Thursday, June 19, 2025
Homeಜಿಲ್ಲಾ ಸುದ್ದಿಗಳು | District Newsಚಿಕ್ಕಬಳ್ಳಾಪುರ | Chikkaballapurಚಿಕ್ಕಬಳ್ಳಾಪುರ : ಬೈಕ್‌ಗೆ ಕ್ಯಾಂಟರ್‌ ಡಿಕ್ಕಿಯಾಗಿ ಯುವಕರಿಬ್ಬರ ಸಾವು

ಚಿಕ್ಕಬಳ್ಳಾಪುರ : ಬೈಕ್‌ಗೆ ಕ್ಯಾಂಟರ್‌ ಡಿಕ್ಕಿಯಾಗಿ ಯುವಕರಿಬ್ಬರ ಸಾವು

Two youths die after canter collides with bike

ಚಿಕ್ಕಬಳ್ಳಾಪುರ, ಜೂ.18- ದ್ವಿಚಕ್ರ ವಾಹನಕ್ಕೆ ಕ್ಯಾಂಟರ್‌ ಡಿಕ್ಕಿ ಹೊಡೆದ ಪರಿಣಾಮ ಯುವಕರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಚೇನಹಳ್ಳಿ ತಾಲ್ಲೂಕಿನ ಪೊಶೆಟ್ಟಿಹಳ್ಳಿ ಯಲ್ಲಿ ನಡೆದಿದೆ.

ಎಂ.ಗುಡ್ಲಹಳ್ಳಿಯ ನಿವಾಸಿ ಕೃಷ್ಣಪ್ಪ(30), ಹಳೆಬುದ್ದಿಮಂತನ ಹಳ್ಳಿಯ ಪ್ರಕಾಶ್‌(24) ಮೃತಪಟ್ಟ ದುರ್ದೈವಿಗಳು. ಇಬ್ಬರು ಚಿಕ್ಕಬಳ್ಳಾಪುರದ ಟೈಟಾನಿಕ್‌ ಕಂಪನಿಯಲ್ಲಿ ಕಾರ್ಮಿಕರಾಗಿದ್ದು, ಇಂದು ಮುಂಜಾನೆ 6 ಗಂಟೆ ಸುಮಾರಿನಲ್ಲಿ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ತೆರಳುತ್ತಿದ್ದಾಗ ಚಿಕ್ಕಬಳ್ಳಾಪುರ ಕಡೆಯಿಂದ ಬರುತ್ತಿದ್ದ ಕ್ಯಾಂಟರ್‌ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕ್ಯಾಂಟರ್‌ ಚಾಲಕನ ಅಜಾಗರೂಕತೆ, ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಶಿವಕುಮಾರ್‌ ಹಾಗೂ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News