Monday, June 9, 2025
Homeಮನರಂಜನೆಹೈಕೋರ್ಟ್‌ನಲ್ಲೇ ಸಮಸ್ಯೆ ಪರಿಹರಿಸಿಕೊಳ್ಳುವಂತೆ ಕಮಲ್ ಹಾಸನ್‌ಗೆ ಸುಪ್ರೀಂ ಸೂಚನೆ

ಹೈಕೋರ್ಟ್‌ನಲ್ಲೇ ಸಮಸ್ಯೆ ಪರಿಹರಿಸಿಕೊಳ್ಳುವಂತೆ ಕಮಲ್ ಹಾಸನ್‌ಗೆ ಸುಪ್ರೀಂ ಸೂಚನೆ

Supreme Court instructs Kamal Haasan to resolve the issue in the High Court itself

ಬೆಂಗಳೂರು, ಜೂ.9 – ತೀವ್ರ ವಿವಾದ ಸೃಷ್ಟಿಸಿರುವ ದಕ್ಷಿಣ ಭಾರತದ ಖ್ಯಾತ ಚಲನಚಿತ್ರ ನಟ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಚಿತ್ರ ಬಿಡುಗಡೆ ಕುರಿತು ಹೈಕೋರ್ಟ್‌ನಲ್ಲೇ ಸಮಸ್ಯೆ ಪರಿಹರಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಇದರಿಂದ ಕರ್ನಾಟಕದಲ್ಲಿ ಚಿತ್ರ ಬಿಡುಗಡೆ ಮಾಡಬೇಕೆಂದು ತುದಿಗಾಲಲ್ಲಿ ನಿಂತಿದ್ದ ಕಮಲ್‌ ಹಾಸನ್‌ಗೆ ಮತ್ತೆ ಕಾನೂನು ಹೋರಾಟದಲ್ಲಿ ಹಿನ್ನಡೆಯಾಗಿದೆ.

ಕರ್ನಾಟಕ ಹೈಕೋರ್ಟ್ ಮುಂದಿನ ಅರ್ಜಿ ವಿಚಾರಣೆವರೆಗೂ ಚಿತ್ರ ಬಿಡುಗಡೆ ಬೇಡ ಎಂದು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕಮಲ್‌ ಹಾಸನ್ ಪರ ವಕೀಲರು ಸುಪ್ರೀಂಕೋರ್ಟ್ನಲ್ಲಿ ತುರ್ತು ಅರ್ಜಿ ವಿಚಾರಣೆ ನಡೆಸಬೇಕೆಂದು ಮನವಿ ಮಾಡಿದ್ದರು.

ಆದರೆ ಸುಪ್ರೀಂಕೋರ್ಟ್ ತುರ್ತು ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿ ನೀವು ಕರ್ನಾಟಕ ಹೈಕೋರ್ಟ್‌ನಲ್ಲೇ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಳ್ಳಬ ಬೇಕೆಂದು ಕಮಲ್ ಹಾಸನ್ ಪರ ವಕೀಲರಿಗೆ ಸೂಚನೆ ನೀಡಿದರು.

ಕನ್ನಡ ಭಾಷೆ ಹುಟ್ಟಿದ್ದೇ ತಮಿಳು ಭಾಷೆಯಿಂದ ಎಂಬ ಕಮಲ್ ಹಾಸನ್ ನೀಡಿದ ಹೇಳಿಕೆ ರಾಜ್ಯಾದ್ಯಂತ ಭಾರೀ ವಿವಾದವನ್ನು ಸೃಷ್ಟಿಸಿದೆ. ಕನ್ನಡಿಗರು ಮತ್ತು ಕರ್ನಾಟಕದ ಭಾವನೆಗಳಿಗೆ ಧಕ್ಕೆ ತಂದಿರುವ ಅವರು ಜನತೆಯ ಕ್ಷಮೆ ಕೇಳುವವರೆಗೂ ಥಗ್ ಲೈಫ್ ಚಿತ್ರ ಬಿಡುಗಡೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.

ಕನ್ನಡ ಸಂಘಟನೆಗಳು ಹಾಗೂ ಕನ್ನಡಿಗರ ಒತ್ತಡಕ್ಕೆ ಮಣಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಥಗ್ ಲೈಫ್ ಚಿತ್ರ ಬಿಡುಗಡೆಗೆ ನಿಷೇಧ ಹೇರಿತ್ತು. ಈ ವೇಳೆ ಕಮಲ್ ಹಾಸನ್ ಪರ ವಕೀಲರು ಚಿತ್ರ ಬಿಡುಗಡೆಗೆ ತಡೆ ನೀಡಬಾರದು ಎಂದು ಕೋರಿ ಹೈಕೋರ್ಟ್‌ಗೆ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಕಮಲ್ ಹಾಸನ್ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತ್ತು. ಕನ್ನಡ ಭಾಷೆ ಕುರಿತು ಮಾತನಾಡಲು ನೀವು ಭಾಷಾ ತಜ್ಞರೆ? ಇಲ್ಲವೇ ಇತಿಹಾಸಕಾರರೇ? ಜನರ ಭಾವನೆಗಳಿಗೆ ಧಕ್ಕೆ ತಂದಿರುವ ನೀವು ಕ್ಷಮೆ ಕೇಳಬೇಕಲ್ಲವೇ? ವಿವಾದ ಸೃಷ್ಟಿಯಾಗಿರುವುದು ನಿಮ್ಮಿಂದಲೇ ಚಿತ್ರ ಬಿಡುಗಡೆಗೆ ರಕ್ಷಣೆ ಕೋರಿ ಈಗ ನ್ಯಾಯಾಲಯಕ್ಕೆ ಬಂದಿದ್ದೀರಿ ನಿಮಗೆ ಆತ್ಮಸಾಕ್ಷಿ ಇಲ್ಲವೇ ಎಂದು ತರಾಟೆಗೆ ತೆಗೆದುಕೊಂಡಿದ್ದರು.

RELATED ARTICLES

Latest News