ಬೆಂಗಳೂರು, ಜೂ.28– ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಟಿಕೆಟ್ ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರಿಂದ 12,64,051 ರೂ. ದಂಡ ವಸೂಲಿ ಮಾಡಿ ಬಿಎಂಟಿಸಿಯ ನಿರ್ವಾಹಕರ ವಿರುದ್ಧ 3500 ಪ್ರಕರಣಗಳನ್ನು ದಾಖಲಿಸಲಾಗಿದೆ.
ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟಲು ನಗರದಾದ್ಯಂತ ಸಂಚರಿಸುವ ಬಸ್ಸುಗಳನ್ನು ನಮ ಸಂಸ್ಥೆಯ ತನಿಖಾ ತಂಡಗಳು ಏಪ್ರಿಲ್ ಹಾಗೂ ಮೇ ಮಾಹೆಯಲ್ಲಿ ಒಟ್ಟು 38,116 ಟ್ರಿಪ್‌ಗಳನ್ನು ತಪಾಸಣೆ ಮಾಡಿ, 5,706 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ.
ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 652 ಪುರುಷ ಪ್ರಯಾಣಿಕರಿಗೆ ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ 65,200 ರೂ. ದಂಡ ವಿಧಿಸಲಾಗಿದೆ. ಒಟ್ಟಾರೆ ಯಾಗಿ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ 6,358 ಪ್ರಯಾಣಿಕರಿಂದ ಒಟ್ಟು 13,29,251 ರೂ. ದಂಡವನ್ನು ವಸೂಲಿ ಮಾಡಲಾಗಿದೆ.
ಬಿಎಂಟಿಸಿ ಬಸ್ಸುಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್, ದಿನದ ಪಾಸು, ಮಾಸಿಕ ಪಾಸು ಹೊಂದಿ ಪ್ರಯಾಣಿಸಬೇಕು. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯ ಬಹುದಾಗಿದೆ ಎಂದು ಬಿಎಂಟಿಸಿ ಹೇಳಿದೆ.
- ಹೆತ್ತ ತಾಯಿಯ ಮೇಲೆ ಅತ್ಯಾಚಾರವೆಸಗಿದ ಕಾಮುಕ ಮಗ
- ಮುಂದಿನ ತಿಂಗಳು ಸ್ಥಳಾಂತರಗೊಳ್ಳಲಿದೆ ಪ್ರಧಾನಮಂತ್ರಿ ಕಚೇರಿ
- ನಾಳೆ ಲೋಕಾರ್ಪಣೆಗೊಳ್ಳಲಿದೆ ಹೆಬ್ಬಾಳ ವಿಸ್ತರಿತ ಫ್ಲೈಓವರ್
- ನಟ ದರ್ಶನ್ ಅವರ ಸಾಮಾಜಿ ಜಾಲತಾಣಗಳನ್ನು ನಿರ್ವಹಿಸಲಿದ್ದಾರೆ ಪತ್ನಿ ವಿಜಯಲಕ್ಷ್ಮಿ
- ಧಾರ್ಮಿಕ ಕ್ಷೇತ್ರಗಳ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಯಾತ್ರೆ ಮಾಡುತ್ತಾ ಬಂದಿದೆ: ಬೆಲ್ಲದ