ನಿತ್ಯ ನೀತಿ : ಪ್ರೀತಿ ಅಥವಾ ಊಟ ಯಾರಿಗಾದರೂ ಅವಶ್ಯಕತೆಗಿಂತ ಹೆಚ್ಚು ಕೊಟ್ಟರೆ ಅವರು ಅರ್ಧಕ್ಕೇ ಬಿಟ್ಟು ಹೋಗುತ್ತಾರೆ ಅಷ್ಟೇ.
ಪಂಚಾಂಗ : ಬುಧವಾರ, 21-05-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ವೈಶಾಖ ಮಾಸ / ಕೃಷ್ಣ ಪಕ್ಷ / ತಿಥಿ: ನವಮಿ / ನಕ್ಷತ್ರ: ಶತಭಿಷಾ / ಯೋಗ: ವೈಧೃತಿ / ಕರಣ: ತೈತಿಲ
ಸೂರ್ಯೋದಯ – ಬೆ.05.53
ಸೂರ್ಯಾಸ್ತ – 06.40
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ:ಹಿರಿಯ ನಾಗರಿಕರಿಗೆ ಸರ್ಕಾರಿ ನೆರವು. ಮಕ್ಕಳ ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
ವೃಷಭ: ಸ್ವಂತ ಉದ್ಯೋಗ ಮಾಡುವವರಿಗೆ ಲಾಭ ಹೆಚ್ಚುತ್ತದೆ. ಆತ್ಮಗೌರವಕ್ಕೆ ಹೆಚ್ಚು ಬೆಲೆ ಕೊಡುವಿರಿ.
ಮಿಥುನ: ಇನ್ನೊಬ್ಬರ ಮಾತುಗಳನ್ನು ಆಲಿಸಿ ತೀರ್ಮಾನಕ್ಕೆ ಬರುವುದು ಅನಿರ್ವಾಯವಾಗಲಿದೆ.
ಕಟಕ: ಹಿರಿಯ ವಿದ್ವಾಂಸರಿಗೆ ಗೌರವ ಸಿಗುತ್ತದೆ. ನಿರೀಕ್ಷಿತ ಮಟ್ಟಕ್ಕಿಂತ ಆದಾಯ ಹೆಚ್ಚಿರುತ್ತದೆ.
ಸಿಂಹ: ಮಕ್ಕಳಿಂದ ನೆಮ್ಮದಿ ಸಿಗಲಿದೆ. ವ್ಯಾಪಾರ- ವ್ಯವಹಾರದಲ್ಲಿ ಲಾಭ.
ಕನ್ಯಾ: ಸೋದರನ ಆಗಮನ ದಿಂದ ಮನೆಯಲ್ಲಿ ಹೆಚ್ಚಿನ ಸಂಭ್ರಮ ಮೂಡಲಿದೆ.
ತುಲಾ: ಸೌಜನ್ಯದಿಂದ ನಡೆದು ಕೊಳ್ಳುವುದರಿಂದ ನೆರೆಹೊರೆ ಯವರು ನಿಮ್ಮ ಕಷ್ಟಗಳಿಗೆ ಸ್ಪಂದಿಸುವರು. ಭಜನೆಯಿಂದ ನೆಮ್ಮದಿ ಸಿಗಲಿದೆ.
ವೃಶ್ಚಿಕ: ಮಕ್ಕಳಿಂದ ಶುಭವಾರ್ತೆ ಕೇಳುವಿರಿ. ಹೊಸ ಹೊಸ ಅವಕಾಶಗಳು ಒದಗಿ ಬರಲಿವೆ.
ಧನುಸ್ಸು: ಇತರರೊಂದಿಗೆ ಸೇರಿ ಮಾಡುವ ಕೆಲಸ- ಕಾರ್ಯಗಳಲ್ಲಿ ಉತ್ತಮ ಲಾಭ ದೊರೆಯಲಿದೆ.
ಮಕರ: ದೂರ ಪ್ರಯಾಣವನ್ನು ಸಾಧ್ಯವಾದಷ್ಟು ಮುಂದೂಡುವುದು ಉತ್ತಮ.
ಕುಂಭ: ನಿಮ್ಮ ಮೇಲಿದ್ದ ಆಪಾದನೆಗಳು ದೂರವಾಗಿ ಮೇಲ ಕಾರಿಗಳ ಪ್ರಶಂಸೆಗೆ ಪಾತ್ರರಾಗುವಿರಿ.
ಮೀನ: ಹಣಕಾಸಿನ ವ್ಯತ್ಯಾಸಗಳಾಗಿ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಲಿದೆ.