆಗಳ ಮಲೆ ನೀರು ಮತ್ತು ಮನೆಗಳಿಗೆ ನೀರು ನುಗ್ಗಿರುವ ವರದಿಯಾಗಿದ್ದು, ಪಾಲಿಕೆ ಸಿಬ್ಬಂದಿ ಈಗಾಗಲೇ ಕಾರ್ಯಾಚರಣೆ ನಡೆಸಿ ಬಹುತೇಕ ಕಡೆ ಸಮಸ್ಯೆ ಬಗೆಹರಿಸುವಲ್ಲಿ ಕಾರ್ಯನಿರತರಾಗಿದ್ದಾರೆ.

ಬೊಮ್ಮನಹಳ್ಳಿ ವಲಯ: ಸಿಲ್ಕ್ ಬೋರ್ಡ್‌ ಜಂಕ್ಷನ್‌ ನಲ್ಲಿ ರಾಜಕಾಲುವೆಯ ತುಂಬಿ ಹರಿಯುತ್ತಿರುವುದರಿಂದ ರಸ್ತೆ ಜಲಾವೃತವಾಗಿದ್ದು, ಜೆಸಿಬಿ ಮತ್ತು ನಿರ್ವಹಣಾ ತಂಡವನ್ನು ನಿಯೋಜಿಸಲಾಗಿದ್ದು, ಈಗಾಗಲೇ ಬಹುತೇಕ ಸಮಸ್ಯೆಯನ್ನು ನಿವಾರಿಸಿ ನೀರಿನ ಮಟ್ಟ ತಗ್ಗಿರುತ್ತದೆ. ಹೆಚ್‌‍.ಎಸ್‌‍.ಆರ್‌ ಲೇಔಟ್‌ 6 ಮತ್ತು 7ನೇ ಸೆಕ್ಟಾರ್‌ ಮ್ತತು ಬನ್ನೇರಘಟಟ್ಟ ಬಿಳೇಕಲ್ಲಹಳ್ಳಿ ಸಿಗ್ನಲ್‌ ನಲ್ಲಿ ರಸ್ತೆಯಲ್ಲಿ ನೀರು ನಿಂತುರುವುದು, ಯಲಚೇನಹಳ್ಳಿಯಲ್ಲಿ ಮನೆಗಳಿಗೆ ನೀರು ನುಗ್ಗಿರುವುದನ್ನು ನಿರ್ವಹಣಾ ತಂಡ ಹಾಗೂ ಪಂಪ್‌ಗಳ ವ್ಯವಸ್ಥೆ ಮಾಡಿ ಸಮಸ್ಯೆ ಬಗೆಹರಿಸಲಾಗಿದೆ.

ಪೂರ್ವ ವಲಯ:
ರಾಜಕಾಲುವೆಯಲ್ಲಿ ನೀರು ತುಂಬಿ ಹಿಮ್ಮುಖವಾಗಿ ಚಲಿಸಿರುವ ಪರಿಣಾಮ ಹೆಚ್‌‍.ಬಿ.ಆರ್‌ 5, 6, 7, 8ನೇ ಬ್ಲಾಕ್‌‍, ಬೈರಸಂದ್ರ ಲೇಔಟ್‌‍, ಕೆಂಪೇಗೌಡ ರಸ್ತೆ, ಕಾಮರಾಜ ನಗರ ಪ್ರದೇಶಗಳು ಜಲಾವೃತವಾಗಿರುತ್ತವೆ. ನೀರು ಹೊರ ಹಾಕಲು ನಿರ್ವಹಣಾ ತಂಡಗಳು, 6 ಶಿಲ್‌್ಟ ಟ್ರ್ಯಾಕ್ಟರ್‌ ಗಳ ತಂಡಗಳು, 2 ಜೆಸಿಬಿಗಳು ಹಾಗೂ 10 ಪಂಪ್‌ ಗಳ ವ್ಯವಸ್ಥೆ ಮಾಡಿ ನೀರನ್ನು ಹೊರಹಾಕುವ ಕೆಲಸ ಮಾಡಲಾಗುತ್ತಿದೆ.

