Tuesday, June 17, 2025
Homeರಾಜ್ಯಅರಣ್ಯ ಇಲಾಖೆ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ

ಅರಣ್ಯ ಇಲಾಖೆ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ

ormer cricketer Anil Kumble appointed as Forest Department ambassador

ಬೆಂಗಳೂರು, ಮೇ 27- ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.

ಸಚಿವರಾಗಿ ತುಂಬಿದ ಸಂದರ್ಭದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವವಿರುವ ಅನಿಲ್ ಕುಂಬ್ಳೆ ವಿಶ್ವದಾದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು.

ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇದೆ. ಅರಣ್ಯದ ಬಗ್ಗೆ ಪ್ರೀತಿ ಇದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮತಿಸಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.

8,848 ವನಮಹೋತ್ಸವ:
ಈಶ್ವರ ಖಂಡ್ರೆ :ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮವನ್ನು ಜಗತ್ತೇ ಎದುರಿಸುತ್ತಿದ್ದು, ಈ ಕಾಲಘಟ್ಟದಲ್ಲಿ ಹಸಿರು ಹೊದಿಕೆಯ ಹೆಚ್ಚಳ, ಅರಣ್ಯ ಸಂರಕ್ಷಣೆ ಮತ್ತು ನಿರ್ವಹಣೆ ಇಲಾಖೆಯ ಜವಾಬ್ದಾರಿಯಾಗಿದ್ದು, ಕಳೆದ 2 ವರ್ಷಗಳಲ್ಲಿ ಸುಮಾರು 8848 ವನಮಹೋತ್ಸವ ನಡೆಸಲಾಗಿದೆ.

ಅರಣ್ಯ ಪ್ರದೇಶ, ರಸ್ತೆ ಬದಿ ಮತ್ತು ಸರ್ಕಾರಿ ಜಾಗದಲ್ಲಿ ಸುಮಾರು 8.5 ಕೋಟಿ ಸಸಿಗಳನ್ನು ನೆಟ್ಟು ಪೋಷಿಸಲಾಗಿದೆ, 2023-24 ಮತ್ತು 2024-25ರ ಸಾಲಿನಲ್ಲಿ ಒಟ್ಟು 120975 ಹೆಕ್ಟೇರ್ ಪ್ರದೇಶದಲ್ಲಿ ನೆಡುತೋಪು, 25 ಹೊಸ ವೃಕೋದ್ಯಾನ ಮತ್ತು 35 ದೇವರ ಕಾಡು ನಿರ್ಮಾಣ ಮಾಡಲಾಗಿದೆ ಎಂದು ಸಚಿವರು ವಿವರ ನೀಡಿದರು.

ಕಳೆದ 2 ವರ್ಷದಲ್ಲಿ ಕೃಷಿಕರಿಗೆ ತಮ್ಮ ಜಮೀನಿನಲ್ಲಿ ನಾಟಿ ಮಾಡಲು ಮತ್ತು ಇತರ ಜಮೀನಿನಲ್ಲಿ ನೆಡಲು ಒಟ್ಟಾರೆ 3.70 ಕೋಟಿ ಸಸಿಗಳನ್ನು ವಿತರಣೆ ಮಾಡಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಜುಂ ಪರ್ವೇಜ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

Latest News