Monday, June 23, 2025
Homeರಾಷ್ಟ್ರೀಯ | National14 ವರ್ಷದ ಬಾಲಕನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ

14 ವರ್ಷದ ಬಾಲಕನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ

14-year-old boy rapes minor

ಹತ್ರಾಸ್‌‍ (ಉತ್ತರ ಪ್ರದೇಶ), ಜೂ. 14 (ಪಿಟಿಐ)– ಹತ್ರಾಸ್‌‍ ಜಿಲ್ಲೆಯ ಮುರ್ಸನ್‌ ಪೊಲೀಸ್‌‍ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 14 ವರ್ಷದ ಬಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸದಾಬಾದ್‌ ವೃತ್ತ ಅಧಿಕಾರಿ ಹಿಮಾಂಶು ಮಾಥುರ್‌ ಮಾತನಾಡಿ,ಬಾಲಕಿ ತನ್ನ ಕುಟುಂಬದ ಜಮೀನಿನ ಬಳಿಯ ಕೊಳವೆ ಬಾವಿಯ ಪಕ್ಕದಲ್ಲಿ ಕುಳಿತಿದ್ದಾಗ ಈ ಘಟನೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

ಪಕ್ಕದ ಹಳ್ಳಿಯ ಆರೋಪಿಯು ಆಕೆಯನ್ನು ಹತ್ತಿರದ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.ಆಕೆ ಹೊಲದಲ್ಲಿ ಪತ್ತೆಯಾಗಿದ್ದು, ಕುಟುಂಬ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದಾರೆ. ಪರಾರಿಯಾಗಿರುವ ಆರೋಪಿಯನ್ನು ಬಂಧಿಸಲು ಶೋಧ ನಡೆಯುತ್ತಿದೆ ಎಂದು ಮಾಥುರ್‌ ತಿಳಿಸಿದ್ದಾರೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ ನಂತರ ಬಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಹೇಳಿದರು.

RELATED ARTICLES

Latest News