Tuesday, July 1, 2025
Homeರಾಜ್ಯಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಇ-ಮೇಲ್

ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಇ-ಮೇಲ್

Hubballi Airport Threatened to Bomb Email

ಹುಬ್ಬಳ್ಳಿ, ಜೂನ್-30-ಇ-ಮೇಲ್ ಸಂದೇಶದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಿನ್ನಲೆಯಲ್ಲಿ ಕೆಲ ಕಾಲ ಆತಂಕದ ಸನ್ನಿವೇಶ ನಿರ್ಮಾಣವಾಗಿತ್ತು.ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಬೆದರಿಕೆ ಸಂದೇಶ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ನಿಲ್ದಾಣದಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣದ ಪ್ರವೇಶಿಸುವ ಪ್ರಯಾಣಿಕರ ತಪಾಸಣೆ ಹೆಚ್ಚಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, ಪೊಲೀಸ್ ಅಧಿಕಾರಿಗಳು, ಆಂತರಿಕ ಭದ್ರತಾ ಸಿಬ್ಬಂದಿ ಮತ್ತು ಗುಪ್ತಚರ ಇಲಾಖೆ ಸಿಬ್ಬಂದಿ ನಿಗಾ ವಹಿಸಿದ್ದಾರೆ. ಇತ್ತೀಚೆಗೆ ಕರ್ನಾಟಕದಲ್ಲಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗಿವೆ.ಘಟನೆ ಕುರಿತಂದೆ ದೂರು ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

RELATED ARTICLES

Latest News