ಮಂಡ್ಯ, ಮೇ 26-ಸಂಚಾರಿ ಪೊಲೀಸರ ಎಡವಟ್ಟಿನಿಂದಾಗಿ ಬೈಕ್‌ನಲ್ಲಿ ಪೋಷಕರೊಂದಿಗೆ ಹೋಗುತ್ತಿದ್ದ ಮೂರು ವರ್ಷದ ಮಗು ಉರುಳಿ ಬಿದ್ದು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ನಿವಾಸಿಗಳಾದ ಅಶೋಕ್-ವಾಣಿ ದಂಪತಿಯ ಮಗಳು ಹೃತೀಕ್ಷಾಳಿಗೆ ನಾಯಿ ಕಚ್ಚಿದ್ದರಿಂದ ಇಂದು ಬೆಳಗ್ಗೆ ಚಿಕಿತ್ಸೆಗಾಗಿ ಬೈಕ್‌ನಲ್ಲಿ ಕರೆದುಕೊಂಡು ಮಂಡ್ಯ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಹೋಗುತ್ತಿದ್ದರು.
ಬೆಂಗಳೂರು-ಮೈಸೂರು ಹೆದ್ದಾರಿಯ ಸ್ವರ್ಣಸಂದ್ರ ಬಳಿ ಸಂಚಾರಿ ಪೊಲೀಸರು ಇವರ ಬೈಕ್‌ನ್ನು ಏಕಾಏಕಿ ಅಡ್ಡಗಟ್ಟಿದಾಗ ನಿಯಂತ್ರಣ ತಪ್ಪಿ ಮೂವರು ಬೈಕ್‌ನಿಂದ ಬಿದ್ದಿದ್ದಾರೆ. ಆ ವೇಳೆ ಮಗುವಿನ ತಲೆಗೆ ಗಂಭೀರ ಪೆಟ್ಟಾಗಿ ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದೆ. ಕಣ್ಣ ಮುಂದೆಯೇ ಮಗಳು ಸಾವನ್ನಪ್ಪಿರುವುದನ್ನು ಕಂಡು ಪೋಷಕರು ಗೋಳಾಡಿದ್ದಾರೆ.
ಸಾರ್ವಜನಿಕರ ಆಕ್ರೋಶ: ಘಟನೆಯಿಂದ ಆಕ್ರೋಶಗೊಂಡ ಸಾರ್ವಜನಿಕರು ಸಂಚಾರಿ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ. ಘಟನೆಗೆ ಕಾರಣರಾದ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕೆಲಕಾಲ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ಅಭೂತಪೂರ್ವ ಪ್ರಗತಿ: ಸಚಿವ ಚಲುವರಾಯಸ್ವಾಮಿ
- ಸಮೀರ್ ನಿವಾಸದ ಮೇಲೆ ಬೆಳ್ತಂಗಡಿ ಪೊಲೀಸರ ದಾಳಿ
- ವಿದೇಶಿ ಪ್ರಜೆಗಳ ಮನೆಗಳ ಮೇಲೆ ದಾಳಿ: 600 ಗ್ರಾಂ ಕೊಕೈನ್ ವಶ
- ಕಾಂಗ್ರೆಸ್ ಪಕ್ಷದ ಕಚೇರಿಗಳಿಗೆ ಸರ್ಕಾರಿ ನಿವೇಶನ: ಸಂಪುಟದಲ್ಲಿ ಚರ್ಚೆ
- ಸರ್ಕಾರದಿಂದ ಪರಿಶಿಷ್ಟರ ಹಣ ದುರ್ಬಳಕೆ : ಅಶೋಕ್ ವಾಗ್ದಾಳಿ