ದಕ್ಷಿಣ ವಲಯ:
ಕೆ-100, ಕೆ.200 ಬೃಹತ್‌ ನೀರುಗಾಲುವೆಗಳು ಸಂಪರ್ಕ ಕಲ್ಪಿಸುವ ಸ್ಥಳದಲ್ಲಿ ಅಗಲೀಕರಣ ಕಡಿಮೆ ಇರುವ ಪರಿಣಾಮ ನಿರಿನ ಹರಿವಿನ ಮಟ್ಟ ಹೆಚ್ಚಾಗಿ ಮಡಿವಾಳ ಡಾಲರ್ಸ್‌ ಕಾಲೋನಿ, ಕೋರಮಂಗಲದ 6ನೇ ಬ್ಲಾಕ್‌‍, ಈಜೀಪುರ ಪ್ರದೇಶಗಳು ಜಲಾವೃತವಾಗಿರುತ್ತದೆ. ಈ ಸಂಬಧ ಬೆಳ್ಳಂದೂರು ಬಳಿ ಮಳೆ ನೀರಿನ ಹರಿವಿನ ಮಟ್ಟವನ್ನು ಕಡಿಮೆ ಮಾಡಲು ತಾತ್ಕಾಲಿಕವಾಗಿ ಜೆಸಿಬಿ ಮೂಲಕ ಬಂಡ್‌ ತೆರವುಗೊಳಿಸಿ ನೀರು ಸರಾಗವಾಗಿ ಹರಿದುಹೋಗಲು ಅನುವು ಮಾಡಲಾಗಿದ್ದು, ಮೇಲಿನ ಪ್ರದೇಶಗಳಲ್ಲಿ ಜಲಾವೃತ ಪ್ರಮಾಣ ಕ್ರಮೇಣ ಕಡಿಮೆಯಾಗುತ್ತಿದೆ. ವೃಷಭಾವತಿ ವ್ಯಾಲಿ ಗಾಳಿ ಆಂಜನೇಯ ದೇವಸ್ಥಾನದ ಬಳಿ ಜಲಾವೃತವಾಗಿ ಮನೆಗಳಿಗೆ ನೀರು ನಿಗಿದ್ದು, ಸಮಸ್ಯೆ ಬಗೆಹರಿಸಲಾಗಿದೆ.

ಯಲಹಂಕ ವಲಯ:
ಚೌಡೇಶ್ವರಿ ನಗರದ ಅಟ್ಟೂರು ವ್ಯಾಪ್ತಿಯಲ್ಲಿ ಸುಮಾರು 15 ಮನೆಗಳಿಗೆ, ಡಿಫೆನ್ಸ್ ಲೇಔಟ್‌ ಹಾಗೂ ದ್ವಾರಕಾ ನಗರದಲ್ಲಿ ಸುಮಾರು 5 ಮನೆಗಳಿಗೆ ನೀರು ನುಗ್ಗಿದ್ದು, ಸದರಿ ಸ್ಥಳಗಳಲ್ಲಿ ಪಂಪ್‌ ಗಳನ್ನು ಅಳವಡಿಸಿ ನೀರು ತೆರವು ಮಾಡಲಾಗಿದೆ. ಟಾಟಾ ನಗರ ಮುಖ್ಯರಸ್ತೆಯಲ್ಲಿ ನಿಂತಿದ ನೀರುನ್ನು ತೆರವುಗೊಳಿಸಲಾಗಿದೆ.

ರಾಜಾರಾಜೇಶ್ವರಿ ವಲಯ:
ಐಡಿಯಲ್ಸ್ ಹೋಮ್ಸೌ 1ನೇ ಎ ಕ್ರಾಸ್‌‍ ವೃಷಭಾವತಿ ವ್ಯಾಲಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ಹಿಮ್ಮುಖವಾಗಿ ಚಲಿಸಿದ ಪರಿಣಾಮ 3 ಹಸು, 1 ಕರು ಹಾಗೂ 1 ಎಮ್ಮೆ ಸೇರಿ 5 ಜಾನುವಾರಗಳು ಮೃತಪಟ್ಟಿರುತ್ತವೆ. ಅಲ್ಲದೆ ಸುಮಾರು 12 ಮನೆಗಳಿಗೆ ನೀರು ನುಗ್ಗಿದ್ದು, ಸೈಡ್‌ ಡೈನ್‌ ಗಳನ್ನು ಸ್ವಚ್ಚಗೊಳಿಸಿ ನೀರು ಹೋಗುವಂತೆ ವ್ಯವಸ್ಥೆ ಮಾಡಲಾಗಿದೆ. ವಿಜಯಶ್ರೀ ಬಡವಾಣೆ ಹೆಮ್ಮಿಗೆಪುರ ರಾಜಕಾಲುವೆಯಲ್ಲಿ ನೀರು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಜಲಾವೃತವಾಗಿದ್ದು, ಪಾಲಿಕೆಯ ತಂಡ ನಿಯೋಜನೆ ಮಾಡಿ ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಂಗೇರಿ ಬಳಿಯ ಕೊಟೆ ಲೇಔಟ್‌ ನಲ್ಲಿ ಸುಮಾರು 100 ಮನೆಗಳಿಗೆ ನಿರು ನುಗ್ಗಿದ್ದು, 4 ಪಂಪ್‌ಗಳನ್ನು ಅಳವಡಿಸಿ ನೀರು ತೆರವು ಕಾರ್ಯ ಮಾಡಲಾಗುತ್ತಿದೆ.

