ಟೆಹರಾನ್,ಜೂ.24– ಕಳೆದ ಹಲವು ದಿನಗಳಿಂದ ಇಡೀ ಪ್ರಪಂಚವೇ ಆತಂಕದಿಂದ ನೋಡುತ್ತಿದ್ದ ಇರಾನ್-ಇಸ್ರೇಲ್ ಸಂಘರ್ಷಕ್ಕೆ ಇಂದು ಕದನ ವಿರಾಮದ ಅಂಕಿತ ಬಿದ್ದಿದೆ.ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಅಧಿಕೃತ ಆದೇಶ ಹೊರಡಿಸಿದ್ದು, ಇಸ್ರೇಲ್ ಮತ್ತು ಇರಾನ್ ನಡುವಿನ ಕದನ ವಿರಾಮ ಅಧಿಕೃತವಾಗಿ ಜಾರಿಗೆ ಬಂದಿದೆ ಎಂದು ದೃಢಪಡಿಸಿದ್ದಾರೆ.ಅಲ್ಲದೇ ಎರಡೂ ಕಡೆಯವರು ಒಪ್ಪಂದವನ್ನು ಗೌರವಿಸಬೇಕು ಮತ್ತು ಅದನ್ನು ಉಲ್ಲಂಘಿಸಬಾರದು ಎಂದು ಒತ್ತಾಯಿಸಿದ್ದಾರೆ.
ಇರಾನ್ ಇಸ್ರೇಲಿ ಪ್ರದೇಶಗಳಲ್ಲಿ ಹಲವಾರು ಕ್ಷಿಪಣಿಗಳನ್ನು ಹಾರಿಸಿದ ನಂತರ. ಮಧ್ಯಪ್ರಾಚ್ಯದ ಎರಡು ಕಟ್ಟಾ ಶತ್ರುಗಳಿಗೆ ಅಮೆರಿಕಾದ ನಾಯಕ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸದಂತೆ ಎಚ್ಚರಿಕೆ ನೀಡಿದ್ದಾರೆ.ದಿ ಸೀಸ್ ಫೈರ್ ( ಕದನ ವಿರಾಮ) ಈಗ ಪರಿಣಾಮ ಬೀರುತ್ತಿದೆ. ದಯವಿಟ್ಟು ಅದನ್ನು ಉಲ್ಲಂಘಿಸಬೇಡಿ ಎಂದು ಟ್ರಂಪ್ ತಮ್ಮ ಸಾಮಾಜಿಕ ಜಾಲ ತಾಣ ಎಕ್ಸ್ ನ ಪೋಸ್ಟ್‌ನಲ್ಲಿ ಬರೆದಿದ್ದಾರೆ.12 ದಿನಗಳ ಯುದ್ಧವನ್ನು ಕೊನೆಗೊಳಿಸಲು ಅಮೆರಿಕದ ನಾಯಕ ಈ ಹಿಂದೆ ಸಂಪೂರ್ಣ ಕದನ ವಿರಾಮಕ್ಕೆ ಕರೆ ನೀಡಿದ್ದರು.ಮಂಗಳವಾರ ಬೆಳಿಗ್ಗೆ 0400 ರಿಂದ ಆರಂಭಗೊಂಡು 24 ಗಂಟೆಗಳ ಹಂತ ಹಂತದ ಕದನ ವಿರಾಮ ಪ್ರಕ್ರಿಯೆಯಾಗಲಿದೆ ಎಂದಿದ್ದರು.
ಇರಾನ್ ಏಕಪಕ್ಷೀಯವಾಗಿ ಎಲ್ಲಾ ಕಾರ್ಯಾಚರಣೆಗಳನ್ನು ಮೊದಲು ಸ್ಥಗಿತಗೊಳಿಸಿತು. 12 ಗಂಟೆಗಳ ನಂತರ ಇಸ್ರೇಲ್ ಕೂಡ ಇದೇ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.
ಇಸ್ರೇಲ್ ಆಕ್ರಮಿತ ಪ್ರದೇಶಗಳ ಮೇಲೆ ಐದು ಅಲೆಗಳ ಕ್ಷಿಪಣಿ ದಾಳಿಗಳು ನಡೆದ ನಂತರ, ದಕ್ಷಿಣದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ ನಂತರ ಇಸ್ರೇಲ್ ಜೊತೆಗಿನ ಕದನ ವಿರಾಮ ಜಾರಿಗೆ ಬಂದಿದೆ ಎಂದು ಇರಾನ್ ಸರ್ಕಾರ ಮಾಧ್ಯಮ ತಿಳಿಸಿದೆ.
