ಬೆಂಗಳೂರು,ಜೂ.20- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಸಚಿವ ಜಮೀರ್ ಅಹದ್ ಖಾನ್ ಅವರ ರಾಜೀನಾಮೆ ಪಡೆದು, ಶಾಸಕ ಬಿ.ಆರ್.ಪಾಟೀಲ್‌ರವರ ಮೊಬೈಲ್ ಕರೆ ಆಡಿಯೋ ಆಧಾರದ ಮೇಲೆ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಆಶೋಕ್ ಆಗ್ರಹಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸ್ಪಪಕ್ಷದ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡುತ್ತಿರುವಾಗ ವಸತಿ ಸಚಿವ ಜಮೀರ್ ಅಹದ್ ಖಾನ್ ಅವರಿಗೆ ತಮ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿದೆ? ಎಂದು ಪ್ರಶ್ನೆ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಭ್ರಷ್ಟ ಸರ್ಕಾರ. ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ನೀಡಿದ್ದ ಹೇಳಿಕೆಗೆ ಪುಷ್ಟಿ ನೀಡುವಂತೆ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಅವರು ಜಮೀರ್ ಆಹಮದ್ ಅವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಆರೋಪ ಮಾಡಿರುವ ಶಾಸಕ ಬಿ.ಆರ್.ಪಾಟೀಲ್ ಅವರು ತಮಲ್ಲಿರುವ ಭ್ರಷ್ಟಾಚಾರದ ಮಾಹಿತಿಯನ್ನು ಬಹಿರಂಗ ಪಡಿಸಿದರೆ ಸರ್ಕಾರವೇ ಅಲ್ಲಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ ಎಂಬುದನ್ನು ಉಲ್ಲೇಖಿಸಿದ್ದಾರೆ.
ಶಾಸಕ ಬಿ.ಆರ್.ಪಾಟೀಲ್ ಅವರು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಲಂಚಗುಳಿತನದ ಬಗ್ಗೆ ತಮಗಿರುವ ಮಾಹಿತಿಯನ್ನು ಬಹಿರಂಗಪಡಿಸಬೇಕು ಮತ್ತು ಲೋಕಾಯುಕ್ತಕ್ಕೆ ದೂರು ಸಲ್ಲಿಸಬೇಕು. ಅವರಿಗೆ ಈ ವಿಷಯದಲ್ಲಿ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಅಶೋಕ್ ಹೇಳಿದ್ದಾರೆ.
- ಪಾಕ್ ಪ್ರವಾಹದಲ್ಲಿ 220 ಜನ ಬಲಿ
- ಇಂಡೋನೇಷ್ಯಾದ ಸುಲಾವೆಸಿ ದ್ವೀಪದಲ್ಲಿ 5.8 ತೀವ್ರತೆಯ ಭೂಕಂಪ
- ಪೀಣ್ಯ ಫ್ಲೈ ಓವರ್ ಮೇಲೆ ಅಪಘಾತ, ಗ್ಯಾಸ್ ಸಿಲಿಂಡರ್ ಡೆಲಿವರಿ ಬಾಯ್ ಸಾವು
- ಧರ್ಮಸ್ಥಳದ ಅಪಪ್ರಚಾರ ಪಿತೂರಿ ಮಾಡಿದವರ ವಿರುದ್ಧ ತನಿಖೆಗೆ ಬಿವೈವಿ ಆಗ್ರಹ
- ನಗರ್ತಪೇಟೆ ಅಗ್ನಿ ಅವಘಡ, ಇಬ್ಬರ ಬಂಧನ