ಬೆಂಗಳೂರು, ಜೂ.19-ಪಾಕಿಸ್ತಾನದ ವಿರುದ್ಧ ಕದನ ವಿರಾಮ ಘೋಷಿಸಿದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಿಲುವಿನ ಬಗ್ಗೆ ಅನೇಕ ಸಂಶಯಗಳಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಸಂಸತ್ತಿನ ವಿಶೇಷ ಅಧಿವೇಶನ ಕರೆದು ಪ್ರಧಾನಿಯವರು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು. ಜೊತೆಗೆ ಕದನ ವಿರಾಮ ವಿಚಾರದಲ್ಲಿ ಅಮೆರಿಕ ಪಾತ್ರವೇನಿತ್ತು? ಎಂದು ದೇಶದ ಜನರಿಗೆ ತಿಳಿಸಬೇಕು. ಈ ಧೈರ್ಯ ಮೋದಿಯವರಿಗೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.
ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರ ಜೊತೆಗೆ ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ ನಡೆಸಿದ್ದಾರಂತೆ. ಈ ವೇಳೆ ಭಾರತ ಯಾರ ಮಧ್ಯಸ್ಥಿಕೆಯನ್ನು ಒಪ್ಪಲ್ಲ ಎಂದು ಮೋದಿ ಅವರು ಟ್ರಂಪ್ ಅವರಿಗೆ ಕಡ್ಡಿ ಮುರಿದಂತೆ ಹೇಳಿದ್ದಾರಂತೆ.
ಹೀಗಂತ ಹೇಳಿರುವುದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ತ್ರಿ. ಆದರೆ ವಿಕ್ರಮ್ ಮಿಸ್ತ್ರಿ ಹೇಳಿಕೆಯನ್ನು ಯಾವ ಆಧಾರದಲ್ಲಿ ನಂಬುವುದು? ಯಾಕೆಂದರೆ ಮಿಸ್ತ್ರಿ ಈ ಹೇಳಿಕೆ ಕೊಟ್ಟ ಬೆನ್ನಲ್ಲೇ ಟ್ರಂಪ್ ನನ್ನ ಮಧ್ಯಸ್ಥಿಕೆಯಲ್ಲೇ ಕದನ ವಿರಾಮ ಏರ್ಪಟಿತ್ತು ಎಂದು ಪುನರುಚ್ಚರಿಸಿದ್ದಾರೆ. ಜೊತೆಗೆ ಪೆಹಲ್ಲಾಮ್ ಉಗ್ರ ಕೃತ್ಯದ ರೂವಾರಿ ಹಾಗೂ ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸೀಂ ಮುನೀರ್ಗೆಗೆ ಔತಣಕೂಟ ಏರ್ಪಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
- ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಬಿಜೆಪಿ ತಯಾರಿ
- ಬೆಂಗಳೂರಿಗರೇ ಗಮನಿಸಿ, ನಾಳೆ ಪ್ರಾಧಾನಿ ಆಗಮನದ ಹಿನ್ನೆಲೆಯಲ್ಲಿ ಹಲವೆಡೆ ಸಂಚಾರ ಮಾರ್ಗ ಬದಲಾವಣೆ
- “ಸುಳ್ಳುಬುರುಕ, ರಣಹೇಡಿ ರಾಹುಲ್ ಗಾಂಧಿ ನನ್ನ 5 ಪ್ರಶ್ನೆ” : ಆರ್.ಅಶೋಕ್ ವಾಗ್ದಾಳಿ
- ನಾಳೆ ರಾಜ್ಯಕ್ಕಾಗಮಿಸುತ್ತಿದ್ದಾರೆ ಪ್ರಧಾನಿ ಮೋದಿ, ಹಳದಿ ಮೆಟ್ರೋ ಹಾಗೂ ವಂದೇ ಭಾರತ್ ರೈಲುಗಳಿಗೆ ಚಾಲನೆ
- ಭಾರತಕ್ಕೆ ಬೇಕಾಗಿದ್ದ ಕುಖ್ಯಾತ ಅಕ್ರಮ ಶಸ್ತ್ರಾಸ್ತ್ರ ಪೂರೈಕೆದಾರ ನೇಪಾಳದಲ್ಲಿ ಬಂಧನ