ಬೆಂಗಳೂರು, ನ.16-ರಾಜಧಾನಿ ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಮತದಾರರ ಕರಡು ಪಟ್ಟಿ ಸಿದ್ಧವಾಗಿದ್ದು, ಈ ಸಂಬಂಧ ಯಾವುದೇ ರೀತಿಯ ಆಕ್ಷೇಪಣೆಗಳನ್ನು ಸಲ್ಲಿಸಲು ಡಿ.9ರವರೆಗೂ ಅವಕಾಶ ಕಲ್ಪಿಸಲಾಗಿದೆ, ಜತೆಗೆ ಹೊಸ ಹೆಸರು ಸೇರ್ಪಡೆಗೆ ವಿಶೇಷ ಅಭಿಯಾನ ನಡೆಸಲಾಗುತ್ತಿದೆ.
ಜಿಲ್ಲಾ ಚುನಾವಣಾಧಿಕಾರಿಗಳು ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಅ.27 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿ.9ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಇನ್ನೂ, ಈ ಅವಧಿವರೆಗೂ ವಿಶೇಷ ನೋಂದಣಿ ಅಭಿಯಾನಗಳನ್ನು ಬಿಬಿಎಂಪಿಯ ಎಲ್ಲಾ ಕಂದಾಯ ಅಧಿಕಾರಿಗಳು, ಸಹ ಕಂದಾಯ ಅಧಿಕಾರಿಗಳು, ವಾರ್ಡ್ ಕಚೇರಿಗಳು, ಮತಗಟ್ಟೆಗಳಲ್ಲಿ ಆಯೋಜಿಸಲಾಗಿದೆ. ಮತದಾರರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಬಹುದಾಗಿದೆ.
ವಾಹನಗಳಿಗೆ ಹಾನಿ: ಗೊಂಬೆ ಗ್ಯಾಂಗ್‍ನ ಐದು ಮಂದಿ ಸೆರೆ
ಕರಡು ಮತದಾರರ ಪಟ್ಟಿಗೆ ಸಂಬಂಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಹಮ್ಮಿಕೊಂಡಿರುವ ವಿಶೇಷ ಅಭಿಯಾನದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಲು ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.