ಬೆಂಗಳೂರು,ಜೂ.28- ಏಕಾಏಕಿ ಅಡ್ಡಬಂದ ಲಗೇಜ್ ಆಟೋಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಕೆಎಸ್‌ಆರ್‌ಟಿಸಿ ಬಸ್ ಬ್ರೇಕ್ ಹಾಕುತ್ತಿದ್ದಂತೆ ನಿಯಂತ್ರತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿ ನಿಂತುಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಇಂದು ಬೆಳಗಿನ ಜಾವ 4.30ರ ಸುಮಾರಿನಲ್ಲಿ ಯಶವಂತಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಎಸ್‌ಆರ್‌ಎಸ್ ಸಿಗ್ನಲ್ ಬಳಿ ಬರುತ್ತಿದ್ದಂತೆ ಲಗೇಜ್ ಆಟೋ ಅಡ್ಡ ಬಂದಿದೆ.
ತಕ್ಷಣ ಬಸ್ ಚಾಲಕ ಆಟೋಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಏಕಾಏಕಿ ಬ್ರೇಕ್ ಹಾಕುತ್ತಿದ್ದಂತೆ ನಿಯಂತ್ರಣತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಿಂತುಕೊಂಡಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ 45 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಒಬ್ಬ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಬಗ್ಗೆ ಯಶವಂತಪುರ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-08-2025)
- ಸಸ್ಯಕಾಶಿ ಲಾಲ್ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ತೆರೆ
- ಉತ್ತರ ಪ್ರದೇಶದ ಮಾಜಿ ಶಾಸಕರ ವಿರುದ್ಧ ಬೆಂಗಳೂರಲ್ಲಿ ರೇಪ್ ಕೇಸ್ ದಾಖಲು
- ಹೆಚ್ಚುತ್ತಿರುವ ಹೃದಯಾಘಾತಗಳ ಕುರಿತು ಜನ ಆತಂಕಕ್ಕೊಳಗಾಗಬಾರದು : ಶರಣಪ್ರಕಾಶ್ ಪಾಟೀಲ್
- ಅಧಿಕಾರಿಗಳ ತಪ್ಪಿನಿಂದ ತಿರಸ್ಕೃತವಾದ ಬಗರ್ಹುಕುಂ ಅರ್ಜಿ ಪರಿಶೀಲನೆ : ಸಚಿವ ಕೃಷ್ಣಭೈರೇಗೌಡ