ಬೆಂಗಳೂರು, ಮೇ 23– ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ವಕ್ಕರಿಸುವ ಸಾಧ್ಯತೆಗಳು ನಿಚ್ಚಳವಾಗಿದೆ. ನಗರದ ವಾಣಿ ವಿಲಾಸ ಆಸ್ಪತ್ರೆಯಲ್ಲಿ 9 ತಿಂಗಳ ಮಗುವಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿರುವುದರಿಂದ ನಗರದಲ್ಲಿ ಆತಂಕ ಶುರುವಾಗಿದೆ.ಕೊರೊನಾ ಸೋಂಕು ತಗಲಿರುವ ಮಗು ಹೊಸಕೋಟೆ ಮೂಲದ ಪೋಷಕರಿಗೆ ಸೇರಿದ್ದು ಎಂದು ತಿಳಿದುಬಂದಿದೆ.
ಜ್ವರದಿಂದ ಬಳಲುತ್ತಿದ್ದ ಮಗುವನ್ನು ಪರೀಕ್ಷಿಸಿದಾಗ ಕೊರೊನಾ ಪಾಸಿಟಿವ್ ಇರೋದು ಪತ್ತೆಯಾಗಿದೆ ಎಂದು ಆಸ್ಪತ್ರೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.ಈವರೆಗೆ ರಾಜ್ಯದಲ್ಲಿ ಒಟ್ಟು 22 ಸಕ್ರಿಯ ಕೊರೋನಾ ಕೇಸ್ ಪತ್ತೆಯಾಗಿವೆ. ಕಳೆದ ವಾರದಲ್ಲಿ 165 ಮಂದಿಗೆ ಕೋರನಾ ಪರೀಕ್ಷೆ ನಡೆಸಲಾಗಿದ್ದು ಅವರಲ್ಲಿ 9 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಇಲ್ಲಿಯವರೆಗೆ 22 ಸಕ್ರಿಯೆ ಕೊರೋನಾ ಸೋಂಕು ಪ್ರಕರಣ ವರದಿಯಾರೂ ಆಸತ್ರೆಗೆ ದಾಖಲಾಗಿಲ್ಲ. ಜತೆಗೆ ತೀವ್ರ ಲಕ್ಷಣಗಳು ಪತ್ತೆಯಾಗಿಲ್ಲ. ಹೀಗಾಗಿ ರೂಪಾಂತರಿ ಆತಂಕ ಬೇಡ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ಡೆಂಘೀ ಉಲ್ಬಣ; ಕೊರೊನಾ ಸೋಂಕಿನ ಜತೆಗೆ ನಗರದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಂಡು ಬಂದಿದೆ.
ಪೂರ್ವ ಮುಂಗಾರು ಮಳೆಯ ಆರ್ಭಟದ ಬೆನ್ನಲ್ಲೇ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ. ಡೆಂಘೀ, ಮಲೇರಿಯಾ, ಚಿಕುನ್ ಗುನ್ಯಾ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗುತ್ತಿದೆ. ಜತೆಗೆ ಸಾಮಾನ್ಯ ಜ್ವರ, ವೈರಲ್ ಸೋಂಕು, ನೆಗಡಿ, ಸುಸ್ತು, ತಲೆನೋವು ಪ್ರಕರಣಗಳೂ ಹೆಚ್ಚಳವಾಗುತ್ತಿದೆ. ಕಲುಷಿತ ನೀರು ಸೇವನೆಯಿಂದ ಬರುವ ಗ್ಯಾಸ್ಟ್ರೋ ಎಂಟರೈಟಿಸ್ ಕೂಡ ಕೆಲವರಲ್ಲಿ ಕಾಣಿಸಿಕೊಂಡಿದೆ.
ಕೆ.ಸಿ.ಜನರಲ್, ವಿಕ್ಟೋರಿಯಾ ಸೇರಿ ಇತರೆ ಆಸ್ಪತ್ರೆಗಳಲ್ಲಿ ಹೊರರೋಗಿ ವಿಭಾಗದಲ್ಲಿ ರೋಗಿಗಳ ಹೆಚ್ಚಳವಾಗುತ್ತಿದ್ದು, ನಗರದಲ್ಲಿ ಸಕ್ರಿಯ ಡೆಂಘೀ ಪ್ರಕರಣಗಳ ಸಂಖ್ಯೆ 500ಕ್ಕೂ ಹೆಚ್ಚಿದೆ ಎಂದು ಅಂದಾಜಿಸಲಾಗಿದೆ.