ನವದೆಹಲಿ,ಮೇ 25– ರಾತ್ರಿಯಿಡೀ ಗುಡುಗು ಸಹಿತ ಸುರಿದ ಭಾರೀ ಮಳೆಯಿಂದಾಗಿ ರಾಷ್ಟ್ರ ರಾಜಧಾನಿ ನವದೆಹಲಿಯ ದೇಶದ ಅತಿದೊಡ್ಡ ಐಜಿಐ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ 17 ಅಂತರರಾಷ್ಟ್ರೀಯ ವಿಮಾನಗಳು ಸೇರಿದಂತೆ 49 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ.
ತಡ ರಾತ್ರಿ 11.30 ರಂದು ಬೆಳಿಗ್ಗೆ 5.30 ರವರೆಗೆ 81.2 ಮಿಮೀ ಮಳೆಯಾಗಿದೆ ಗಂಟೆಗೆ 82 ಕಿ.ಮೀ ವೇಗದಲ್ಲಿ ಗಾಳಿ ಬೀಸಿದೆ ಎಂದು ನಗರದ ಹವಾಮಾನ ಕೇಂದ್ರ ತಿಳಿಸಿದೆ.
ಕೆಟ್ಟ ಹವಾಮಾನದಿಂದಾಗಿ ದೇಶೀಯ ಹಾಗು ಅಂತರರಾಷ್ಟ್ರೀಯ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.
ಮುಂಜಾನೆ 3:59 ಕ್ಕೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಇಂಡಿಗೋ, ದೆಹಲಿಯಲ್ಲಿನ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ವಿಮಾನ ಕಾರ್ಯಾಚರಣೆಯಲ್ಲಿ ತಾತ್ಕಾಲಿಕ ಅಡಚಣೆಗಳಿಗೆ ಕಾರಣವಾಗಿವೆ ಎಂದು ಹೇಳಿದೆ. ಹವಾಮಾನ ಕ್ರಮೇಣ ಕಡಿಮೆಯಾಗುತ್ತಿದ್ದರೂ, ವಿಮಾನಗಳ ದಟ್ಟಣೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಪರಿಸ್ಥಿತಿಗಳು ಅನುಕೂಲಕರವಾಗುತ್ತಿದ್ದಂತೆ ವಿಮಾನಗಳ ಸಂಚಾರ ಸ್ಥಿರವಾಗಿ ಪುನರಾರಂಭಗೊಳ್ಳುತ್ತಿದೆ ಎಂದು ನಾವು ನಿಮಗೆ ಭರವಸೆ ನೀಡುತ್ತೇವೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಬೆಳಿಗ್ಗೆ 6ಗಂಟೆಗೆ ವಿಮಾನ ಕಾರ್ಯಾಚರಣೆಗಳು ಸಾಮಾನ್ಯ ಸ್ಥಿತಿಗೆ ಮರಳಿದ್ದು, ದೆಹಲಿಯ ಮೇಲೆ ಸ್ಪಷ್ಟ ಆಕಾಶವಿದೆ. ಫೈಟ್ ಟ್ರ್ಯಾಕಿಂಗ್ ವೆಬ್‌ಸೈಟ್‌ನಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ ಸುಮಾರು 180 ವಿಮಾನಗಳು ವಿಳಂಬವಾಗಿವೆ ಮತ್ತು ಕೆಲವು ರದ್ದಾಗಿವೆ ಎಂದು ತೋರಿಸಿದೆ.