Friday, November 22, 2024
Homeರಾಜ್ಯಡಿ.4 ರಿಂದ ಬೆಳಗಾವಿಯಲ್ಲಿ ಅಧಿವೇಶನ, ಗಲಾಟೆ 'ಗ್ಯಾರಂಟಿ'

ಡಿ.4 ರಿಂದ ಬೆಳಗಾವಿಯಲ್ಲಿ ಅಧಿವೇಶನ, ಗಲಾಟೆ ‘ಗ್ಯಾರಂಟಿ’

ಬೆಂಗಳೂರು, ನ.16-ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವು ಡಿ.4ರಿಂದ ಹತ್ತು ದಿನಗಳ ಕಾಲ ಬೆಳಗಾವಿಯಲ್ಲಿ ನಡೆಯಲಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ.4ರಂದು ಬೆಳಿಗ್ಗೆ 11ಗಂಟೆಗೆ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಅವೇಶನಗಳು ಸಮಾವೇಶಗೊಳಲಿವೆ.

ಅಂದಿನಿಂದ ಡಿ.15ರವರೆಗೆ ಹತ್ತು ದಿನಗಳ ಅಧಿವೇಶನ ನಡೆಸಲು ನಿಗದಿಪಡಿಸಲಾಗಿದೆ. ಈ ಸಂಬಂಧ ವಿಧಾನಸಭೆ ಸಚಿವಾಲಯ ಅಕೃತ ಪ್ರಕಟಣೆ ಹೊರಡಿಸಿದೆ. ಪ್ರತಿ ವರ್ಷದಂತೆ ಎರಡು ವಾರ ಕಾಲ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸಲಾಗುತ್ತದೆ. ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸುವರ್ಣ ವಿಧಾನಸೌಧದಲ್ಲಿ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡಿದ್ದಾರೆ. ಉಭಯ ಸಚಿವಾಲಯಗಳು ಅಧಿವೇಶನಕ್ಕೆ ಸಿದ್ಧತೆ ಆರಂಭಿಸಿವೆ.

16ನೇ ವಿಧಾನಸಭೆಯ ಎರಡನೇ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಯ ಲೋಪ-ದೋಷಗಳು, ಬರಪರಿಸ್ಥಿತಿಯಿಂದ ಉಂಟಾಗಿರುವ ಸಮಸ್ಯೆಗಳು, ಅಭಿವೃದ್ಧಿ ಕಾಮಗಾರಿಗಳಿಗೆ ಹಣ ನೀಡದಿರುವುದು ಮೊದಲಾದ ವಿಚಾರಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸಜ್ಜಾಗುತ್ತಿವೆ.

ಗುಂಡಿನ ಚಕಮಕಿ : ಕೊಡಗು ಜಿಲ್ಲೆಯ ಅರಣ್ಯ ವ್ಯಾಪ್ತಿಯಲ್ಲಿ ಹೈಅಲರ್ಟ್

ಹಾಗೆಯೇ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ತೀವ್ರ ಬರಪರಿಸ್ಥಿತಿ ಇದ್ದರೂ ರಾಜ್ಯದ ಮನವಿಗೆ ಕೇಂದ್ರ ಸರ್ಕಾರ ಸ್ಪಂಸುತ್ತಿಲ್ಲ ಎಂದು ಆರೋಪಿಸುತ್ತಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಕೂಡ ಸರ್ಕಾರವನ್ನು ಸಮರ್ಥಿಸಿಕೊಳ್ಳಲು ಸಿದ್ಧತೆ ನಡೆಸಿದೆ.

ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ, ಕುಡಿಯುವ ನೀರು, ಗುಳೆ ಹೋಗದಂತೆ ಉದ್ಯೋಗ, ಜಾನುವಾರುಗಳ ಮೇವು, ವಿದ್ಯುತ್ ಅಭಾವ ಮೊದಲಾದ ಜ್ವಲಂತ ವಿಚಾರಗಳು ಅಧಿವೇಶನದಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರದ ವೇದಿಕೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.

RELATED ARTICLES

Latest News