ಕದನ ವಿರಾಮ ಜಾರಿಗೆ ಬರುವ ಮೊದಲು ಟೆಹ್ರಾನ್ ತನ್ನ ಕೊನೆಯ ಸುತ್ತಿನ ಕ್ಷಿಪಣಿಗಳನ್ನು ಹಾರಿಸಿದೆ ಎಂದು ಇರಾನ್‌ನ ಅರೆ-ಅಧಿಕೃತ ಎಎನ್ಎನ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಕ್ಷಿಪಣಿಗಳ ದಾಳಿ ಕೊನೆಗೊಂಡಂತೆ, ಸಾರ್ವಜನಿಕರು ಆಶ್ರಯ ತಾಣಗಳ ಸಮೀಪವಿರುವ ಪ್ರದೇಶಗಳನ್ನು ತೊರೆಯಬಹುದು ಎಂದು ಇಸ್ರೇಲ್ ಸೇನೆ ಹೇಳಿದೆ. ಪರಿಸ್ಥಿತಿಯ ಮೌಲ್ಯ ಮಾಪನದ ನಂತರ, ದೇಶಾದ್ಯಂತ ಸಂರಕ್ಷಿತ ಸ್ಥಳಗಳ ಬಳಿ ಉಳಿಯುವ ಅಗತ್ಯವನ್ನು ತೆಗೆದುಹಾಕಲಾಗಿದೆ ಎಂದು ಜೋಮ್ ಫ್ರಂಟ್ ಕಮಾಂಡ್ ಘೋಷಿಸಿದೆ ಎಂದು ಸೇನೆ ಹೇಳಿಕೆಯಲ್ಲಿ ತಿಳಿಸಿದೆ.
ಇದಕ್ಕೂ ಮುನ್ನ ಬೆಳಿಗ್ಗೆ ಸಾಮಾಜಿಕ ಜಾಲತಾಣ ಟ್ರುತ್ ನಲ್ಲಿ ಪೋಸ್ಟ್ ಮಾಡಿದ್ದ ಟ್ರಂಪ್ ಅವರು, ಎಲ್ಲರಿಗೂ ಅಭಿನಂದನೆಗಳು. ಇಸ್ರೇಲ್ ಮತ್ತು ಇರಾನ್ ಸಂಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಇಸ್ರೇಲ್ ಮತ್ತು ಇರಾನ್ ತಮ್ಮ ಅಂತಿಮ ಕಾರ್ಯಾಚರಣೆಗಳನ್ನು ಮುಗಿಸಿದ ನಂತರ, ಸುಮಾರು 6 ಗಂಟೆಗಳಲ್ಲಿ ಕದನ ವಿರಾಮ ಪ್ರಾರಂಭವಾಗುತ್ತದೆ. 12 ಗಂಟೆಗಳ ಕಾಲ ಇದು ನಡೆಯುತ್ತದೆ. ನಂತರ ಯುದ್ದವು ಮುಕ್ತಾಯವಾಗುತ್ತದೆ ಎಂದು ಹೇಳಿದ್ದರು.
ಇದರ ಬೆನ್ನಲ್ಲೇ ಹೇಳಿಕೆ ನೀಡಿದ್ದ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರು ಅವರು, ಇಸ್ರೇಲ್ ಜೊತೆ ಕದನ ವಿರಾಮಕ್ಕೆ ಒಪ್ಪಿಲ್ಲ ಎಂದು ಸ್ಪಷ್ಟಪಡಿಸಿದ್ದರು.
ಇರಾನ್ ಮೇಲೆ ಯುದ್ಧ ಆರಂಭಿಸಿದ್ದು ಇಸ್ರೇಲ್. ಈಗಿನವರೆಗೆ, ಯಾವುದೇ ಕದನ ವಿರಾಮ ಅಥವಾ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆಗೆ ಯಾವುದೇ ಒಪ್ಪಂದ ಆಗಿಲ್ಲ, ಇಸ್ರೇಲ್ ತನ್ನ ಕಾನೂನುಬಾಹಿರ ಆಕ್ರಮಣವನ್ನು ನಿಲ್ಲಿಸಿದರೆ, ನಾವು ಯುದ್ಧ ಮುಂದುವರಿಸುವ ಉದ್ದೇಶ ಹೊಂದಿಲ್ಲ. ನಮ್ಮ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆ ಬಗ್ಗೆ ಅಂತಿಮ ನಿರ್ಧಾರವನ್ನು ನಂತರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು.
ಇದರ ಬೆನ್ನಲ್ಲೇ ಇಸ್ರೇಲ್ ಮೇಲಿನ ದಾಳಿಯನ್ನು ಇರಾನ್ ತೀವ್ರಗೊಳಿಸಿತ್ತು. ಇರಾನ್ ನಡೆಸಿದ ಕ್ಷಿಪಣಿ ದಾಳಿಯಲ್ಲಿ ದಕ್ಷಿಣ ಇಸ್ರೇಲ್ ನಗರವಾದ ಬೀರ್ ಶೆವಾದ ವಸತಿ ಕಟ್ಟಡಕ್ಕೆ ಕ್ಷಿಪಣಿ ಅಪ್ಪಳಿಸಿದ ಪರಿಣಾಮ ಕನಿಷ್ಟ ಮೂವರು ಸಾವಿಗೀಡಾಗಿದ್ದಾರೆ. ಕ್ಷಿಪಣಿ ದಾಳಿಗೆ ವಸತಿ ಸಂಕೀರ್ಣ ಸಂಪೂರ್ಣವಾಗಿ ನಾಶವಾಗಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸುಟ್ಟುಹೋದ ಕಾರುಗಳು ಮತ್ತು ಮರಗಳ ಅವಶೇಷಗಳು ವಿಡಿಯೋದಲ್ಲಿ ಕಂಡು ಬಂದಿವೆ.
