ಬೆಂಗಳೂರು, ಜೂ.29- ಗಾಂಜಾ ಪ್ರಕರಣದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಕರೆತರುವಾಗ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ತಲ್ಲಘಟ್ಟಪುರ ಪೊಲೀಸ್ ಠಾಣೆ ಸಬ್‌ಇನ್‌ಸ್ಪೆಕ್ಟರ್ ಮೆಹಬೂಬ್ ಗುಡ್ಡಳ್ಳಿ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.
ಗಾಂಜಾ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಅತ್ತಿಬೆಲೆಯಲ್ಲಿ ಬಂಧಿಸಿ ಕಾರಿನಲ್ಲಿ ಕರೆತರುವಾಗ ಸೂರ್ಯಸಿಟಿ ಬಳಿ ಕಾರು ಪಂಕ್ಚರ್ ಆಗಿದೆ. ನಂತರ ಚಾಲಕ ರಸ್ತೆಪಕ್ಕ ನಿಲ್ಲಿಸಿ ಚಕ್ರ ಬದಲಾಯಿಸುವ ವೇಳೆ ಎಸ್‌ಐ ಹೊರಗೆ ಇಳಿದು ಫೋನ್‌ನಲ್ಲಿ ಮಾತನಾಡುತ್ತಾ ನಿಂತಿದ್ದಾಗ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ.
ಈ ಸಂದರ್ಭದಲ್ಲಿ ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮೆಹಬೂಬ್ ಗುಡ್ಡಳ್ಳಿ ಅವರನ್ನು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-08-2025)
- ಪಾಕ್ ಪ್ರವಾಹದಲ್ಲಿ 220 ಜನ ಬಲಿ
- ಇಂಡೋನೇಷ್ಯಾದ ಸುಲಾವೆಸಿ ದ್ವೀಪದಲ್ಲಿ 5.8 ತೀವ್ರತೆಯ ಭೂಕಂಪ
- ಪೀಣ್ಯ ಫ್ಲೈ ಓವರ್ ಮೇಲೆ ಅಪಘಾತ, ಗ್ಯಾಸ್ ಸಿಲಿಂಡರ್ ಡೆಲಿವರಿ ಬಾಯ್ ಸಾವು
- ಧರ್ಮಸ್ಥಳದ ಅಪಪ್ರಚಾರ ಪಿತೂರಿ ಮಾಡಿದವರ ವಿರುದ್ಧ ತನಿಖೆಗೆ ಬಿವೈವಿ ಆಗ್ರಹ