ಬೆಂಗಳೂರು, ಜೂ.20-ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ತಾಂಡವ ನೃತ್ಯ ಆಡುತ್ತಿದೆ ಎನ್ನುವುದಕ್ಕೆ ಹಿರಿಯ ಶಾಸಕ ಬಿ.ಆರ್.ಪಾಟೀಲ್ ತಮ್ಮದೇ ಸರ್ಕಾರದ ವಿರುದ್ಧ ಮಾಡಿರುವ ಸ್ಫೋಟಕ ಆರೋಪವೇ ಸಾಕ್ಷಿಯಾಗಿದೆ ಎಂದು ವಿಧಾನಪರಿಷತ್ ಹಿರಿಯ ಸದಸ್ಯ ಟಿ. ಎ.ಶರವಣ ಟೀಕಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ವಸತಿ ಇಲಾಖೆಯಲ್ಲಿ ಹೆಜ್ಜೆ ಹೆಜ್ಜೆಗೂ ಕಾಂಚಾಣವೇ ಮಾತಾಡಬೇಕು. ಹಣ ಇಲ್ಲದಿದ್ದರೆ ಅಲ್ಲಿ ಏನೇನೂ ಆಗುವುದಿಲ್ಲ ಎಂದು ಆಡಳಿತ ಪಕ್ಷದ ಶಾಸಕರೇ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹಮದ್ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಸಚಿವ ಜಮೀರ್ ಅವರ ಆಪ್ತ ಕಾರ್ಯದರ್ಶಿ ಸರ್ಫರೋಜ್ ಖಾನ್ ಅವರೇ ಇಲಾಖೆಯಲ್ಲಿನ ಮನೆ ಹಂಚಿಕೆಗೆ ಲಂಚ ಕೊಡುವ ಪರಿಸ್ಥಿತಿ ಇದೆ ಎಂದು ಆಡಳಿತ ಪಕ್ಷದ ಶಾಸಕರಿಗೇ ಹೇಳಿರುವುದನ್ನು ನೋಡಿದರೆ ಆಡಳಿತ ವ್ಯವಸ್ಥೆ ಕುಲಗೆಟ್ಟು ಹೋಗಿರುವುದು ಅರ್ಥವಾಗುತ್ತದೆ. ಈ ಸರ್ಕಾರ ಅಧಿಕಾರದಲ್ಲಿ ಉಳಿಯುವ ನೈತಿಕತೆಯನ್ನು ಕಳೆದುಕೊಂಡಿದೆ ಎಂದು ಶರವಣ ಕಿಡಿಕಾರಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಬೇಕು. ತನಿಖೆಯ ಮೇಲೆ ಒತ್ತಡ ಹೇರಬಾರದು ಎನ್ನುವ ಕಾರಣಕ್ಕೆ ವಸತಿ ಮಂತ್ರಿ ಅಧಿಕಾರದಿಂದ ಕೆಳಗೆ ಇಳಿಯಬೇಕು ಎಂದು ಆಗ್ರಹಿಸಿದ್ದಾರೆ.
- ಕಾಶ್ಮೀರದಲ್ಲಿ ಮೇಘಸ್ಫೋಟಕ್ಕೆ 4 ಮಂದಿ ಬಲಿ
- ಆಶ್ರಮದಲ್ಲಿ 35 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಅರ್ಚಕ ಸೆರೆ
- ಚಿನ್ನದ ಅಂಗಡಿ ಕಳ್ಳತನ ತಡೆಯಲು ಹೋದ ಹೋಟೆಲ್ ಮಾಲೀಕನನ್ನುಇರಿದು ಕೊಂದ ದುಷ್ಕರ್ಮಿಗಳು
- ಮುಂಬೈ ಮತ್ತು ಥಾಣೆಯಲ್ಲಿ ಕೃಷ್ಣಜನ್ಮಾಷ್ಟಮಿ ಉತ್ಸವದ ವೇಳೆ 2 ಸಾವು, 117 ಜನರಿಗೆ ಗಾಯ
- ರಸ್ತೆಯಲ್ಲೇ ಹಸುಗಳ ಕತ್ತು ಕೊಯ್ದು ಅಟ್ಟಹಾಸ ಮೆರೆದಿದ್ದ ಮೂವರು ರಾಕ್ಷಸರ ಬಂಧನ