Monday, June 9, 2025
Homeಬೆಂಗಳೂರುಬೆಂಗಳೂರು : ಜಕ್ಕೂರು ಫೈ ಓವರ್‌ನಿಂದ ಜಿಗಿದು ಉದ್ಯೋಗಿ ಆತ್ಮಹತ್ಯೆ

ಬೆಂಗಳೂರು : ಜಕ್ಕೂರು ಫೈ ಓವರ್‌ನಿಂದ ಜಿಗಿದು ಉದ್ಯೋಗಿ ಆತ್ಮಹತ್ಯೆ

Bengaluru: Employee commits suicide by jumping from Jakkur flyover

ಬೆಂಗಳೂರು, ಜೂ.9-ಫೈಓವರ್ ಮೇಲಿಂದ ಯುವಕನೊಬ್ಬ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ನಡೆದಿದೆ.
ಹೆಬ್ಬಾಳದ ನಿವಾಸಿ ಮುನಿರಾಜ (22) ಆತ್ಮಹತ್ಯೆಗೆ ಶರಣಾದವರು.

ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದ ಮುನಿರಾಜ ಅವರು ಮಧ್ಯರಾತ್ರಿ 12 ಗಂಟೆ ಸುಮಾರಿನಲ್ಲಿ ಜಕ್ಕೂರು ಫೈಓವರ್ ಬಳಿ ಬಂದು ಕೆಳಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರೇಮವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಖೆ ವ್ಯಕ್ತವಾಗಿದೆ.

ಸುದ್ದಿ ತಿಳಿದು ಕೊಡಿಗೆಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ಹಂಸ್ತಾತರಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES

Latest News