Saturday, May 24, 2025
Homeಜಿಲ್ಲಾ ಸುದ್ದಿಗಳು | District Newsಉತ್ತರ ಕನ್ನಡ | Uttara Kannadaಭಾರಿ ಮಳೆಗೆ ಕೊಚ್ಚಿ ಹೋದ ಹೆದ್ದಾರಿ, ಕುಮಟಾ-ಶಿರಸಿ ಸಂಪರ್ಕ ಕಡಿತ

ಭಾರಿ ಮಳೆಗೆ ಕೊಚ್ಚಿ ಹೋದ ಹೆದ್ದಾರಿ, ಕುಮಟಾ-ಶಿರಸಿ ಸಂಪರ್ಕ ಕಡಿತ

Highway washed away due to heavy rain, Kumta-Sirsi connection cut off

ಕಾರವಾರ,ಮೇ.24-ಭಾರಿ ಮಳೆಗೆ ಇಲ್ಲಿನ ದೇವಿಮನೆ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿಯೇ ಕೊಚ್ಚಿ ಹೋಗಿದ್ದು ಕುಮಟಾ – ಶಿರಸಿ ಸಂಪರ್ಕ ಕಡಿತಗೊಂಡಿದೆ. ಮುಂಗಾರು ಆರಂಭಕ್ಕೆ ಮುನ್ನವೇ ರಣ ಮಳೆಗೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಕಳೆದ ಒಂದು ವರ್ಷದಿಂದ ಹೆದ್ದಾರಿ ಕಾಮಗಾರಿ ನಡೆಯುತಿತ್ತು .ನಿನ್ನೆ ಸುರಿದ ಭಾರೀ ಮಳೆಗೆ ರಸ್ತೆಯೇ ಕೊಚ್ಚಿಹೋಗಿದೆ. ಬೆಣ್ಣೆ ಹೊಳೆ ಹಳ್ಳದ ನೀರು ರಭಸವಾಗಿ ಹರಿದು ಹೆದ್ದಾರಿಯ ಬದಿಯಲ್ಲಿ ನಿರ್ಮಾಣ ಮಾಡಿದ್ದ ತಾತ್ಕಾಲಿಕ ರಸ್ತೆಯೂ ಸಂಪೂರ್ಣ ನಾಶವಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಅವರು ಕುಮಟಾ ಮೂಲಕ ದೇವಿಮನೆ ಘಟ್ಟ ಭಾಗದಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾಡಿ ಆದೇಶ ಹೊರಡಿಸಿದ್ದಾರೆ. ಸ್ಥಳೀಯರು ಕೂಡ ಎಚ್ಚರದಿಂದ ಇರುವಂತೆ ಮನವಿ ಮಾಡಿದ್ದಾರೆ.

RELATED ARTICLES

Latest News