ಮುಂಬೈ,ಜೂ.28- ನಾ ಬೋರ್ಡ್ ಇರದ ಬಸ್ಸನು ಹತ್ತಿ ಬಂದ ಸುಂದರಿ ಎಂಬ ಹಾಡಿಗೆ ಪುನಿತ್ ರಾಜ್ ಕುಮಾರ್ ಜೊತೆಗೆ ಹೆಜ್ಜೆ ಹಾಕಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದ ಬಾಲಿವುಡ್ ಖ್ಯಾತ ನಟಿ ಹಾಗೂ ಮಾಡೆಲ್ ಶೆಫಾಲಿ ಜರಿವಾಲಾ ಅವರು ತಡರಾತ್ರಿ ಹೃದಯ ಸ್ತಂಭನದಿಂದ ನಿಧನ ಹೊಂದಿದ್ದಾರೆ.
ಬಿಗ್ ಬಾಸ್ 13ರ ಸ್ಪರ್ಧಿ, ಬಾಲಿವುಡ್ ಖ್ಯಾತ ನಟಿ ಹಾಗೂ ಮಾಡೆಲ್ ಆಗಿ ಗುರುತಿಸಿಕೊಂಡಿದ್ದ ಶೆಫಾಲಿ ಜರಿವಾಲಾ ಅವರ ಹಠಾತ್ ನಿಧನದ ಸುದ್ದಿ ಅಭಿಮಾನಿಗಳಿಗೆ ಹಾಗೂ ಚಿತ್ರರಂಗಕ್ಕೆ ಆಘಾತ ತಂದಿದೆ.
42 ವರ್ಷದಲ್ಲಿ ಹೃದಯಾಘಾತದಿಂದದ ಶೆಫಾಲಿ ಇಹಲೋಕ ತ್ಯಜಿಸಿದ್ದಾರೆ. ಜೂನ್ 27 ರಂದು ಅವರಿಗೆ ಹೃದಯಾಘಾತ ಸಂಭವಿಸಿತು. ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಅವರು ಬರುವ ಮುನ್ನವೇ ಮೃತಪಟ್ಟಿದ್ದಾರೆ. ಎಂದು ವೈದ್ಯರು ಘೋಷಿಸಿದ್ದಾರೆ.
ಶೆಫಾಲಿ ಮುಂಬೈನ ಅಂಧೇರಿ ಲೋಖಂಡ್ವಾಲಾದಲ್ಲಿ ವಾಸಿಸುತ್ತಿದ್ದರು. ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಶೆಫಾಲಿ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅಷ್ಟು ಹೊತ್ತಿಗಾಗಲೇ ಶೆಫಾಲಿ ಕೊನೆಯುಸಿರೆಳೆದಿದ್ದರು. ಶೆಫಾಲಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೂಪರ್ ಆಸ್ಪತ್ರೆಗೆ ಕಳುಹಿಸಲಾಗಿದೆ.
1982ರ ಡಿ.15ರಂದು ಜನಿಸಿದ ಶೆಫಾಲಿ ಮುಂಬೈನಲ್ಲಿ ಬೆಳೆದರು. 2004ರಲ್ಲಿ ಹರ್ಮೀತ್ ಸಿಂಗ್ ಜೊತೆ ಶೆಫಾಲಿ ವಿವಾಹವಾದರು. ಆ ಬಳಿಕ ಪತಿಯೊಂದಿಗೆ ವಿಚ್ಚೇದನ ಪಡೆದು 2014ರಲ್ಲಿ ಪರಾಗ್ ತ್ಯಾಗಿ ಅವರನ್ನು ಶೆಫಾಲಮದುವೆಯಾಗಿ ಸಂಸಾರ ನಡೆಸುತ್ತಿದ್ದರು.
2002ರಲ್ಲಿ ಕಾಂತ ಲಗಾ ಎನ್ನುವ ಹಾಡಿನ ಮೂಲಕ ಶೆಫಾಲಿ ಜರಿವಾಲಾ ಹೆಚ್ಚು ಪ್ರಖ್ಯಾತಿಯನ್ನು ಪಡೆದಿದ್ದರು. ಹಲವಾರು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದರು. ಪರಾಗ್ ತ್ಯಾಗಿ, ಶೆಫಾಲಿ ಜರಿವಾಲಾ ಟೆಲಿವಿಷನ್ ಹಾಗೂ ಸಿನಿಮಾ ಎರಡರಲ್ಲೂ ಕೆಲಸ ಮಾಡುತ್ತಿದ್ದರು.
