ಸೇಲಂ (ತಮಿಳುನಾಡು), ಜೂ.21: ಸೇಲಂ ಉಕ್ಕು ಸ್ಥಾವರದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಪಾಲ್ಗೊಂಡು, ಕಾರ್ಖಾನೆಯ ಸಿಬ್ಬಂದಿ, ಅವರ ಕುಟುಂಬ ಸದಸ್ಯರು, ಹಿರಿಯ ಅಧಿಕಾರಿಗಳು, ಭಾರತೀಯ ಉಕ್ಕು ಪ್ರಾಧಿಕಾರ ಹಾಗೂ ಉಕ್ಕು ಸಚಿವಾಲಯದ ಉನ್ನತ ಅಧಿಕಾರಿಗಳ ಜೊತೆಯಲ್ಲಿ ಸಚಿವರು ಯೋಗಾಭ್ಯಾಸ ನಡೆಸಿದರು.
ಸೇಲಂ ಟೌನ್‌ಶಿಪ್‌ನಲ್ಲಿರುವ ಹಿಲ್ ವ್ಯೂ ಕ್ರೀಡಾಂಗಣದಲ್ಲಿ ಯೋಗ ಶಿಕ್ಷಕರ ಮಾರ್ಗದರ್ಶನದಲ್ಲಿ ಸಚಿವರು ಕೆಲ ಪ್ರಮುಖ, ಸರಳ ಆಸನಗಳನ್ನು ಹಾಗೂ ಪ್ರಾಣಾಯಾಮವನ್ನೂ ಅಭ್ಯಾಸ ಮಾಡಿದರು.
ಮೋದಿ ಅವರಿಗೆ ಅಭಿನಂಧನೆ : ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕುಮಾರಸ್ವಾಮಿ ಅವರು, ಯೋಗ ಎನ್ನುವುದು ನಮ ಭಾರತದಲ್ಲಿ ಪ್ರಾಚೀನ ಕಾಲದಿಂದ ಬೆಳೆದುಬಂದ ಜೀವನಶೈಲಿಯಾಗಿದೆ. ಭಾರತಕ್ಕಷ್ಟೇ ಸೀಮಿತವಾಗಿದ್ದ ಯೋಗವನ್ನು ಹನ್ನೊಂದು ವರ್ಷಗಳ ಹಿಂದೆ ಪ್ರಧಾನಿಗಳಾಗಿ ಅಧಿಕಾರ ವಹಸಿಕೊಂಡ ನರೇಂದ್ರ ಮೋದಿ ಅವರು ಇಡೀ ಜಗತ್ತಿನ ವೇದಿಕೆಗೆ ತೆಗೆದುಕೊಂಡು ಹೋದರು. ಅದರ ಪರಿಣಾಮವಾಗಿ ಜಗತ್ತಿನ ಎಲ್ಲೆಡೆ ಜೂನ್ 21ನೇ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನ ಎಂದು ಆಚರಿಸಲಾಗುತ್ತಿದೆ. ಇದರ ಸಂಪೂರ್ಣ ಹೆಗ್ಗಳಿಕೆ ಮೋದಿ ಅವರಿಗೆ ಸಲ್ಲಬೇಕು ಎಂದರು.
ಸೇಲಂ ಉಕ್ಕು ಸ್ಥಾವರದ ಸಿಬ್ಬಂದಿ, ಅಧಿಕಾರಿಗಳು, ಅವರ ಕುಟುಂಬ ಸದಸ್ಯರ ಜತೆ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ನನಗೆ ಸಿಕ್ಕಿದೆ. ಇದು ನನಗೆ ಬಹಳ ಸಂತೋಷ ಉಂಟು ಮಾಡಿದೆ. ರಾಷ್ಟ್ರದ ಬೆನ್ನೆಲುಬಾಗಿರುವ ಉಕ್ಕು ಕ್ಷೇತ್ರದ ಕುಟುಂಬದೊಂದಿಗೆ ಯೋಗದ ಅನನ್ಯತೆ, ಅವಿಸರಣೆಯ ಕ್ಷಣಗಳನ್ನು ಅನುಭವಿಸುವ ಭಾಗ್ಯ ನನ್ನದಾಯಿತು ಎಂದು ಅವರು ಹೇಳಿದರು.
ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ. ಇದು ಮಾನಸಿಕ ಶಾಂತಿ, ಮಾನಸಿಕ ಸ್ಪಷ್ಟತೆ, ದೈಹಿಕ ಸ್ವಾಸ್ತ್ಯತೆ ಮತ್ತು ಸಾಮೂಹಿಕ ಯೋಗಕ್ಷೇಮಕ್ಕೆ ಪರಿಣಾಮಕಾರಿ ಮಾರ್ಗವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಯೋಗವು ಜಗತ್ತನ್ನೇ ಒಗ್ಗೂಡಿಸಿದೆ. ಜಗತ್ತಿನ ಯೋಗಕ್ಷೇಮಕ್ಕೆ ನಮ ಪಾರಂಪರಿಕ ಯೋಗವು ಮಹೋನ್ನತ ಕೊಡುಗೆ ನೀಡುತ್ತಿದೆ ಎಂದು ಅವರು ತಿಳಿಸಿದರು.
ಭಾರತೀಯ ಉಕ್ಕು ಪ್ರಾಧಿಕಾರದ (ಸೈಲ್) ಅಧ್ಯಕ್ಷ ಅಮರೇಂದು ಪ್ರಕಾಶ್, ಉಕ್ಕು ಸಚಿವ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಭಿಜಿತ್ ನರೇಂದ್ರ ಸೇರಿದಂತೆ ಸೇಲಂ ಉಕ್ಕು ಸ್ಥಾವರದ ಹಿರಿಯ ಅಧಿಕಾರಗಳು ಕೂಡ ಯೋಗಾಭ್ಯಾಸದಲ್ಲಿ ಭಾಗಿಯಾಗಿದ್ದರು.
- ರೌಡಿ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್
- ನೈರುತ್ಯ ವಿಭಾಗದ ಡಿಸಿಪಿ ಕಚೇರಿ ಕಾರ್ಯಾರಂಭ
- ವೈಭವದಿಂದ ಜರುಗಿದ ಚಾಮುಂಡೇಶ್ವರಿ ವರ್ಧಂತಿ ಉತ್ಸವ
- ಕೊಡಗು, ಉತ್ತರ ಕನ್ನಡದಲ್ಲಿ ಮಳೆ ಅಬ್ಬರ, ಶಾಲೆಗಳಿಗೆ ರಜೆ
- ಛತ್ತೀಸ್ಗಡ : ಹೈಟೆಕ್ ಸಾಧನಗಳನ್ನು ಬಳಸಿ ಸರ್ಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಕಲು