ಬೆಂಗಳೂರು,ಜೂ.20- ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಇರುವುದನ್ನು ಒಪ್ಪಿಕೊಂಡಿರುವ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಒಳಜಗಳ ಬಿಟ್ಟು ಒಂದಾಗಿರಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿ ದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯ ಜವಾಬ್ದಾರಿ ಹೆಚ್ಚಾಗಿದೆ. ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಇಳಿಸಬೇಕಾದರೆ ನಮಲ್ಲಿರುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಲೇಬೇಕು. ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕಾದ ಅಗತ್ಯವಿದೆ ಎಂದು ಹೇಳಿದರು.
ಕೆಲವರಿಗೆ ಅತೃಪ್ತಿ ಇರುವುದು ನಿಜ. ಅದನ್ನು ಸರಿಪಡಿಸುವ ಕೆಲಸವನ್ನು ವರಿಷ್ಠರು ಮಾಡಲಿದ್ದಾರೆ. ಸ್ಥಳೀಯವಾಗಿ ಸಣ್ಣಪುಟ್ಟ ಗೊಂದಲ ಇರುವುದನ್ನು ನಾನು ಅಲ್ಲಗೆಳೆಯುವುದಿಲ್ಲ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಶಾಸಕ ಸಿ.ಟಿ.ರವಿ ಸೇರಿದಂತೆ ಮತ್ತಿತರರು ಚರ್ಚೆ ಮಾಡಿ ಸಮಸ್ಯೆಯನ್ನು ಇತ್ಯರ್ಥಪಡಿಸು ತ್ತೇವೆ. ಶೀಘ್ರದಲ್ಲೇ ಎಲ್ಲವೂ ಇತ್ಯರ್ಥವಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಕೇಂದ್ರ ಗೃಹಸಚಿವ ಅಮಿತ್ ಶಾ ಬಂದಿದ್ದರು. ಇಂದು ಬೆಳೆಗ್ಗೆ ಭೇಟಿಯಾಗಿದ್ದೇವೆ. ಅಶೋಕ್, ಬೊಮಾಯಿ ಸೇರಿದಂತೆ ಎಲ್ಲರೂ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ಮಾಡಿದ್ದೇವೆ. ವರಿಷ್ಠರು ಭ್ರಷ್ಟ ಕಾಂಗ್ರೆಸ್ ವಿರುದ್ದ ಹೋರಾಟ ನಡೆಸಲು ಹಲವು ಸಲಹೆಗಳನ್ನು ಕೊಟ್ಟಿದ್ದಾರೆ. ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದರು. ಭ್ರಷ್ಟ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಒಲೈಕೆಗೆ ಅನೇಕ ತೀರ್ಮಾನ ಮಾಡುತ್ತಿದೆ. ವಸತಿ ಯೋಜನೆಯಲ್ಲಿ ಮೀಸಲಾತಿ ಹೆಚ್ಚಳ ಮಾಡಿದ್ದಾರೆ ಎಂದರು.
ಪ್ರಧಾನಿ ನರೇಂದ್ರಮೋದಿ ಅವರು ಎಲ್ಲರೂ ಒಂದೇ ಎಂದು ಎಲ್ಲಾ ಸಮುದಾಯಕ್ಕೆ ಸಮಾನ ನ್ಯಾಯ ಕೊಡುತ್ತಿದ್ದಾರೆ. ಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಅಪಮಾನ ಮಾಡುತ್ತಿದ್ದಾರೆ. ದೇವರು ಇವರಿಗೆ ಒಳ್ಳೆಯದು ಮಾಡುವುದಿಲ್ಲ ಎಂದು ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಬಿಜೆಪಿ ಮೇಲೆ 40% ಕಮೀಷನ್ ಆರೋಪ ಮಾಡಿದ್ದರು. ಕಾಂಗ್ರೆಸ್ 100% ಕಮೀಷನರ್ ಸರ್ಕಾರ ಎಂದು ದೂರಿದ ಅವರು ಯಾವುದೇ ಇಲಾಖೆಯಲ್ಲಿ ಲಂಚ ಇಲ್ಲದೆ ಕೆಲಸ ಆಗುತ್ತಿಲ್ಲ. ಭ್ರಷ್ಟಾಚಾರಕ್ಕೆ ಸಿಎಂ ಸೇರಿ ಎಲ್ಲರೂ ಸಹಕಾರ ಕೊಡುತ್ತಿದ್ದಾರೆ. ಬಿ.ಆರ್. ಪಾಟೀಲ್ ಅವರ ಆಡಿಯೋ ಸಣ್ಣದು ಅಷ್ಟೆ. ಜನ ಇವರ ಆಡಳಿತಕ್ಕೆ ಬೇಸತ್ತಿದ್ದಾರೆ ಎಂದರು.
ಮೈಕ್ರೋ ಫೈನಾನ್‌್ಸ ಬಗ್ಗೆ ಚರ್ಚೆಯಾಗಿದೆ. ಕಾನೂನು ತಂದಿದ್ದೇವೆ ಅಂದರು ಗಂಭೀರವಾಗಿ ತೆಗೆದುಕೊಳ್ಳೊಲ್ಲ ಇವರು. ಸರ್ಕಾರ ತಮ ಆದ್ಯತೆ ಮರೆತಿದೆ ಎಂದು ವಿಜಯೇಂದ್ರ ದೂರಿದರು.
- ಪಾಕ್ ಪ್ರವಾಹದಲ್ಲಿ 220 ಜನ ಬಲಿ
- ಇಂಡೋನೇಷ್ಯಾದ ಸುಲಾವೆಸಿ ದ್ವೀಪದಲ್ಲಿ 5.8 ತೀವ್ರತೆಯ ಭೂಕಂಪ
- ಪೀಣ್ಯ ಫ್ಲೈ ಓವರ್ ಮೇಲೆ ಅಪಘಾತ, ಗ್ಯಾಸ್ ಸಿಲಿಂಡರ್ ಡೆಲಿವರಿ ಬಾಯ್ ಸಾವು
- ಧರ್ಮಸ್ಥಳದ ಅಪಪ್ರಚಾರ ಪಿತೂರಿ ಮಾಡಿದವರ ವಿರುದ್ಧ ತನಿಖೆಗೆ ಬಿವೈವಿ ಆಗ್ರಹ
- ನಗರ್ತಪೇಟೆ ಅಗ್ನಿ ಅವಘಡ, ಇಬ್ಬರ ಬಂಧನ