Saturday, June 7, 2025
Homeರಾಜ್ಯವಿಜಯೋತ್ಸವ ದುರಂತ : ಸಿಎಂ ತುರ್ತು ಸುದ್ದಿಗೋಷ್ಠಿ , ಮಹತ್ವದ ನಿರ್ಣಯ ಪ್ರಕಟ

ವಿಜಯೋತ್ಸವ ದುರಂತ : ಸಿಎಂ ತುರ್ತು ಸುದ್ದಿಗೋಷ್ಠಿ , ಮಹತ್ವದ ನಿರ್ಣಯ ಪ್ರಕಟ

RCB Victory Day Tragedy: Police Officers Suspended

ಬೆಂಗಳೂರು, ಜೂ.5- ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಕಾನ್ಸ್ಟೇಬಲ್ ನಿಂದ ಕಮಿಷನರ್ ವರೆಗೂ ಹಲವು ಹಂತಗಳ ಎಲ್ಲಾ ಪೊಲೀಸ್ಅ ಧಿಕಾರಿಗಳನ್ನು ಅಮಾನತುಗೊಳಿಸುವ ಮಹತ್ವದ ನಿರ್ಣಯ ಕೈಗೊಂಡಿದೆ.

ಜೊತೆಗೆ ವಿರೋಧ ಪಕ್ಷಗಳ ಬೇಡಿಕೆಯಂತೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲಾಗಿದೆ, ಭದ್ರತಾ ಅಧಿಕಾರಿಗಳ ಸೂಚನೆ ಧಕ್ಕರಿಸಿ ಕಾರ್ಯಕ್ರಮ ಆಯೋಜನೆ ಮಾಡಿದ ಕರ್ನಾಟಕ ಕ್ರಿಕೆಟ್ ಸಂಸ್ಥೆ ಆರ್ಸಿಬಿ ಮತ್ತು ಇವೆಂಟ್ ಮ್ಯಾಗ್ನೆಟ್ ಮುಖ್ಯಸ್ಥರುಗಳನ್ನು ಬಂಧಿಸಲು ಆದೇಶಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು, ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನಿನ್ನೆ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದರು.

ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶ ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ. ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದರು.

ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ ಎಂದರು.

ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ ಎಂದರು. ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದರು.

ನಾನು ಶಾಸಕ, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ ಎಂದು ವಿಷಾದಿಸಿದರು. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ ಎಂದು ಹೇಳಿದರು. ಉಪಮುಖ್ಯಮಂತ್ರಿಗಳು, ಗೃಹಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್ , ಮಹಾದೇವಪ್ಪ ಸೇರಿದಂತೆ ಹಿರಿಯ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು.

RELATED ARTICLES

Latest News