ಬೆಂಗಳೂರು, ಜೂ.28- ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಮೈಕಲ್.ಡಿ ಕುನ್ನಾ ಅವರು ನಡೆಸುತ್ತಿರುವ ವಿಚಾರಣೆಗೆ ಮೂವರು ಐಪಿಎಸ್ ಅಧಿಕಾರಿಗಳು ಹಾಜರಾಗಲಿದ್ದಾರೆ.
ಕುಮಾರಕೃಪ ಗೆಸ್ಟ್ ಹೌಸ್‌ನಲ್ಲಿ ನಿವೃತ್ತ ನ್ಯಾಯಮೂರ್ತಿಗಳು ನಡೆಸುವ ವಿಚಾರಣೆಗೆ ಅಮಾನತುಗೊಂಡಿರುವ ಐಪಿಎಸ್ ಅಧಿಕಾರಿಗಳಾದ ಎಚ್.ಟಿ.ಶೇಖರ್, ವಿಕಾಸ್‌ಕುಮಾರ್ ವಿಕಾಸ್ ಹಾಗೂ ಆಯುಕ್ತರಾಗಿದ್ದ ದಯಾನಂದ ಅವರು ಇಂದು ಆಗಮಿಸಲಿದ್ದಾರೆ.
ಇದೇ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಸಹ ತನಿಖೆ ನಡೆಸುತ್ತಿದ್ದು, ಅಂದು ಬಂದೋಬಸ್ ನಲ್ಲಿದ್ದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕ್ರೀಡಾಂಗಣದ ಸಿಬ್ಬಂದಿಯಿಂದಲೂ ಹಲವು ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ.
ಐಪಿಎಸ್ ಅಧಿಕಾರಿಗಳಾದ ದಯಾನಂದ, ಎಚ್.ಟಿ.ಶೇಖರ್ ಸೇರಿದಂತೆ ಇನ್ನಿತರ ಅಧಿಕಾರಿಗಳಿಂದ ಜಿಲ್ಲಾಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮ ಕಣ್ಣುಂಬಿಕೊಳ್ಳಲು ಕ್ರೀಡಾಂಗಣ ಗೇಟ್ ಬಳಿ ನಿರೀಕ್ಷೆಗೂ ಮೀರಿ ಜನಸ್ತೋಮ ಆಗಮಿಸಿದ್ದರಿಂದ ಕಾಲ್ತುಳಿತವಾಗಿ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೂವರು ಐಪಿಎಸ್ ಅಧಿಕಾರಿಗಳು ಸೇರಿ 5 ಮಂದಿ ಪೊಲೀಸ್ ಅಧಿಕಾರಿಗಳು ಅಮಾನತುಗೊಂಡಿದ್ದಾರೆ.
- “ಸಿದ್ದರಾಮಯ್ಯನವರೇ, ಗುಲಾಮಿ ಸಂಸ್ಕೃತಿಯ ಕಾಂಗ್ರೆಸ್ ನೆರಳಿನಲ್ಲಿ ನಿಂತು RSS ಕುರಿತು ಮಾತನಾಡುವ ಅರ್ಹತೆ ನಿಮಗಿಲ್ಲ”
- ವಿಶ್ವದ ಅತ್ಯಂತ ದುಬಾರಿ ನಿಸಾರ್ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಜೋಡಿಸುವಲ್ಲಿ ಇಸ್ರೋ -ನಾಸಾ ಯಶಸ್ವಿ
- ಭಾರತ- ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ : ಮತೊಮ್ಮೆ ಕನವರಿಸಿದ ಟ್ರಂಪ್
- ಶ್ರೀ ಕ್ಷೇತ್ರದ ಕುರಿತು ಅಪಪ್ರಚಾರ ಖಂಡಿಸಿ ಬಿಜೆಪಿಯಿಂದ ‘ಧರ್ಮಸ್ಥಳ ಚಲೋ’ ಅಭಿಯಾನ
- ಧರ್ಮಸ್ಥಳ ಅನಾಮಿಕನ ಪ್ರಕರಣ : ಎಸ್ಐಟಿಯಿಂದ ಮಧ್ಯಂತರ ವರದಿ