ಏತನ್ಮಧ್ಯೆ, ಮುಂಬೈ ಪೊಲೀಸರು ತನಿಖೆಗಾಗಿ ತಡರಾತ್ರಿ ಅಂಧೇರಿಯಲ್ಲಿರುವ ಶೆಫಾಲಿ ನಿವಾಸವನ್ನು ತಲುಪಿದರು. ವಿಧಿವಿಜ್ಞಾನ ತಂಡವೂ ಸ್ಥಳದಲ್ಲಿತ್ತು. ಮನೆಯನ್ನು ಸಂಪೂರ್ಣವಾಗಿ ಶೋಧಿಸಿತು. ಅವರ ಸಾವಿನ ಸಂದರ್ಭಗಳ ಬಗ್ಗೆ ಇಲ್ಲಿಯವರೆಗೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲವಾದರೂ, ಪೊಲೀಸರು ಮತ್ತು ವಿಧಿವಿಜ್ಞಾನ ತಂಡಗಳ ಉಪಸ್ಥಿತಿಯು ಪ್ರಕರಣವನ್ನು ಅನುಮಾನಾಸ್ಪದವೆಂದು ಪರಿಗಣಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಅಂಧೇರಿ ಪ್ರದೇಶದ ಅವರ ನಿವಾಸದಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಮುಂಬೈ ಪೊಲೀಸರಿಗೆ ಈ ಬಗ್ಗೆ ಬೆಳಗಿನ ಜಾವ ಗಂಟೆಗೆ ಮಾಹಿತಿ ಸಿಕ್ಕಿತು. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೂರ್ಪ ಆಸ್ಪತ್ರೆಗೆ ಕಳುಹಿಸಲಾಗಿದೆ. ಸಾವಿಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಪಂಕಜಾ ಹಾಡಿಗೆ ಹೆಜ್ಜೆ ಹಾಕಿದ್ದ ನಟಿ :
ಶೆಫಾಲಿ ಅವರು ಅನೇಕ ಮ್ಯೂಸಿಕ್ ಅಲ್ಬಮ್ ಗಳು ಮತ್ತು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಆದರೆ ಕಾಂತಾ ಲಗಾ ರೀಮಿಕ್ಸ್ ವಿಡಿಯೋ ಮೂಲಕ ಅವರು ಹೆಚ್ಚು ಪ್ರಸಿದ್ಧರಾಗಿದ್ದರು. ಆ ನಂತರ ಸಲ್ಮಾನ್ ಖಾನ್ ನಟನೆಯ ಮುಚ್ಚಿ ಶಾದಿ ಕರೋಗಿ ಚಿತ್ರದಲ್ಲಿ ಅವರು ಕಾಣಿಸಿಕೊಂಡರು. ಶೆಫಾಲಿ ಹಲವು ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದರು. ನಾಚ್ ಬಲಿಯೇ ಕಾರ್ಯಕ್ರಮದಲ್ಲಿ ಪತಿ ಪರಾಗ್ ಅವರೊಂದಿಗೆ ಮತ್ತು ಬಿಗ್ ಬಾಸ್ 13ರಲ್ಲಿ ಭಾಗವಿಸುವ ಮೂಲಕ ಜನಪ್ರಿಯತೆ ಗಳಿಸಿದರು. ಇನ್ನೂ ಹುಡುಗರು ಸಿನಿಮಾದ ಪಂಕಜಾ ಹಾಡಿನಲ್ಲಿ ಪುನೀತ್ ರಾಜ್ಯುಮಾರ್, ಯೋಗೇಶ್, ಶ್ರೀನಗರ ಕಿಟ್ಟಿ ಜೊತೆಗೆ ಬಿಂದಾಸ್ ಆಗಿ ಹೆಜ್ಜೆ ಹಾಕಿದ್ದರು.
ಶೆಫಾಲಿ ಜರಿವಾಲಾ ಪತಿ ಯಾರು? :
ನಟಿ ಶೆಫಾಲಿ ಜರಿವಾಲಾ ಅವರ ಪತಿ ಪರಾಗ್ ತ್ಯಾಗಿ, ಇವರಿಬ್ಬರು 4 ವರ್ಷಗಳ ಕಾಲ ಪ್ರೀತಿಸಿ, ಆಗಸ್ಟ್ 2014ರಲ್ಲಿ ಇವರಿಬ್ಬರು ವಿವಾಹವಾದರು. ಈ ದಂಪತಿ ಹಲವಾರು ರಿಯಾಲಿಟಿ ಶೋಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಪರಾಗಿ ತ್ಯಾಗಿ ಅವರು ಮೂಲತಃ ಉತ್ತರ ಪ್ರದೇಶದವರಾಗಿದ್ದು, ಕಿರುತೆರೆ ಮತ್ತು ಹಿರಿತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿದೆ. ಇದೀಗ ಪತ್ನಿ ಶೆಫಾಲಿ ಜರಿವಾಲಾ ಅವರ ಅಕಾಲಿಕ ನಿಧನ ಪರಾಗ್ ತ್ಯಾಗಿಗೆ ನುಂಗರಾದ ತುತ್ತಾಗಿದೆ.
ತಮ್ಮ ಅಭಿಪ್ರಾಯಗಳನ್ನು ನೇರವಾಗಿ ಹೇಳುವ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು. ಅವರ ಹಠಾತ್ ಮರಣದ ಸುದ್ದಿ ಅಭಿಮಾನಿಗಳು, ಕುಟುಂಬಸ್ಥರಿಗೆ ನೋವನ್ನುಂಟು ಮಾಡಿದೆ. ಶೆಫಾಲಿ ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸಿದ್ದಾರೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-08-2025)
- ರಾಜ್ಯದ ಅಧಿಕಾರಕ್ಕಾಗಿ ಕಾನೂನು ಹೋರಾಟ ಅನಿವಾರ್ಯ; ಸ್ಟಾಲಿನ್
- ಟಾರ್ಪಾಲ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
- ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ಎಸ್ಎಸ್ ಸಮಾಜ ಸೇವೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದ ಮೋದಿ
- ಠಾತ್ ಹೃದಯಾಘಾತ ತಪ್ಪಿಸಲು ಜಿಲ್ಲೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲೂ ಹೃದಯ ಜ್ಯೋತಿ ಯೋಜನೆ ಅನುಷ್ಠಾನ