ಬೆಂಗಳೂರು,ಜೂ.19- ಮರದ ಕೊಂಬೆ ತಲೆ ಮೇಲೆ ಬಿದ್ದು ಸಾವು ಬದುಕಿನ ನಡುವೆ ಹೋರಾಡಿ ಕೋಮಾ ಸ್ಥಿತಿಗೆ ತಲುಪಿದ್ದ ಖಾಸಗಿ ಕಂಪನಿ ಉದ್ಯೋಗಿ ಅಕ್ಷಯ್
ಅವರು ಇಂದು ಕೊನೆಯುಸಿರೆಳೆದಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ನಗರದ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಅಕ್ಷಯ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಬಿಬಿಎಂಪಿ ವತಿಯಿಂದ ಅಕ್ಷಯ್ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.
ಶ್ರೀನಿವಾಸ ನಗರದ ನಿವಾಸಿ ಅಕ್ಷಯ್ ಅವರು ಕಳೆದ ಭಾನುವಾರ ಮಧ್ಯಾಹ್ನ ಬನಶಂಕರಿಯ ಬ್ರಹಚೈತನ್ಯ ಮಂದಿರದ ಬಳಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಇವರ ತಲೆ ಮೇಲೆ ಮರದ ಕೊಂಬೆ ಬಿದ್ದಾಗ ನಿಯಂತ್ರಣ ತಪ್ಪಿ ನೆಲಕ್ಕುರುಳಿದ್ದರಿಂದ ತಲೆಗೆ ಗಂಭೀರ ಪೆಟ್ಟಾಗಿ ತೀವ್ರರಕ್ತ ಸೋರಿಕೆಯಾಗಿತ್ತು.
ಸಾರ್ವಜನಿಕರು ತಕ್ಷಣ ಅವರನ್ನು ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದರು. ಸ್ಕ್ಯಾನಿಂಗ್‌ಗೆ ಒಳಪಡಿಸಿದ ನಂತರ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದು, ಕೋಮಾ ಸ್ಥಿತಿಗೆ ತಲುಪಿದ್ದ ಅಕ್ಷಯ್ ಅವರ ಮಿದುಳು ನಿಷ್ಕ್ರಿಯಗೊಂಡಿದ್ದು, ಉಳಿದ ಅಂಗಾಂಗಗಳು ಕಾರ್ಯನಿರ್ವಹಿಸುತ್ತಿದ್ದವು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೆ ಅಕ್ಷಯ್ ಮೃತಪಟ್ಟಿದ್ದಾರೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-08-2025)
- 80ರ ವೃದ್ಧನಿಗೆ ಪ್ರೀತಿ ಹೆಸರಲ್ಲಿ ನಾಲ್ವರು ಮಹಿಳೆಯರಿಂದ 9 ಕೋಟಿ ವಂಚನೆ
- ಸವಿತಕ್ಕ ಪುತ್ರನ ಆತಹತ್ಯೆಗೆ “ಡೆತ್ನೋಟ್” ವೆಬ್ಸೀರಿಸ್ ಕಾರಣವಂತೆ..?
- ಎಲ್ಲಾ ರಾಜ್ಯಗಳಲ್ಲೂ ಅನರ್ಹ ಮತದಾರರಿಗೆ ಕೋಕ್
- ಆನ್ಲೈನ್ ಗೇಮ್ಗಾಗಿ ಹಣಕ್ಕೆ ಪೀಡಿಸುತ್ತಿದ್ದ ತಂಗಿ ಮಗನನ್ನೇ ಕೊಂದ ಮಾವ