ಇದೀಗ ಉಭಯ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದು, ಅಂತಿಮವಾಗಿ 12 ದಿನಗಳ ಯುದ್ಧ ಕೊನೆಗೂ ಮುಕ್ತಾಯಗೊಂಡಿದೆ. ಯುದ್ಧ ನಿಲ್ಲಿಸುವುದಾಗಿ ಇರಾನ್ ಘೋಷಣೆ ಮಾಡಿದ್ದು, ಕದನ ವಿರಾಮ ಜಾರಿಗೆ ಬರುವ ಕೊನೆಯ ಕ್ಷಣದವರೆಗೂ ಹೋರಾಡಿದ್ದೇವೆಂದು ಇರಾನ್ ಹೇಳಿದೆ. ಆದರೆ, ಕದನ ವಿರಾಮದ ಬಗ್ಗೆ ಇಸ್ರೇಲ್ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಕದನ ವಿರಾಮ ಕುರಿತು ಸಾಮಾಜಿಕ ಜಾಲತಾಣ ಟ್ರುತ್ ನಲ್ಲಿ ಪೋಸ್ಟ್ ಮಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕದನ ವಿರಾಮ ಈಗಿನಿಂದ ಜಾರಿಯಾಗಿದೆ. ದಯವಿಟ್ಟು ಉಲ್ಲಂಘನೆ ಮಾಡದಿರಿ ಎಂದು ಹೇಳಿದ್ದಾರೆ.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗಿನ ಕರೆಯಲ್ಲಿ ಟ್ರಂಪ್ ಕದನ ವಿರಾಮ ಒಪ್ಪಂದಕ್ಕೆ ಮಧ್ಯಸ್ಥಿಕೆ ವಹಿಸಿದ್ದಾರೆ ಮತ್ತು ಇರಾನ್ ಮತ್ತಷ್ಟು ದಾಳಿ ನಡೆಸದಿರುವವರೆಗೆ ಇಸ್ರೇಲ್ ಒಪ್ಪಿಕೊಂಡಿದೆ ಎಂದು ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ರಾಯಿಟರ್ಸ್‌ಗೆ ತಿಳಿಸಿದ್ದಾರೆ.
ಜೂ.13ರಂದು ಇಸ್ರೇಲ್ ಪ್ರಮುಖ ಮಿಲಿಟರಿ ದಾಳಿಯನ್ನು ನಡೆಸಿದ ನಂತರ ಇರಾನ್ ಮತ್ತು ಇಸ್ರೇಲ್ ನಡುವೆ ಒಂದರ ನಂತರ ಒಂದರಂತೆ ವಾಯುದಾಳಿಗಳು ನಡೆಯುತ್ತಿವೆ. ಟೆಹ್ರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಪಡೆಯುವ ಹಂತಕ್ಕೆ ಹತ್ತಿರವಾಗುತ್ತಿದೆ ಎಂದು ಆರೋಪಿಸಿ, ವಾರಾಂತ್ಯದಲ್ಲಿ ಅಮೆರಿಕದೊಂದಿಗೆ ಸೇರಿಕೊಂಡ ಇಸ್ರೇಲ್, ಇರಾನ್ ಪರಮಾಣು ಸೌಲಭ್ಯಗಳ ಮೇಲೆ ದಾಳಿ ನಡೆಸಿದೆ.
ಇರಾನ್ ಎಂದಿಗೂ ಪರಮಾಣು ಶಸ್ತ್ರಾಸ್ತ್ರಗಳ ಕಾರ್ಯಕ್ರಮವನ್ನು ಹೊಂದಿಲ್ಲ ಎಂದು ನಿರಾಕರಿಸುತ್ತದೆ, ಆದರೆ ಸುಪ್ರೀಂ ನಾಯಕ ಅಲಿ ಖಮೇನಿ ಅವರು ಬಯಸಿದರೆ, ವಿಶ್ವನಾಯಕರು ನಮ್ಮನ್ನು ತಡೆಯಲು ಸಾಧ್ಯವಾಗುವುದಿಲ್ಲ. ಎಂದುಹೇಳಿದ್ದಾರೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-08-2025)
- ರಾಜ್ಯದ ಅಧಿಕಾರಕ್ಕಾಗಿ ಕಾನೂನು ಹೋರಾಟ ಅನಿವಾರ್ಯ; ಸ್ಟಾಲಿನ್
- ಟಾರ್ಪಾಲ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
- ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ಎಸ್ಎಸ್ ಸಮಾಜ ಸೇವೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದ ಮೋದಿ
- ಠಾತ್ ಹೃದಯಾಘಾತ ತಪ್ಪಿಸಲು ಜಿಲ್ಲೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲೂ ಹೃದಯ ಜ್ಯೋತಿ ಯೋಜನೆ ಅನುಷ್ಠಾನ