Homeರಾಷ್ಟ್ರೀಯ7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಶಾಲಾ ಮುಖ್ಯೋಪಾಧ್ಯಾಯನಿಂದ ಲೈಂಗಿಕ ದೌರ್ಜನ್ಯ

7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಶಾಲಾ ಮುಖ್ಯೋಪಾಧ್ಯಾಯನಿಂದ ಲೈಂಗಿಕ ದೌರ್ಜನ್ಯ

School principal sexually assaults 7th grade student

ಯಾವತಾಲ್‌, ಫೆ.9-ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಹಾರಾಷ್ಟ್ರದ ಯಾವತಾಲ್‌ ಜಿಲ್ಲೆಯ ಶಾಲೆಯ ಮುಖ್ಯೋಪಾಧ್ಯಾಯನನ್ನು ಪೊಲೀಸರು ಬಂಧಿಸಿದ್ದಾರೆ.

ಘಟಂಜಿ ತಾಲೂಕಿನ ಜಿಲ್ಲಾ ಪರಿಷತ್‌ ಶಾಲೆಯ ಮುಖ್ಯೋಪಾಧ್ಯಾಯರಾದ ಆರೋಪಿ, 13 ವರ್ಷದ 7 ನೇ ತರಗತಿ ವಿದ್ಯಾರ್ಥಿನಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಬಾಲಕಿಗೆ ಹಣ್ಣುಗಳು ಮತ್ತು ಮೇಕಪ್‌ ವಸ್ತುಗಳಿಂದ ಆಮಿಷವೊಡ್ಡಿದನು ಮತ್ತು ಎರಡು ಬಾರಿ ಲೈಂಗಿಕ ದೌರ್ಜನ್ಯ ಎಸಗಿದನು ಎಂದು ಅಧಿಕಾರಿ ಹೇಳಿದರು.

ಅಪರಾಧದ ಬಗ್ಗೆ ಯಾರಿಗಾದರೂ ತಿಳಿಸಿದರೆ ಬಾಲಕಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದನು.ದೂರು ನೀಡಿದ ತಕ್ಷಣ ಆರೋಪಿಯನ್ನು ಬಂಧಿಸಲಾಗಿದೆ.ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು ,ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES
spot_img

Latest News