ಬೆಳಗ್ಗೆ 4 ಗಂಟೆ ಸುಮಾರಿ ಮೈಸೂರು ರಸ್ತೆಯಲ್ಲಿ ಜಲಾವೃತವಾಗಿದ್ದು, ಸಂಚಾರ ಬದಲಾವಣೆ ಮಾಡಿ ಸಮಸ್ಯೆ ಬಗೆಹರಿಸಲಾಗಿರುತ್ತದೆ. ಪಟ್ಟಣಗೆರೆ ಕ್ರಾಸ್‌‍ ಬಳಿ ರಾಜಕಾಲುವೆ ಮೇಲ್ಬಾಗದಲ್ಲಿ ಬ್ರಿಡ್ಜ್ 2 ಅಡಿ ನೀರು ಕಡಿಮೆ ಆಗಿದೆ ದುಬಾಸಿ ಪಾಳ್ಯ ಮೈಲಸಂದ್ರದ ಬಳಿ ರಸ್ತೆ ಮೇಲೆ ನೀರು ಕಡಿಮೆ ಆಗಿದೆದಾಸರಹಳ್ಳಿ ವಲಯ: ಕೆ.ಜಿ ಹಳ್ಳಿ, ಡಿಫೆನ್‌್ಸ ಕಾಲೋನಿ, ಮೇಡರಹಳ್ಳಿಯ ಶ್ರೀದೇವಿ ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ನೀರುನ್ನು ತರವುಗೊಳಿಸುವ ಕೆಲಸ ಮಾಡಲಾಗುತ್ತಿದೆ. ರುಕ್ಮಿಣಿ ನಗರ, ವಿದ್ಯಾನಗರ, ಬಿಟಿಎಸ್‌‍ ಲೇಔಟ್‌ ಗಳಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಪಂಪ್‌ಗಳನ್ನು ಅಳವಡಿಸಿ ನೀರು ತೆರವುಗೊಳಿಸಲಾಗಿದೆ.

ಪಶ್ಚಿಮ ವಲಯ:
ಕೆ.ಪಿ ಅಗ್ರಹಾರದಲ್ಲಿ ರಾಜಕಾಲುವೆಯಲ್ಲಿ ನೀರಿನ ಅರಿವಿನ ಮಟ್ಟ ಹೆಚ್ಚಾಗಿ 20 ಮನೆಗಳಿಗೆ ನೀರು ನುಗ್ಗಿದ್ದು, ಸದರಿ ಪ್ರದೇಶದಲ್ಲಿ 4 ಪಂಪ್‌ಗಳನ್ನು ಅಳವಡಿಸಿ ನೀರು ತರುವು ಕಾರ್ಯ ಮಾಡಲಾಗುತ್ತಿದೆ.ಧರೆಗುರುಳಿದ ಮರಗಳ ತೆರವು ಕಾರ್ಯಾಚರಣೆ: ನಗರದಲ್ಲಿ ಧರೆಗುರುಳಿದ ಮರಗಳು, ರೆಂಬೆ/ಕೊಬೆಗಳು ತೆರವುಗೊಳಿಸಲು 30 ತಂಡಗಳನ್ನು ನಿಯೋಜಿಸಲಾಗಿದ್ದು, ರಾತ್ರಿ ಸುರಿದ ಮಳೆಯಿಂದಾಗಿ 27 ಮರಗಳು, 43 ಮರದ ರೆಂಬೆ/ಕೊಬೆಗಳು ಧರೆಗುರುಳಿದ್ದು, ಈಗಾಗಲೇ ಬಹುತೇಕ ಮರ, ಮರದ ರೆಂಬೆ/ಕೊಬೆಗಳನ್ನು ತೆರವುಗೊಳಿಸಲಾಗಿದೆ.

RELATED ARTICLES

Latest News